ನಾಳೆ (ಫೆ. 18) ಯಶವಂತಪುರ ರೈಲು ನಿಲ್ದಾಣದಲ್ಲಿ ರೈಲು ತಡೆ
ಬೆಂಗಳೂರು, ಫೆ. 17: ಕೃಷಿ ಕಾಯ್ದೆ ವಿರೋಧಿಸಿ ದೇಶದ್ಯಾಂತ ರೈಲು ತಡೆ ಚಳುವಳಿಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಹಿನ್ನೆಲೆಯಲ್ಲಿ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ಆಶ್ರಯದಲ್ಲಿ ರೈಲು ತಡೆ ನಡೆಸಲು ನಿರ್ಧರಿಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಅದೇ ಹಿನ್ನೆಲೆಯಲ್ಲಿ ನಾಳೆ (ಫೆ. 18) ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ 12 ಗಂಟೆಯಿಂದ ಮೂರು ಗಂಟೆ ತನಕ ರೈಲು ತಡೆ ಚಳವಳಿ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ದೆಹಲಿ ರೈತ ಚಳುವಳಿ ಬಗ್ಗೆ ಕೇಂದ್ರ ಸರ್ಕಾರ ರೈತ ಚಳುವಳಿಯ ಹತ್ತಿಕ್ಕುವ ಪ್ರಯತ್ನಕೆ ಹೆಚ್ಚು ಒತ್ತು ನೀಡುತ್ತಿದೆ, ನಾಟಕೀಯವಾಗಿ ವರ್ತಿಸುತ್ತಿದೆ. ಇದನ್ನು ಖಂಡಿಸಿ ದೇಶಾದ್ಯಂತ 18ರಂದು 12ಗಂಟೆಯಿಂದ ಮೂರು ಗಂಟೆ ತನಕ ರೈಲು ತಡೆ ಚಳವಳಿ ನಡೆಸಲು ಕರೆ ನೀಡಿರುವುದನ್ನು ಬೆಂಬಲಿಸಿ ಕರ್ನಾಟಕದಲ್ಲಿಯೂ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದಿಂದ ಚಳವಳಿ ನಡೆಸಲಾಗುವುದು.

Recommended Video
ಕೇಂದ್ರದಲ್ಲಿ ಎಮ್ಮೆ ಚರ್ಮದ ಸರ್ಕಾರವಿದೆ. ಮಳೆ, ಚಳಿ, ಗಾಳಿ, ಬಿಸಿಲು ಯಾವುದಕ್ಕೂ ಪ್ರತಿಕ್ರಿಯೆ ಇಲ್ಲ. ಪ್ರಧಾನಿ ಮೋದಿ ಅವರು ದೇಶದಲ್ಲಿ ಅನಧಿಕೃತ ತುರ್ತು ಪರಿಸ್ಥಿತಿ ಜಾರಿ ಮಾಡಿದಂತೆ ಕಾಣುತ್ತಿದೆ. ಬಡಜನರಿಗೆ, ದುಡಿಯುವ ವರ್ಗಕ್ಕೆ ನ್ಯಾಯಾಲಯಗಳಲ್ಲಿ ನ್ಯಾಯ ಸಿಗುವುದು ಕಷ್ಟಕರವಾಗಿದೆ ಎಂದು ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಾಧೀಶ ರಂಜನ್ ಗೂಗಯ್ ಹೇಳಿರುವುದು ಎನ್ನುತ್ತಾರೆ ಪ್ರಜಾಪ್ರಭುತ್ವ ಅಪಾಯಕಾರಿ ಪರಿಸ್ಥಿತಿಯಲ್ಲಿ ಸಾಗುತ್ತಿದೆ, ಬಂಡವಾಳಶಾಹಿಗಳ ಶ್ರೀಮಂತರ ವಶಕ್ಕೆ ಸಿಲುಕುತ್ತಿದೆ, ಇಂಥ ವಿಚಾರಗಳ ಬಗ್ಗೆ ಪ್ರತಿಯೊಬ್ಬರು ಚಿಂತಿಸಬೇಕಾಗಿದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.












Click it and Unblock the Notifications