Nandini Brand: ನಂದಿನಿ ಉತ್ಪನ್ನ ಬಗ್ಗೆ ಅಪಪ್ರಚಾರ ಮಾಡಿದ ಶರಣ್ಯ ವಿರುದ್ಧ ಎಫ್‌ಐಆರ್, ಕೆಎಂಎಫ್ ಸ್ಪಷ್ಟನೆ
ಬೆಂಗಳೂರು: ಕರ್ನಾಟಕ ಹಾಲಿನ ಉತ್ಪನ್ನಗಳ ಬ್ರ್ಯಾಂಡ್ ಆಗಿರುವ ನಂದಿನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಆರೋಪ ಮಾಡಿ ವಿಡಿಯೋ ಹರಿಬಿಟ್ಟಿದ್ದ ಮಹಿಳೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಉತ್ಪನ್ನದಿಂದ ಆರೋಗ್ಯ ಸಮಸ್ಯೆ ಎದುರಾಗಲಿದೆ ಎಂದು ಹೇಳಿರುವ ಸುದ್ದಿ ನಂದಿನಿ ಅನೇಕ ಬಳಕೆದಾರರಲ್ಲಿ ಗೊಂದಲ ಉಂಟಾಗುವಂತೆ ಮಾಡಿತ್ತು. ಈ ಬಗ್ಗೆ ಸ್ವತಃ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರು ಆರೋಪ ತಳ್ಳಿ ಹಾಕಿದ್ದಾರೆ.
ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಡಾ. ಶರಣ್ಯ ಸಂತೋಷ್ ಅವರ ವಿರುದ್ಧ ಇಂದು ಗುರುವಾರ (ಫೆ.19) ಎಫ್‌ಐಆರ್ ದಾಖಲಾಗಿದೆ. ವೃತ್ತಿಯಲ್ಲಿ ಇರುವ ಮಣಿಪಾಲ್ ಆಸ್ಪತ್ರೆ ವೈದ್ಯರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಇವರು ನಂದಿನಿ ಬ್ರ್ಯಾಂಡ್ ಬಗ್ಗೆ ಹೇಳಿದ್ದೇನು? ವಿಡಿಯೋದಲ್ಲೇನಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು, ಕರ್ನಾಟಕ ಮಾತ್ರವಲ್ಲದೇ ದೇಶ ವಿದೇಶಗಳಿಗೆ ಪೂರೈಕೆ ಆಗುವ ರಾಜ್ಯದ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಉತ್ಪನ್ನಗಳಿಗೆ ಸಾಕಷ್ಟು ಬೇಡಿಕೆ ಇದೆ. ಅಷ್ಟೇ ವಿಶ್ವಾಸಾರ್ಹತೆಯನ್ನು ಕಂಪನಿ ಉಳಿಸಿಕೊಂಡಿದೆ. ಹೀಗಿರುವಾಗ ನಂದಿನಿ ಉತ್ಪನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತದೆ. ಇವರ ಆರೋಪ ಸುಳ್ಳು ಎಂದಿರುವ ಎಂಡಿ ಶಿವಸ್ವಾಮಿ ಅವರು, ನಂದಿನಿ ಉತ್ಪನ್ನ ಕುರಿತು ಓಡಾಡುತ್ತಿರುವ ಸುದ್ದಿ ಅದು ಸುಳ್ಳು. ನಮ್ಮ ಉತ್ಪನ್ನಗಳಲ್ಲಿ ಯಾವುದೇ ರಸಾಯನಿಕ ಬಳಸುವುದಿಲ್ಲ. ಜನರ ದಿಕ್ಕು ತಪ್ಪಿಸುವುದು ಬೇಡ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ನಂದಿನಿ ಬ್ರ್ಯಾಂಡ್ ಕುರಿತು ಹೇಳಿರುವ ಸುಳ್ಳೇನು?
ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಡಾ.ಶರಣ್ಯ ಅವರು ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ರೀಲ್ಸ್ ಅಪ್ ಲೋಡ್ ಮಾಡಿದ್ದರು. ಸದರಿ ರೀಲ್‌ನಲ್ಲಿ "ನಂದಿನಿ ಉತ್ಪನ್ನಗಳಾದ ಕ್ರೀಮ್ ಬನ್, ಸ್ಟ್ರಾಬೆರಿ ಪ್ರೈವರ್ಡ್ ಮಿಲ್ಕ್, ಇತರ ಪಾನೀಯಗಳ ಕುರಿತು ಸದರಿ ಉತ್ಪನ್ನಗಳು ಟಾಕ್ಸಿಕ್ ಮತ್ತು ಕೆಮಿಕಲಿನಿಂದ ಕೂಡಿವೆ. ಇವುಗಳನ್ನು ದಿನನಿತ್ಯ ಸೇವಿಸುವುದರಿಂದ ಆಟೋಇಮ್ಯೂನ್ ಡಿಸೀಸ್ ಬರುವ ಸಾಧ್ಯತೆಗಳಿವೆ. ಸ್ಟಿರಾಯ್ಡ್ ರೀತಿಯ ಭಯಾನಕ ಡ್ರಗ್ಸ್ ಜೊತೆಗೆ ಧೀರ್ಘಾವಧಿಯಲ್ಲಿ ಇದನ್ನು ಸೇವಿಸಿದರೆ ಭವಿಷ್ಯದಲ್ಲಿ, ಕ್ಯಾನ್ಸರ್ ಬರುವುದು ಖಂಡಿತ ಎಂದು ಅವರು ತಿಳಿಸಿದ್ದರು.
