CT Ravi: ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಎಫ್‌ಐಆರ್ ದಾಖಲು; ಚುನಾವಣಾ ಆಯೋಗ

ಬೆಂಗಳೂರು, ಮಾರ್ಚ್ 22: ಸಾಮಾಜಿಕ ಜಾಲತಾಣದಲ್ಲಿ ಧರ್ಮದ ಆಧಾರದ ಮೇಲೆ ದ್ವೇಷವನ್ನು ಹರಡಿದ ಆರೋಪದ ಮೇಲೆ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್ ದಾಖಲಿಸಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಾಮಾಜಿಕ ಜಾಲತಾಣಎಕ್ಸ್ ನಲ್ಲಿ ಸಿಟಿ ರವಿ ರಾಹುಲ್ ಗಾಂಧಿ ಹೇಳಿಕೆ ಉಲ್ಲೇಖಿಸಿ ಬರೆದುಕೊಂಡಿದ್ದ ಪೋಸ್ಟ್ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿ ನೋಡಲ್ ಅಧಿಕಾರಿ ಆರೋಪಿಸಿದ್ದಾರೆ.

FIR against BJP leader C T Ravi over his social media post

ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿ ನೋಡಲ್ ಅಧಿಕಾರಿಯ ಸೂಚನೆ ಹಿನ್ನೆಲೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಕೆ. ಜಯಲಕ್ಷಮ್ಮ ನಗರ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆಯ ನಿಗದಿತ ಮಾರ್ಗಸೂಚಿಗಳ ಪ್ರಕಾರ ರವಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಚುನಾವಣಾ ಸಂಸ್ಥೆ ತಿಳಿಸಿದೆ.

ಚಿಕ್ಕಮಗಳೂರು ಜಿಲ್ಲಾ ಚುನಾವಣಾಧಿಕಾರಿ ಅವರ ವಿರುದ್ಧ ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಯಲ್ಲಿ 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ದುಷ್ಪರಿಣಾಮ ಬೀರುವ ಕೃತ್ಯಗಳು) ಭಾರತೀಯ ದಂಡ ಸಂಹಿತೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ 126 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಅದು ಆರೋಗ ಹೇಳಿದೆ.

'ಸಾಗರಗಳ ಆಳವನ್ನು ಅಳೆಯಬಹುದು, ಆದರೆ ಹಿಂದೂಗಳು ಮತ್ತು ಹಿಂದೂ ಧರ್ಮದ ವಿರುದ್ಧ ರಾಹುಲ್ ಗಾಂಧಿಯವರ ದೋಷವನ್ನು ಎಂದಿಗೂ ಕಂಡುಹಿಡಿಯಲಾಗುವುದಿಲ್ಲ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬ ಪದವಿದೆ, ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದುಷ್ಟ ಶಕ್ತಿಗಳ ದಾಳಿಯಿಂದ ನಮ್ಮ ಧರ್ಮವನ್ನು ರಕ್ಷಿಸಲು ಹಿಂದೂಗಳು ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಿರ್ದಯವಾಗಿ ತೆಗೆದು ಹಾಕಬೇಕು ಎಂದು ತಮ್ಮ ಅಧಿಕೃತ ಟೈಟರ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿದ್ದು ಇದು ಚುನಾವಣಾ ನೀತಿ ಸಂಹಿತೆಯಡಿ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಸದರಿ ವಿಷಯದ ಬಗ್ಗೆ, ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ವಹಿಸುವಂತೆ ಹಾಗೂ ಕ್ರಮವಹಿಸಿದ ಬಗ್ಗೆ ವರದಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಕೋರಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಚುನಾವಣಾಧಿಕಾರಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಎಫ್‌ಐಆರ್‌ಗೆ ಪ್ರತಿಕ್ರಿಯಿಸಿದ ಸಿಟಿ ರವಿ, "ಕಾಂಗ್ರೆಸ್ ನನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ ವಿವರಗಳನ್ನು ನಾನು ಸ್ವೀಕರಿಸಿದ್ದೇನೆ. ಸನಾತನಿಯಾಗಿ ನಾನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಬೇಜವಾಬ್ದಾರಿ ಮತ್ತು ಸಂವೇದನಾರಹಿತ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ್ದೇನೆ" ಎಂದು ಹೇಳಿದ್ದಾರೆ.

ಜೊತೆಗೆ "ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಬೇಜವಾಬ್ದಾರಿ ಮತ್ತು ಸಂವೇದನಾರಹಿತ ಕಾಮೆಂಟ್‌ಗಳಿಗೆ ನಾನು ಒಬ್ಬ ಸನಾತನಿಯಾಗಿ ಪ್ರತಿಕ್ರಿಯಿಸಿದ್ದೇನೆ. ಸನಾತನ ಧರ್ಮವನ್ನು ಅನುಸರಿಸುವವರ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಹೇಳಿಕೆಗಳಿಗಾಗಿ ರಾಹುಲ್ ಗಾಂಧಿಯವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ ವಿವರಗಳನ್ನು ನೀವು ಹಂಚಿಕೊಂಡರೆ ನಾನು ತುಂಬಾ ಪ್ರಶಂಸಿಸುತ್ತೇನೆ" ಎಂದು ಪರೋಕ್ಷವಾಗಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಾಗುವಂತೆ ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+