ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ವಿರುದ್ಧ ಎಫ್‌ಐಆರ್

ಬೆಂಗಳೂರು, ಅಕ್ಟೋಬರ್ 27 : ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಹೋದರ ಸಂಬಂಧಿಯೇ ಶಾಸಕರ ವಿರುದ್ಧ ವಂಚನೆ ದೂರು ನೀಡಿದ್ದಾರೆ.

ಬೆಂಗಳೂರಿನ ಜೆ. ಪಿ. ನಗರ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಶಾಂತ್ ದೂರು ಸಲ್ಲಿಸಿದ್ದರು. ವ್ಯಾಪಾರದ ವಿಚಾರದಲ್ಲಿ ಒಪ್ಪಂದ ಮಾಡಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಶಾಂತ್ ನೀಡಿದ ದೂರಿನ ಅನ್ವಯ ಬಿಜೆಪಿ ಶಾಸಕ ಉದಯ್ ಗಡುಡಾಚಾರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ತನಿಖೆಯ ಬಳಿಕ ದೂರಿನ ಕುರಿತು ಸ್ಪಷ್ಟನೆ ಸಿಗಲಿದೆ.

FIR Against BJP Chickpet MLA Uday Garudachar

ಮಾಧ್ಯಮಗಳ ಜೊತೆ ಮಾತನಾಡಿದ ಉದಯ್ ಗರುಡಾಚಾರ್, "ಪ್ರಶಾಂತ್ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ದಾಖಲೆಗಳಿದ್ದರೆ ಅವರು ಸಲ್ಲಿಕೆ ಮಾಡಲಿ. ನಾನು ಯಾವುದೇ ತನಿಖೆಗೂ ಸಿದ್ಧ" ಎಂದು ಹೇಳಿದರು.

2018ರ ಚುನಾವಣೆಯಲ್ಲಿ ಉದಯ್ ಗರುಡಾಚಾರ್ ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಲ್ಲಿ 57,312 ಮತಗಳನ್ನು ಪಡೆದು ಕಾಂಗ್ರೆಸ್‌ನ ಆರ್. ವಿ. ದೇವರಾಜ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+