ತೇಜಸ್ವಿ ಸೂರ್ಯ ಸಭೆಯಲ್ಲಿ ಭಾರೀ ಆಕ್ರೋಶ: ಸಿಟ್ಟಿಗೆದ್ದು ಹೊರನಡೆದ ಸಂಸದ, ಕೈಕೈ ಮಿಲಾಯಿಸಲು ಮುಂದಾದ ಬಸವನಗುಡಿ ಶಾಸಕ
ಬೆಂಗಳೂರು, ಏಪ್ರಿಲ್, 15: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ಆರಂಭಿಸಿದ್ದಾರೆ. ಅಲ್ಲದೆ ಆರೋಪ-ಪ್ರತ್ಯಾರೋಪಗಳನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ, ಕೆಲವು ವೇದಿಕೆಗಳಲ್ಲಿ ಸ್ವಪಕ್ಷಿಯರೇ ಕೈ ಕೈ ಮಿಲಾಯಿಸಿಕೊಂಡ ಘಟನೆಗಳು ಕೂಡ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಂಸದ ಹಾಗೂ ಶಾಸಕನ ನಡುವೆ ವಾಗ್ವಾದ: ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‌ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ರವಿ ಸುಬ್ರಮಣ್ಯ ನಡುವೆ ಗದ್ದಲ ನಡೆದಿದೆ.

ಭುಗಿಲೆದ್ದ ಆಕ್ರೋಶಗಳು: ಅಷ್ಟೇ ಅಲ್ಲದೆ ಗ್ರಾಹಕರು ಹಾಗೂ ಚುನಾವಣೆ ಅಧಿಕಾರಿಗಳ ಮೇಲೆಯೂ ಹಲ್ಲೆ ಮಾಡಿ ದರ್ಪ ತೋರಿರುವ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದ್ದು, ಹೀಗೆ ದರ್ಪ ತೋರುವ ಮನಸ್ಸುಗಳಿಗೆ ಧಿಕ್ಕಾರವಿರಲಿ ಎನ್ನುವ ಆಕ್ರೋಶಗಳು ಕೂಡ ಇದೀಗ ಭುಗಿಲೆದ್ದಿವೆ.
ಇನ್ನು ಹಿಂದೂ ಪೈಯರ್ ಬ್ರಾಂಡ್ ಅಂತಲೇ ಗುರುತಿಸಿಕೊಂಡಿರುವ ಸಂಸದ ತೆಜಸ್ವಿ ಸೂರ್ಯ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಮತ್ತೆ ಕಣಕ್ಕಿಳಿದಿದ್ದಾರೆ. 2019ರಲ್ಲೂ ತೇಜಸ್ವಿ ಸೂರ್ಯ ಲೋಕಸಭೆಗೆ ಸ್ಪರ್ಧಿಸಿ ಜಯಗಳಿಸಿದರು. ಇದೀಗ ಮತ್ತೆ 2024ರಲ್ಲೂ ಗೆಲುವು ಸಾಧಿಸಲು ಪಣತೊಟ್ಟಿದ್ದಾರೆ.
ಇನ್ನು ತೇಜಸ್ವಿ ಸೂರ್ಯ ಕರೆದ ಸಭೆಯಲ್ಲೇ ಅವರ ವಿರುದ್ಧವೇ ಬ್ಯಾಂಕ್ ಡೆಪಾಸಿಟರ್‌ಗಳು ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ಇನ್ನು ಗದ್ದಲ ಹೆಚ್ಚಾಗುತ್ತಿಂದತೆ ತೇಜಸ್ವಿ ಸೂರ್ಯ ಕೊಂಪಗೊಂಡು ಸಭೆಯಿಂದ ಎದ್ದು ಹೊರ ನಡೆಯಲು ಮುಂದಾಗಿದ್ದರು.
ದರ್ಪ ಮೆರೆದ ಆರೋಪ: ಈ ವೇಳೆ ಅವರನ್ನು ತಡೆದವರನ್ನು ತಳ್ಳಿ ದರ್ಪ ಮೆರೆದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಸ್ಥಳದಲ್ಲಿದ್ದ ಚುನಾವಣಾ ಅಧಿಕಾರಿಗಳ ಮೇಲೆಯೂ ಹಲ್ಲೆ ಮಾಡಿ ದರ್ಪ ತೋರಿದ್ದಾರೆ. ವಾಗ್ವಾದದ ವೇಳೆ ಶಾಸಕ ರವಿ ಸುಬ್ರಮಣ್ಯಂ ಗ್ರಾಹಕರೊಬ್ಬರನ್ನು ಕೈ ಹಿಡಿದು ಎಳೆದಿದ್ದಾರೆ ಎಂದು ಆರೋಪಿಸಲಾಗಿದೆ.
ಠೇವಣಿದಾರರ ಪ್ರಶ್ನೆ ಏನು?: ಇನ್ನು ನಮ್ಮ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ತೇಜಸ್ವಿ ಸೂರ್ಯ ವಿರುದ್ಧ ಠೇವಣಿದಾರರು ಆಕ್ರೊಶ ಹೊರಹಾಕಿದ್ದಾರೆ. ಈ ವೇಳೆ ತೇಜಸ್ವಿ ಸೂರ್ಯನ ವಿರುದ್ಧ ಕೆಲವು ಘೋಷಣೆಗಳೂ ಕೂಡ ಕೇಳಿಬಂದವು. ಇನ್ನು ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸಪಟ್ಟರು.
ಕಾಂಗ್ರೆಸ್ ಆಕ್ರೋಶ: ಇನ್ನು ಈ ಬಗ್ಗೆ ಟ್ವೀಟ್ ಮಾಡಿದ ಕರ್ನಾಟಕ ಕಾಂಗ್ರೆಸ್, "ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆ. ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.
ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ಸೂರ್ಯ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ. ಚುನಾವಣೆ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ.
ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಕರ್ನಾಟಕ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ. ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದಂತೂ ನಿಶ್ಚಿತ ಎಂದು ವ್ಯಂಗ್ಯವಾಡಿದೆ.











Click it and Unblock the Notifications