ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಸ್ತೆ ಗುಂಡಿ ಮುಚ್ಚಿದ ವರದಿ ನೀಡಲು ಬಿಬಿಎಂಪಿ 1 ವಾರ ಗಡುವು

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು,ಜು.28. ಬೆಂಗಳೂರು ಮಹಾನಗರದಲ್ಲಿ ಯಾವ್ಯಾವ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂಬ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸಲು ಹೈಕೋರ್ಟ್ ಆ.3 ರವರೆಗೆ ಬಿಬಿಎಂಪಿಗೆ ಗಡುವು ನೀಡಿದೆ.

ಕೋರಮಂಗಲದ ವಿಜಯನ್ ಮೆನನ್ 2015ರಲ್ಲಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.

ಈ ವೇಳೆ ಬಿಬಿಎಂಪಿ ಪರ ವಕೀಲರು ಹಾಜರಾಗಿ, ರಸ್ತೆ ಗುಂಡಿ ಮುಚ್ಚುವ ಕಾರ್ಯ ಕೈಗೊಂಡು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಜು.30ರಂದು ಹೈಕೋರ್ಟ್‌ಗೆ ಪಾಲಿಕೆಗೆ ನಿರ್ದೇಶಿಸಿದೆ. ಅದರಂತೆ ಆ ಆದೇಶದ ಅನುಪಾಲನಾ ವರದಿ ಸಿದ್ಧವಿದೆ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸ್ವಲ್ಪ ಕಾಲಾವಕಾಶಬೇಕಿದೆ ಎಂದು ತಿಳಿಸಿದರು.

Filling up of Pot holes in Bangaluru: BBMP given 1 week deadline to submit report

ಅರ್ಜಿದಾರ ಪರ ವಕೀಲರು, ಬಿಬಿಎಂಪಿ ಸಲ್ಲಿಸುವ ಅನುಪಾಲನಾ ವರದಿಗೆ ಆಕ್ಷೇಪಣೆ ಸಲ್ಲಿಸಲು ತಮಗೆ ಕಾಲಾವಕಾಶ ನೀಡುವಂತೆ ಕೋರಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ಬಿಬಿಎಂಪಿಯು ಆ.3ರೊಳಗೆ ಅನುಪಾಲನಾ ವರದಿ ಸಲ್ಲಿಸಬೇಕು. ಆ ವರದಿಗೆ ಆಕ್ಷೇಪಣೆ ಇದ್ದಲ್ಲಿ ಅರ್ಜಿದಾರರು ಒಂದು ವಾರದಲ್ಲಿ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಆ.೧೧ಕ್ಕೆ ಮುಂದೂಡಿತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ನ್ಯಾಯಾಲಯದ ನಿರ್ದೇಶದನಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಚೀಫ್ ಎಂಜಿನಿಯರ್ ಎಂ.ಲೋಕೇಶ್ ಹೈಕೋರ್ಟ್ ಮುಂದೆ ಹಾಜರಾಗಿದ್ದರು.

ಹೈಕೋರ್ಟ್ ಚಾಟಿ ಬೀಸಿದ್ದ ಹಿನ್ನೆಲೆಯಲ್ಲಿ ಹಾಜರಾದ ಹಿರಿಯ ಅಧಿಕಾರಿಗಳು, ಪೈಥಾನ್ ಯಂತ್ರದ ಮೂಲಕ ಗುಂಡಿ ಮುಚ್ಚಲು ಕಾರ್ಯಾದೇಶ ನೀಡಿರುವ ಬಗ್ಗೆ ವಕೀಲರ ಮೂಲಕ ವಿವರ ನೀಡಿ ಛೀಮಾರಿ ಹಾಕಿಸಿಕೊಳ್ಳುವುದರಿಂದ ಪಾರಾದಾರು.

ಆದರೆ, 2015ರಿಂದ ಬಾಕಿ ಇರುವ ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತ ಪಿಐಎಲ್ ವಿಚಾರಣೆ ನಡೆಸುತ್ತಿರುವ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ ಆಯುಕ್ತರು ಮತ್ತು ಚೀಫ್ ಎಂಜಿನಿಯರ್ ಗೂ ಕ್ಲಾಸ್ ತೆಗೆದುಕೊಂಡಿತು.

ವಿಚಾರಣೆ ಆರಂಭವಾಗುತ್ತಿದ್ದಂತೆಯೇ, ಸಿಜೆ "ಮಿಸ್ಟರ್ ಕಮಿಷನರ್, ರಸ್ತೆ ಗುಂಡಿ ಸರಿಪಡಿಸಲು ಏನಾದರೂ ಕಷ್ಟಗಳಿವೆಯೇ ?ರಸ್ತೆ ಗುಂಡಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು," ಎಂದರು.

ಅಲ್ಲದೆ, ಪ್ರಧಾನಿ ಮಾಡಿದ ಸರಿಪಡಿಸಿದ್ದ ರಸ್ತೆಗಳು ಹಾಳಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳಿವೆ ಬಂದಿವೆಯೆಲ್ಲಾ ನಿಜವೇ ಎಂದು ಬಿಬಿಎಂಪಿ ಮುಖ್ಯ ಆಯುಕ್ತರನ್ನು ಪ್ರಶ್ನಿಸಿದರು.

ಪಾಲಿಕೆ ಪರ ವಕೀಲರು. ಪ್ರಧಾನಿ ಬಂದಾಗ ಬಳಸಿದ ರಸ್ತೆಗಳು ಹಾಳಾಗಿಲ್ಲ, ಒಳಚರಂಡಿ ಸಮಸ್ಯೆಯಿಂದ ಹಾಳಾದ ರಸ್ತೆಯನ್ನು ದುರಸ್ತಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.

847 ಕಿಲೋಮೀಟರ್ ರಸ್ತೆ ಗುಂಡಿ:

ಇದೇ ವೇಳೇ ನ್ಯಾಯಾಲಯದ ನಿರ್ದೇಶದನಂತೆ ಬಿಬಿಎಂಪಿ ಮತ್ತು ಪೈಥಾನ್ ಯಂತ್ರ ಬಳಸಿ ನಗರದ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿ ನಡೆಸುವ

ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ (ಎಆರ್‌ಟಿಎಸ್) ಸಂಸ್ಥೆ ಜಂಟಿಯಾಗಿ ನಡೆಸಿದ ಸರ್ವೆ ಪ್ರಕಾರ 847.56 ಕಿ.ಮೀ ರಸ್ತೆಗುಂಡಿ ಸರಿಪಡಿಸಬೇಕಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.

ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ (ಎಆರ್‌ಟಿಎಸ್) ಸಂಸ್ಥೆಗೆ ಪೈಥಾನ್ ಯಂತ್ರ ಬಳಸಿ ನಗರದ 397 ಕಿಲೋಮೀಟರ್ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿ ನಡೆಸಲು

ಕಾರ್ಯಾದೇಶ ನೀಡಲಾಗಿದೆ. ಇನ್ನುಳಿದ 576 ಕಿ.ಮೀ ರಸ್ತೆ ಗುಂಡಿ ಮುಚ್ಚಲು ಟೆಂಡರ್

ಕರೆಯಲಾಗಿದೆ.ಜು.15 ರಂದು ಟೆಂಡರ್ ಓಪನ್ ಮಾಡಲಾಗುವುದು ಎಂದು ವಿವರಿಸಿದರು.

ರಸ್ತೆ ಗುಂಡಿ ಮುಚ್ಚುವ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲು ಸಲಹೆ ನೀಡಿದ ಸಿಜೆ, ರಸ್ತೆ ಸರಿಪಡಿಸುವವರೆಗೆ ಪಿಐಎಲ್ ಮುಕ್ತಾಯಗೊಳಿಸುವುದಿಲ್ಲ ಎಂದು ವಿಚಾರಣೆ ಜು.27 ಕ್ಕೆ ನಿಗದಿಪಡಿಸಿದ ಅಷ್ಟರಲ್ಲಿ ಗುಂಡಿ ಮುಚ್ಚುವ ಕಾಮಗಾರಿಯಲ್ಲಿ ಆಗಿರುವ ಪ್ರಗತಿಯ ಕುರಿತು ವಿವರ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿತು.

English summary
High Court has given the time to BBMP till August 3 to submit a status report on which potholes have been closed in Bangalore city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X