Get Updates
Get notified of breaking news, exclusive insights, and must-see stories!

Bengaluru Rains: ಮಳೆಗೆ ಡೆಂಘಿ ಹೆಚ್ಚಳ ಭೀತಿ! ಈ ವರ್ಷ 329 ಪ್ರಕರಣ, ಬಿಬಿಎಂಪಿ ಸಿದ್ಧತೆಗಳು ಹೇಗಿವೆ?

ಬೆಂಗಳೂರು, ಏಪ್ರಿಲ್ 04: ಬೆಂಗಳೂರು ಸೇರಿ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸುತ್ತಿದೆ. ನಗರದಲ್ಲಿ ಈ ಹಿಂದೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದ ಡೆಂಘಿ ರೋಗ ಇದೀಗ ಮಳೆಯಿಂದಾಗಿ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಈ ಕಾರಣದಿಂದಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಚ್ಚೆತ್ತುಕೊಂಡಿದೆ. 2025ರಲ್ಲಿ ಈವರೆಗೆ 329 ಡೆಂಘಿ ಪ್ರಕರಣಗಳು ವರದಿ ಆಗಿವೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಗುರುವಾರ ವರ್ಚ್ಯುವಲ್ (VC) ಸಭೆ ಜರುಗಿತು. ಅಗತ್ಯ ಕ್ರಮಗಳು ಕುರಿತು ಪಾಲಿಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿ ಮಾತನಾಡಿದರು.

Fears of Increase in Dengue Fever as Bengaluru Rains BBMP Steps in To Control Fever

ನಗರದಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಈಗಿನಿಂದಲೇ ಎಚ್ಚರ ವಹಿಸಬೇಕು. ಡೆಂಘಿ ನಿಯಂತ್ರಣದ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಜೊತೆಗೆ ಸ್ವಚ್ಛತೆ ಕಾಪಾಡದವರಿಗೆ ದಂಡ ವಿಧಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ವಿವಿಧ ವಿಭಾಗಗಳ ಜೊತೆ ಸಮನ್ವಯ

ಡೆಂಘಿ ಪ್ರಕರಣಗಳನ್ನು ನಿಯಂತ್ರಿಸಲು ಆರೋಗ್ಯ ವಿಭಾಗದ ಜೊತೆಗೆ ತೋಟಗಾರಿಕಾ ವಿಭಾಗ, ಅರಣ್ಯ ವಿಭಾಗ, ಘನತ್ಯಾಜ್ಯ, ಬೃಹತ್ ನೀರುಗಾಲುವೆ, ರಸ್ತೆ ಮೂಲಭೂತ ಸೌಕರ್ಯ ವಿಭಾಗ ಸೇರಿದಂತೆ ಇನ್ನಿತರ ವಿಭಾಗಗಳ ಜೊತೆ ವಲಯವಾರು ಸಮನ್ವಯ ಸಾಧಿಸಿ ನೀರು ನಿಲ್ಲುವ ಪ್ರದೇಶಗಳನ್ನು ಗುರುತಿಸಿ ನೀರು ನಿಲ್ಲದಂತೆ ಕ್ರಮವಹಿಸಬೇಕು.

Fears of Increase in Dengue Fever as Bengaluru Rains BBMP Steps in To Control Fever

ಡೆಂಘಿ ಬಾದಿತ ಪ್ರದೇಶಗಳ ಮೇಲೆ ಕಣ್ಣು

ನಗರದಲ್ಲಿ ಹೆಚ್ಚು ಡೆಂಘಿ ಪ್ರಕರಣಗಳು ಕಂಡು ಬರುವ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು ಸೊಳ್ಳೆಗಳ ನಿಯಂತ್ರಣ ಮಾಡಬೇಕು. ಲಾರ್ವಾ ಉತ್ಪತ್ತಿ ಆಗುವ ತಾಣಗಳನ್ನು ಗುರುತಿಸಿ ಫಾಗಿಂಗ್ ಮತ್ತು ಕೀಟ ನಾಶಕ ಸಿಂಪಡಣೆ ಮಾಡಿ ಸೊಳ್ಳೆಗಳ ಉತ್ಪತ್ತಿಯನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು.

ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಹರ್ಷ ಗುಪ್ತ ಅವರು ಮಾತನಾಡಿದರು. ನಗರದಲ್ಲಿ ಡೆಂಘಿ ವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕು. ಲಾರ್ವಾ ಪ್ರದೇಶಗಳನ್ನು ಗುರುತಿಸಿ ಫಾಗಿಂಗ್ ಮಾಡಲು ತಿಳಿಸಿದರು.

Take a Poll

ಫೀವರ್ ಕ್ಲಿನಿಕ್ ಸ್ಥಾಪನೆ

ಡೆಂಘಿ ಪ್ರಕರಣಗಳು ಹೆಚ್ಚು ಕಂಡು ಬರುವ ಪ್ರದೇಶಗಳಲ್ಲಿ ಫೀವರ್ ಕ್ಲಿನಿಕ್ ಗಳನ್ನು ಸ್ಥಾಪಿಸಬೇಕು. ಖಾಲಿ ಸ್ಥಳಗಳು, ಕಟ್ಟಡ ನಿರ್ಮಾಣ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡದವರಿಗೆ ದಂಡ ವಿಧಿಸಬೇಕು. ಜೊತೆಗೆ ವಾರಕ್ಕೊಮ್ಮೆ ಕೀಟನಾಶಕ ಸಿಂಪಡಣೆ ಮಾಡಲು ಹೇಳಿದರು.

ಡೆಂಘಿ ಮೇಲ್ವಿಚಾರಣೆಗಾಗಿ ಪ್ರತಿ ವಲಯಕ್ಕೆ ಪ್ರತ್ಯೇಕವಾಗಿ ಒಬ್ಬ ನೋಡಲ್ ಅಧಿಕಾರಿಯನ್ನು ನಿಯೋಜನೆ ಮಾಡಲು ತಿಳಿಸಿದರು. ಪ್ರತಿ ವಲಯಕ್ಕೆ ಒಬ್ಬರಂತೆ 8 ಕೀಟಶಾಸ್ತ್ರ ತಜ್ಞರನ್ನು ನಿಯೋಜನೆ ಮಾಡಿಕೊಳ್ಳಬೇಕು. ಡೆಂಘಿ ಪರೀಕ್ಷೆ ಮಾಡುವ ಸಲುವಾಗಿ ಅವಶ್ಯಕವಾದ ಟೆಸ್ಟ್ ಕಿಟ್ ಗಳ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ಅವರು ಮಾತನಾಡಿ, ಬೆಂಗಳೂರು ನಗರದಲ್ಲಿ 2024 ರಲ್ಲಿ 15,282 ಪ್ರಕರಣಗಳು ಕಂಡು ಬಂದಿವೆ. ವಲಯವಾರು ಸಮಗ್ರ ಯೋಜನೆ ರೂಪಿಸಿಕೊಂಡು ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಲಾಗುವುದು. ಕಳೆದ ವರ್ಷ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ 24 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಹೇಳಿದರು.

ಬೆಂಗಳೂರಲ್ಲಿ ವರ್ಷವಾರು ಡೆಂಘಿ ಪ್ರಕರಣಗಳ ವರದಿ

* 2022 : 2,335

* 2023 : 11,136

* 2024 : 15,282

* 2025 : 329 (ಜನವರಿ-ಮಾರ್ಚ್ 31 ಅವಧಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+