Ramesh Jarakiholi: ಆಕ್ಷೇಪಾರ್ಹ ಹೇಳಿಕೆ- ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು!
ಬೆಂಗಳೂರು ಅಕ್ಟೋಬರ್ 31: ಡಿಸಿಎಂ ಡಿಕೆ ಶಿವಕುಮಾರ್ ಅವರ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಿಸಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಬಿಜೆಪಿ ಶಾಸಕ ರಮೆಶ್ ಜಾರಕಿಹೊಳಿ ವಿರುದ್ಧ ನಗರದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸೋಮವಾರ (ಅಕ್ಟೋಬರ್ 30) ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಜಾರಕಿಹೊಳಿ ಅವರು ಡಿಕೆ ಶಿವಕುಮಾರ್ ಅವರಿಗೆ ಏಕವಚನದಲ್ಲಿ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್ ಅಂತೆಲ್ಲಾ ಗಂಭೀರ ಆರೋಪಗಳನ್ನು ಮಾಡಿದ್ದರು. ಮೈತ್ರಿ ಸರ್ಕಾರ ಪತನಕ್ಕೆ ನೀವೇ ಕಾರಣ. ಈಗಲೂ ಈ ಸರ್ಕಾರ ಪತನಕ್ಕೆ ಡಿಕೆ ಶಿವಕುಮಾರ್ ಅವರೇ ಕಾರಣರಾಗುತ್ತಾರೆ ಎಂದಿದ್ದರು. ಮಾತ್ರವಲ್ಲದೆ ಮಹಾರಾಷ್ಟ್ರದ ರೀತಿ ಕರ್ನಾಟಕ ಸರ್ಕಾರ ಕೂಡ ಪತನವಾಗುತ್ತದೆ ಎಂದು ಆರೋಪಿಸಿದ್ದರು. ಹೀಗಾಗಿ ಇದೆಲ್ಲ ಆರೋಪಗಳು ಆಧಾರ ರಹಿತವಾಗಿವೆ ಎಂದು ಎಸ್.ಮನೋಹರ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇದರಿಂದ ಕೋಪಗೊಂಡ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ಜಾರಕಿಹೊಳಿ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶಗೊಂಡರು. ಈ ನಡುವೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಬೆಂಗಳೂರಿನ ಮನೆಗೆ ಹತ್ತು ಜನರ ಕಿಡಿಗೇಡಿಗಳ ಗುಂಪೊಂದು ನಿಂದನಾತ್ಮಕ ಪೋಸ್ಟರ್‌ಗಳನ್ನು ಅಂಟಿಸಿ ಪರಾರಿಯಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಜಾರಕಿಹೊಳಿ ಅವರು ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವೇ ತಿಂಗಳುಗಳಲ್ಲಿ ಮಾಜಿ ಆಗಲಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಹೊರಬಂದ ಕೆಲವೇ ಗಂಟೆಗಳಲ್ಲಿ ಸುಮಾರು 10 ಜನರ ಗುಂಪು ಸದಾಶಿವನಗರದ ನಿವಾಸದ ಮುಂದೆ ನಿಂದನಾತ್ಮಕ ಪೋಸ್ಟರ್‌ಗಳನ್ನು ಅಂಟಿಸಿದೆ. ಈ ಬೆಳವಣಿಗೆ ನಂತರ ರಮೇಶ್ ಜಾರಕಿಹೊಳಿ ಮತ್ತೆ ಇಂದು ಸುದ್ದಿಗೋಷ್ಠಿಯನ್ನು ಕರೆದಿದ್ದು, ಏನೆಲ್ಲಾ ಹೇಳಲಿದ್ದಾರೆಂದು ಕಾದು ನೋಡಬೇಕಿದೆ.












Click it and Unblock the Notifications