ಸನ್ನಿ ಲಿಯೋನ್ ಕುಣಿತಕ್ಕೆ ಓಕೆ ಎಂದ ಬೆಂಗಳೂರು ಪೊಲೀಸರು
ಬೆಂಗಳೂರು, ಸೆಪ್ಟೆಂಬರ್ 28: ಮಾಜಿ ಪೋರ್ನ್ ಸ್ಟಾರ್, ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರು ಕುಣಿತದ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸರು ಅನುಮತಿ ನೀಡಿದ್ದಾರೆ. ಕನ್ನಡ ಪರ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ನವೆಂಬರ್ 03ರಂದು ಬೆಂಗಳೂರಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸನ್ನಿ ಬರಲಿದ್ದಾರೆ.
'ಸನ್ನಿ ಲಿಯೋನ್ ಅವರಿಗೆ ಅನುಮತಿ ನೀಡಲಾಗಿದೆ. ಕಾರ್ಯಕ್ರಮದ ಟಿಕೆಟ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಭದ್ರತೆ ಒದಗಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಮದ್ಯ ಮಾರಾಟವನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಅಂದು ನಡೆಯುವ ಕಾರ್ಯಕ್ರಮಗಳನ್ನು ಪರಿಶೀಲನೆಗೆ ಒಳಪಡಿಸಲಿದ್ದೇವೆ," ಎಂದು ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಸನ್ನಿ ಲಿಯೋನ್ ವಿರುದ್ಧ ಕನ್ನಡ ಪರ ಸಂಘಟನೆಗಳು ದನಿಯೆತ್ತಿ, ಸನ್ನಿ ಲಿಯೋನ್ ಎಂದರೆ ಅಶ್ಲೀಲತೆಯ ಸಂಕೇತ, ಕನ್ನಡ ರಾಜ್ಯೋತ್ಸವ ಇರುವ ವಾರದಲ್ಲಿ ಇಂಥ ಕಾರ್ಯಕ್ರಮಗಳು ಬೇಡ ಎಂದು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

ಸನ್ನಿ ಲಿಯೋನ್ಕಾರ್ಯಕ್ರಮಕ್ಕೆ ಅನುಮತಿ ನೀಡಬೇಡಿ ಎಂದು ಪೊಲೀಸರಿಗೆ ಮನವಿ ಸಲ್ಲಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾರ್ಯಕ್ರಮ ನಡೆಸಲು ಅಡ್ಡಿಯಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಡಿಸೆಂಬರ್ 31ರ ರಾತ್ರಿ ಸನ್ನಿ ನೈಟ್ ಕಾರ್ಯಕ್ರಮಕ್ಕಾಗಿ ಬರಲು ತುದಿಗಾಲಲ್ಲಿ ನಿಂತಿದ್ದ ಸನ್ನಿ ನಂತರ ಹಿಂದೇಟು ಹಾಕಿದ್ದರು.
ಇದೊಂದು ಫ್ಯಾಮಿಲಿ ಪೋಗ್ರಾಂ, ನಂಗಾ ನಾಚ್ ಎಂದು ತಪ್ಪಾಗಿ ಭಾವಿಸಿದ್ದಾರೆ. ನಾನು ಕೂಡಾ ಕನ್ನಡಿಗ, ಸಂಸ್ಕೃತಿ ಬಗ್ಗೆ ಗೌರವವಿದೆ. ಕಲಾವಿದರಿಗೆ ನಾವು ಗೌರವ ನೀಡಬೇಕು ಎಂದು ಟೈಮ್ಸ್ ಕ್ರಿಯೇಷನ್ ಸಂಸ್ಥೆಯ ಹರೀಶ್ ಹೇಳಿದ್ದರು.











Click it and Unblock the Notifications