ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ
ಬೆಂಗಳೂರು, ಜ. 16: ಇಂದು ಬೆಳಗ್ಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಚುನಾಯಿತರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.
ರಾಜ್ಯ ಬಿಜೆಪಿ ಘಟಕದಿಂದ ಅಭಿನಂದನಾ ಸಮಾರಂಬ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಮಾರಂಭ ಆರಂಭವಾಗಲಿದೆ. ರಾಜ್ಯ ಬಿಜೆಪಿ ನಾಯಕರೂ ಸೇರಿದಂತೆ 2000 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಇಂದು ಬೆಳಗ್ಗೆ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಹಂಗಾಮಿ ಅಧ್ಯಕ್ಷ ನಳಿನ್ ಕುಮಾರ್ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಸಚಿವ ಸಿ.ಟಿ. ರವಿ ಚುನಾವಣಾ ವೀಕ್ಷಕರಾಗಿ ಚುನಾವಣೆ ನಡೆಸಿದ್ದರು.












Click it and Unblock the Notifications