Nirmala Sitharaman: ಚುನಾವಣಾ ಬಾಂಡ್ ಮೂಲಕ ಸುಲಿಗೆ: ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್
ಬೆಂಗಳೂರು ಸೆಪ್ಟೆಂಬರ್ 28: ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಈ ಆದೇಶ ನೀಡಿದೆ.
ಹವದು... ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ) ಸಹ ಅಧ್ಯಕ್ಷ ಆದರ್ಶ ಅಯ್ಯರ್ ಬೆಂಗಳೂರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ದೂರಿನ ವಿಚಾರಣೆ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿದೆ.

ಹಲವು ಮುಖಂಡರು ಹಾಗೂ ಅಧಿಕಾರಿಗಳ ವಿರುದ್ಧ ದೂರು!
ದೂರುದಾರ ಆದರ್ಶ್ ಅಯ್ಯರ್ ಅವರು ಬೆದರಿಕೆ ಮತ್ತು ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಲಾಗಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಆರೋಪಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಡಿ ಅಧಿಕಾರಿಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಇತರ ರಾಷ್ಟ್ರೀಯ ಪಕ್ಷದ ನಾಯಕರು, ಬಿಜೆಪಿ ಕರ್ನಾಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿವೈ ವಿಜಯೇಂದ್ರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ಕಳೆದ ವರ್ಷ ಏಪ್ರಿಲ್‌ನಲ್ಲಿ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಚುನಾವಣಾ ಬಾಂಡ್ ಮೂಲಕ ಸುಲಿಗೆ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ತಿಲಕ್ ನಗರ ಠಾಣೆಗೆ ಸೂಚಿಸಿದೆ.
ಎಫ್‌ಐಆರ್ ದಾಖಲಿಸಲು ಪೊಲೀಸರು ಸೂಚನೆ!
ಅರ್ಜಿದಾರರ ದೂರನ್ನು ಪರಿಗಣಿಸಿದ ಬೆಂಗಳೂರು ನ್ಯಾಯಾಲಯ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಸೂಚಿಸಿದ್ದು ಪ್ರಸ್ತುತ ಕೇಂದ್ರ ನಾಯಕರಿಗೆ ಸಂಕಷ್ಟ ಎದುರಾಗಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಬಾಲನ್ ವಾದ ಮಂಡಿಸಿದ್ದು ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ.
ಚುನಾವಣಾ ಬಾಂಡ್ ಎಂದರೇನು?
ರಾಜಕೀಯ ಪಕ್ಷಗಳಿಗೆ ಕಪ್ಪು ಹಣ ಹರಿದುಬರುವುದನ್ನು ತಡೆಯಲು ಹಾಗೂ ರಾಜಕೀಯ ಪಕ್ಷಗಳಿಗೆ ಬರುವ ದೇಣಿಗೆಗಳಿಗೆ ಒಂದು ಹೊಣೆಗಾರಿಕೆಯನ್ನಾಗಿಸುವ ಸಲುವಾಗಿ ಚುನಾವಣಾ ಬಾಂಡ್ ಗಳನ್ನು ಕೇಂದ್ರ ಸರ್ಕಾರ 2018ರಲ್ಲಿ ಜಾರಿಗೆ ತಂದಿದೆ. ಇಂಥ ದೇಣಿಗೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿಸುವಂಥ ಉದ್ದೇಶಕ್ಕಾಗಿಯೂ ಈ ಚುನಾವಣಾ ಬಾಮಡ್‌ಗಳನ್ನು ಜಾರಿಗೊಳಿಸಲಾಗಿದೆ.












Click it and Unblock the Notifications