ನಕಲಿ ಟ್ವಿಟ್ಟರ್ ಖಾತೆ ವಿರುದ್ಧ ಕಾಂಗ್ರೆಸ್ ಎಫ್‌ಐಆರ್ ದಾಖಲು
ಬೆಂಗಳೂರು, ಸೆಪ್ಟೆಂಬರ್ 19: ಕಾಂಗ್ರೆಸ್ ಗೆ ಕೆಟ್ಟ ಹೆಸರು ಬರುವ ರೀತಿಯಲ್ಲಿ ಕಾಂಗ್ರೆಸ್ ಐಟಿ ಸೆಲ್ ಹೆಸರಿನಲ್ಲಿ ಟ್ವಿಟ್ಟರ್ ಖಾತೆಯನ್ನು ತೆರೆದು ಅವಹೇಳನಕಾರಿ ಹೇಳಿಕೆಗಳನ್ನು ದಾಖಲಿಸುತ್ತಿದ್ದ ಟ್ವಿಟ್ಟರ್ ಖಾತೆ ವಿರುದ್ಧ ಕಾಂಗ್ರೆಸ್ ಎಫ್‌ಐಆರ್ ದಾಖಲಿಸಿದೆ.
ಸೂಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾಂಗ್ರೆಸ್ ಐಟಿ ಸೆಲ್ ನಗರ ಪೊಲೀಸ್ ಕಮಿಷನರ್ ಮತ್ತು ಡಿಜಿ-ಐಜಿಪಿ ಅವರಿಗೆ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ ನಕಲಿ ಖಾತೆ ಸೃಷ್ಟಿಸಿದವರ ಸುಳಿವು ಹಿಡಿದು ಕಾರ್ಯಚರಣೆ ಆರಂಭಿಸಿದ್ದಾರೆ.
ನಕಲಿ ಖಾತೆಯನ್ನು ಸೃಷ್ಟಿಸಿ ದುಷ್ಕರ್ಮಿಗಳು ಮಾಜಿ ಪ್ರಧಾನಿ ದೇವೇಗೌಡ, ಮಾಯಾವತಿ ಸೇರಿದಂತೆ ಹಲವು ನಾಯಕರ ವಿರುದ್ಧ ಕೆಟ್ಟದಾಗಿ ಬರೆಯುತ್ತಿದ್ದಾರೆ. ಸಂವಿಧಾನ ಮತ್ತು ಜಾತ್ಯಾತೀತ ಮೌಲ್ಯಗಳ ವಿರೋಧಿಗಳೇ ಈ ನಕಲಿ ಖಾತೆ ಸೃಷ್ಟಿಸಿದ್ದಾರೆ ಎನ್ನುವುದು ಗೊತ್ತಾಗುತ್ತಿದೆ.

ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಟೀಕೆಗಳನ್ನು ಮಾಡುವ ಮೂಲಕ ಪಕ್ಷಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ. ಆದಷ್ಟು ಬೇಗ ಈ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಲಾಗಿದೆ.












Click it and Unblock the Notifications