ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಿಂದ ಕೇರಳಕ್ಕೆ ಹೊರಟಿದ್ದ ಖಾಸಗಿ ಬಸ್ ಹೈಜಾಕ್!

|
Google Oneindia Kannada News

ಬೆಂಗಳೂರು, ಏಪ್ರಿಲ್ 28: ನಗರದ ಕಲಾಸಿಪಾಳ್ಯದಿಂದ ಕೇರಳಕ್ಕೆ ಹೊರಟಿದ್ದ ಖಾಸಗಿ ಬಸ್‌ವೊಂದನ್ನು ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಹೈಜಾಕ್ ಮಾಡಿದ್ದರು.

ಬೆಂಗಳೂರಿನ ಕಲಾಸಿ ಪಾಳ್ಯ ಬಸ್ ನಿಲ್ದಾಣದಿಂದ ಹೊರಟಿದ್ದ ಲಾಮಾ ಟ್ರಾವಲ್ಸ್ ನ KA 01 AG 636 ನಂಬರ್​ನ ಬಸ್ ಅನ್ನು ಏಳು ಜನ ದುಷ್ಕರ್ಮಿಗಳು ಹೈಜಾಕ್ ಮಾಡಲು ಪ್ರಯತ್ನಿಸಿದ್ದು, ಪೊಲೀಸರ ತುರ್ತು ಕಾರ್ಯಾಚರಣೆಯಿಂದಾಗಿ ಅಗಬಹುದಾಗಿದ್ದ ದುರಂತ ತಪ್ಪಿದೆ.

ಒಂದು ಇಯರ್ ಫೋನ್‌ ನಿಂದ ಹೋಯ್ತು 13 ಮಕ್ಕಳ ಪ್ರಾಣ! ಒಂದು ಇಯರ್ ಫೋನ್‌ ನಿಂದ ಹೋಯ್ತು 13 ಮಕ್ಕಳ ಪ್ರಾಣ!

ಪೊಲೀಸರ ಮಾಹಿತಿಯಂತೆ ಹೈಜಾಕ್ ಆಗಿದ್ದ ಬಸ್ ನಲ್ಲಿ ಸುಮಾರು 42 ಮಂದಿ ಪ್ರಯಾಣಿಕರಿದ್ದರು. ಬಸ್ ಬೆಂಗಳೂರಿನ ಕಲಾಸಿ ಪಾಳ್ಯದಿಂದ ಕೇರಳಕ್ಕೆ ಹೊರಟಿತ್ತು. ಈ ವೇಳೆ 2 ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು ಬಸ್ ಅನ್ನು ಹಿಂಬಾಲಿಸಿದ್ದು, ಮೈಸೂರು ಮುಖ್ಯ ರಸ್ತೆಯ ಬಳಿ ಬಸ್ ಅನ್ನು ಅಡ್ಡಗಟ್ಟಿದ್ದಾರೆ.

Finance company hijacks bus to recover money

ಈ ವೇಳೆ ಬಸ್ ನೊಳಗೆ ಬಂದ ದುಷ್ಕರ್ಮಿಗಳು ತಾವು ಪೊಲೀಸರು ಎಂದು ಹೇಳಿ, ಬಸ್ ನ ದಾಖಲಾತಿ ಕೊಡುವಂತೆ ಹೇಳಿದ್ದಾರೆ. ಈ ವೇಳೆ ಸಿಬ್ಬಂದಿ ವಿರುದ್ಧ ವಾಗ್ವಾದ ನಡೆಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ನಮ್ಮ ವಿಮಾನ ಹೈಜಾಕ್ ಆಗಿದೆ, ಮೋದೀಜಿ, ಕಾಪಾಡಿ! ನಮ್ಮ ವಿಮಾನ ಹೈಜಾಕ್ ಆಗಿದೆ, ಮೋದೀಜಿ, ಕಾಪಾಡಿ!

ಕೂಡಲೇ ಬಸ್ ಚಾಲಕನನ್ನು ಬೈಕ್ ನಲ್ಲಿ ಕೂರಿಸಿಕೊಂಡ ಓರ್ವ ದುಷ್ಕರ್ಮಿ ಅಲ್ಲಿಂದ ತೆರಳುತ್ತಾನೆ. ಮತ್ತೋರ್ವ ಬಸ್ ತಾನೇ ಚಲಾಯಿಸಿಕೊಂಡು ರಾಜ ರಾಜೇಶ್ವರಿ ನಗರದ ಪಟ್ಟಣಗೆರೆ ಬಳಿ ಇರುವ ಗೋಡೌನ್ ಗೆ ಹೋಗುತ್ತಾನೆ. ಒಟ್ಟು 7 ಮಂದಿಯ ತಂಡ ಈ ಕೃತ್ಯವೆಸಗಿದೆ ಎಂದು ಹೇಳಲಾಗಿದೆ.

ಈ ವೇಳೆ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಉದ್ದೇಶಿಸಿ ತಪ್ಪಿಸಿಕೊಂಡು ಹೋಗುವ ಪ್ರಯತ್ನ ಮಾಡಬೇಡಿ, ಹಾಗೇನಾದರೂ ಆದರೆ ನಿಮ್ಮ ಜೀವಕ್ಕೇ ಅಪಾಯ ಎಂದು ಮತ್ತೋರ್ವ ಎಚ್ಚರಿಕೆ ನೀಡಿದ್ದಾನೆ. ದುಷ್ಕರ್ಮಿಗಳಿಂದ ಬಸ್​ ಅಪಹರಣವಾಗುತ್ತಲೇ ಪ್ರಯಾಣಿಕರು ಭಯಭೀತಗೊಂಡಿದ್ದು, ಕೆಲ ಕಾಲ ಆತಂಕದಲ್ಲೇ ಸಮಯ ದೂಡಿದ್ದಾರೆ.

ಈ ವೇಳೆ ದುಷ್ಕರ್ಮಿಗಳ ಕಣ್ಣುತಪ್ಪಿಸಿ ಓರ್ವ ಪ್ರಯಾಣಿಕ ಪೊಲೀಸರಿದೆ ವಿಷಯ ಮುಟ್ಟಿಸಿದ್ದು, ವಿಚಾರ ತಿಳಿದ ಕೂಡಲೇ ಸುಮಾರು 30 ಪೊಲೀಸರ ತಂಡ ಸ್ಥಳಕ್ಕಾಗಮಿಸಿ ಬಸ್ ಅನ್ನು ಸುತ್ತುವರೆದಿದೆ. ಪೊಲೀಸರು ಆಗಮಿಸುತ್ತಿದ್ದಂತೆಯೇ ನಾಲ್ಕು ಮಂದಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ತನಿಖೆ ನಡೆಸುತ್ತಿದ್ದಾರೆ.

English summary
A group of seven miscreants hijacked a private bus on Friday night which traveling to Kerala from Kalasipalya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X