ಸ್ಟ್ರಾಬೆರಿ ಫ್ಲೇವರ್ ಹಾಲಿನಲ್ಲಿ ನೈಸರ್ಗಿಕ ಸ್ಟ್ರಾಬೆರಿ ಇರುವುದಿಲ್ಲ. ಬದಲಿಗೆ ಆರ್ಟಿಫಿಷಿಯಲ್ ಕಲರ್ಸ್ ಮತ್ತು ಪ್ರಿಸರ್ವೆಟೀನ್ಸ್ ಹಾಕಿ ತಯಾರಿಸಲಾಗುವುದು. ಈ ರೀತಿಯ ಉತ್ಪನ್ನಗಳಿಗೆ FSSAI ರವರ ಉತ್ಪಾದನೆಗೆ ಹೇಗೆ ಅನುಮತಿ ನೀಡುತ್ತಾರೆ?. ಇವುಗಳನ್ನು ಕುಡಿಯುವುದರಿಂದ ಆರೋಗ್ಯ ಹಾಳಾಗುತ್ತದೆ. ಕೆಎಂಎಫ್ ಸರ್ಕಾರಿ ಕಂಪನಿಯಾಗಿದೆ. ಇವುಗಳನ್ನು ಉತ್ಪಾದನೆ ಮತ್ತು ಮಾರ್ಕೆಟಿಂಗ್ ಮಾಡಿ ಸರ್ಕಾರದವರು ಲಾಭ ಮಾಡುತ್ತಿರುವ ಬಗ್ಗೆ ಭ್ರಮೆಯಲ್ಲಿ ಸರ್ಕಾರವು ಇರಬಾರದು.
ಉತ್ಪನ್ನಗಳನ್ನೆಲ್ಲಾ ಕೆಎಂಎಫ್ ಮಾರುಕಟ್ಟೆಗೆ ಬಿಡಬಾರದು
ಈ ಉತ್ಪನ್ನಗಳು ನಿಜವಾಗಿಯೂ ಆಹಾರ ಅಲ್ಲವೇ ಅಲ್ಲ. ಬದಲಾಗಿ ವಿಷಕಾರಿ ಪದಾರ್ಥಗಳು KMF ಈ ರೀತಿಯ ಉತ್ಪನ್ನಗಳನ್ನೆಲ್ಲಾ ಮಾರುಕಟ್ಟೆಗೆ ಬಿಡಬಾರದು ಎಂದು ತಿಳಿಸಿ ರೀಲ್ಸ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಬೇಕಾಗಿದೆ. ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರ ರಹಿತ ಆರೋಪಗಳನ್ನು ಮಾಡಲಾಗುತ್ತಿರುವುದು ಮಹಾಮಂಡಳಿಯ ಗಮನಕ್ಕೆ ಬಂದಿದೆ.
ಈ ರೀತಿ ನಂದಿನಿ ಉತ್ಪನ್ನಗಳ ಸೇವನೆಗೆ ಅಸುರಕ್ಷಿತವೆಂದು ತಪ್ಪಾಗಿ ಪ್ರಚಾರ ಮಾಡಲಾಗುತ್ತಿದೆ. ಇಂತಹ ಹೇಳಿಕೆ, ತಪ್ಪು ಮಾಹಿತಿಯಿಂದ ಬಾಲ್ಯದಿಂದಲೇ ನಂದಿನಿ ಬ್ರಾಂಡ್ ಜೊತೆ ಬೆಳೆದಿರುವ ಕೋಟ್ಯಾಂತರ ಗ್ರಾಹಕರಲ್ಲಿ ಅನಗತ್ಯ ಗೊಂದಲ, ಅತಂಕ ಉಂಟಾಗಿದೆ. ಕರ್ನಾಟಕ ಹಾಲು ಮಹಾಮಂಡಳಿಯು (KMF) ಕಾನೂನುಬದ್ಧ ಸಂಸ್ಥೆಗಳು ಹಾಗೂ ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ ನಿಗದಿಪಡಿಸಿರುವ ಎಲ್ಲ ಆಹಾರ ಸುರಕ್ಷತಾ ಮಾನದಂಡಗಳು ಮತ್ತು ಅನುಮೋದಿತ ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುರಿಸುತ್ತಿದೆ. ಕನ್ನಡಿಗರ ಹೆಮ್ಮೆಯ ಸಂಪೂರ್ಣ ಸುರಕ್ಷಿತವಾಗಿದೆ. ಆನ್‌ಲೈನ್‌ನಲ್ಲಿ ಓಡಾಡಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಂದಿನಿ ಉತ್ಪನ್ನಗಳ ವಿರುದ್ಧ ತಪ್ಪು ಮಾಹಿತಿ ಹರಡಿದ ಶರಣ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications