Karnataka Elections: ಬೆಂಗಳೂರಿನ ಈ ಕ್ಷೇತ್ರದಲ್ಲಿ ರೆಡ್ಡಿ Vs ರೆಡ್ಡಿ, ಬ್ರಾಹ್ಮಣ Vs ಬ್ರಾಹ್ಮಣ
ಬೆಂಗಳೂರು, ಏಪ್ರಿಲ್ 28: ಬೆಂಗಳೂರು ನಗರ ವ್ಯಾಪ್ತಿಯ 28 ಮತ್ತು ಗ್ರಾಮಾಂತರ ವ್ಯಾಪ್ತಿಯ ನಾಲ್ಕು ಕ್ಷೇತ್ರಗಳು ಸೇರಿ ಒಟ್ಟು 32ಸ್ಥಾನಗಳ ಪೈಕಿ ತಲಾ ಒಂದು ಕ್ಷೇತ್ರದಲ್ಲಿ ರೆಡ್ಡಿ ಮತ್ತು ಬ್ರಾಹ್ಮಣ ಸಮುದಾಯದವರು ನೇರವಾಗಿ ತಮ್ಮದೇ ಸಮುದಾಯದವರ ವಿರುದ್ದ ಸ್ಪರ್ಧಿಸುತ್ತಿದ್ದಾರೆ.
ರಾಜಧಾನಿ ವ್ಯಾಪ್ತಿಯ ಎಲ್ಲಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಜಾತ್ಯಾತೀತ ಜನತಾದಳ, ಸಿ.ವಿ.ರಾಮನ್ ನಗರ, ವಿಜಯನಗರ, ಮಹದೇವಪುರ ಕ್ಷೇತ್ರದಲ್ಲಿ RPI ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದು, ಉಳಿದಂತೆ ಎಲ್ಲಾ ಕಡೆ ತಮ್ಮ ಕ್ಯಾಂಡಿಡೇಟ್ ಅನ್ನು ಕಣಕ್ಕಿಳಿಸಿದೆ.

ಕಳೆದ ಚುನಾವಣೆಯಲ್ಲಿ ಒಟ್ಟು 32 ಕ್ಷೇತ್ರಗಳ ಪೈಕಿ ಬಿಜೆಪಿ ಹದಿನೇಳು, ಕಾಂಗ್ರೆಸ್ ಹನ್ನೆರಡು ಮತ್ತು ಜೆಡಿಎಸ್ 3 ಸ್ಥಾನಗಳಲ್ಲಿ ಗೆಲುವನ್ನು ಕಂಡಿತ್ತು. ಇದುವರೆಗೆ ಬಿಡುಗಡೆಯಾಗಿರುವ ಚುನಾವಣಾಪೂರ್ವ ಸಮೀಕ್ಷೆಗಳ ಪ್ರಕಾರ ಕೆಲವೊಂದು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.
ಬೆಂಗಳೂರು ನಗರ ವ್ಯಾಪ್ತಿಯ ಒಂದು ಕ್ಷೇತ್ರದಲ್ಲಿ ಕಣದಲ್ಲಿ ಮೂರು ಪ್ರಮುಖ ಪಕ್ಷಗಳು ಕಣದಲ್ಲಿದ್ದರೂ ಅದರಲ್ಲಿ ನೇರ ಫೈಟ್ ಇರುವುದು ಬಿಜೆಪಿ ಮತ್ತು ಕಾಂಗ್ರೆಸ್ಸಿಗೆ ಮತ್ತು ಆ ಇಬ್ಬರೂ ಅಭ್ಯರ್ಥಿಗಳು ಬ್ರಾಹ್ಮಣ ಸಮುದಾಯದವರು. ಇನ್ನೊಂದು ಕ್ಷೇತ್ರದಲ್ಲಿ ಇಬ್ಬರೂ ರೆಡ್ಡಿ ಸಮುದಾಯದದವರು.

ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಬಸವನಗುಡಿ ಕ್ಷೇತ್ರ
ಬಸವನಗುಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರವಿ ಸುಬ್ರಮಣ್ಯ, ಕಾಂಗ್ರೆಸ್ಸಿನಿಂದ ಯು.ಬಿ.ವೆಂಕಟೇಶ್, ಜೆಡಿಎಸ್ಸಿನಿಂದ ಅರಮನೆ ಶಂಕರ್, ಆಮ್ ಆದ್ಮಿ ಪಕ್ಷದಿಂದ ಸತ್ಯಲಕ್ಷ್ಮೀ ರಾವ್ ಕಣದಲ್ಲಿದ್ದಾರೆ. ನಗರ ವ್ಯಾಪ್ತಿಯ ತ್ರಿಕೋನ ಸ್ಪರ್ಧೆ ಏರ್ಪಡಬಹುದಾದ ಕ್ಷೇತ್ರಗಳಲ್ಲಿ ಬಸವನಗುಡಿ ಕೂಡಾ ಒಂದು ಎಂದು ವಿಶ್ಲೇಷಿಸಲಾಗುತ್ತಿದೆ.
ಇಲ್ಲಿ ಪ್ರಮುಖ ಅಭ್ಯರ್ಥಿಗಳಾದ ರವಿ ಸುಬ್ರಮಣ್ಯ ಮತ್ತು ಯು.ಬಿ.ವೆಂಕಟೇಶ್ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಇಲ್ಲಿ ಎರಡನೇ ಸ್ಥಾನದಲ್ಲಿತ್ತು ಎನ್ನುವುದು ಗಮನಿಸಬೇಕಾದ ವಿಚಾರ. ಹಾಲೀ ಶಾಸಕರಾಗಿರುವ ರವಿ ಸುಬ್ರಮಣ್ಯ ಸತತವಾಗಿ ಇಲ್ಲಿಂದ (ಮೂರು ಬಾರಿ) ಗೆದ್ದು ಬರುತ್ತಿದ್ದಾರೆ. 2018ರ ಚುನಾವಣೆಯಲ್ಲಿ ರವಿ ಸುಬ್ರಮಣ್ಯ 38,009 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದರು.
ಸುಮಾರು 2.30ಕ್ಷ ಮತದಾರರು ಕ್ಷೇತ್ರದಲ್ಲಿದ್ದಾರೆ. ಬ್ರಾಹ್ಮಣ ಮತ್ತು ಒಕ್ಕಲಿಗ ಸಮುದಾಯದ ಮತಗಳು ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಬ್ರಾಹ್ಮಣರು ಸುಮಾರು 75ಸಾವಿರ, ಒಕ್ಕಲಿಗರು ಸುಮಾರು 65 ಸಾವಿರದಷ್ಟಿದ್ದಾರೆ. ಹಾಗಾಗಿ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವು ಬ್ರಾಹ್ಮಣ ಸಮುದಾಯದ ಮತ್ತು ಜೆಡಿಎಸ್ ಒಕ್ಕಲಿಗ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.

ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಬಿಟಿಎಂ ಲೇಔಟ್ ಕ್ಷೇತ್ರ
ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಿಂದ ರಾಮಲಿಂಗಾ ರೆಡ್ಡಿ, ಬಿಜೆಪಿಯಿಂದ ಶ್ರೀಧರ ರೆಡ್ಡಿ, ಜೆಡಿಎಸ್ಸಿನಿಂದ ವೆಂಕಟೇಶ್, ಆಮ್ ಆದ್ಮಿ ಪಕ್ಷದಿಂದ ಶ್ರೀನಿವಾಸ ರೆಡ್ಡಿ ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಫೈಟ್ ಇರುವ ಕ್ಷೇತ್ರಗಳಲ್ಲಿ ಇದೂ ಒಂದು.
ಕಳೆದ ಬಾರಿಯ ಚುನಾವಣೆಯಲ್ಲಿ ರಾಮಲಿಂಗಾ ರೆಡ್ಡಿಯವರು ಬಿಜೆಪಿಯ ಲಲ್ಲೇಶ್ ರೆಡ್ಡಿ ವಿರುದ್ದ 20,478 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದರು. 2008ರಿಂದಲೂ ರಾಮಲಿಂಗಾ ರೆಡ್ಡಿಯವರು ಇಲ್ಲಿಂದ ಗೆದ್ದು ಬರುತ್ತಿದ್ದಾರೆ. 2008ರಲ್ಲಿ ತುರುಸಿನ ಸ್ಪರ್ಧೆ ಏರ್ಪಟ್ಟು ರಾಮಲಿಂಗಾ ರೆಡ್ಡಿಯವರು ಬಿಜೆಪಿಯ ಪ್ರಸಾದ್ ರೆಡ್ಡಿ ವಿರುದ್ದ ಕೇವಲ 1,856 ಮತಗಳಿಂದ ಗೆಲುವನ್ನು ಸಾಧಿಸಿದ್ದರು.
ಸುಮಾರು 2.65ಲಕ್ಷ ಮತದಾರರು ಇರುವ ಈ ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಾಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವು ಅವರಿಗೇ ಟಿಕೆಟ್ ನೀಡಿದೆ. ಮೇ ಹತ್ತರಂದು ಚುನಾವಣೆ ನಡೆಯಲಿದ್ದು, ಮೇ ಹದಿಮೂರರಂದು ಫಲಿತಾಂಶ ಹೊರಬೀಳಲಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications