• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿದ್ದರಾಮಯ್ಯ ಕಾರು ಚಾಲಕರ ಮೇಲೆ FIR ದಾಖಲಿಸಿದ ಆರ್ ಆರ್ ನಗರ ಪೊಲೀಸರು!

|

ಬೆಂಗಳೂರು, 15: ಆರ್ ಆರ್ ನಗರ ಉಪಚುನಾವಣೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರು ಚಾಲಕರ ಮೇಲೆ ಎಫ್‌ಐಆರ್ ದಾಖಲಾಗಿದೆ. ನಿಧಾನವಾಗಿ ಉಪ ಚುನಾವಣೆ ರಂಗೇರುತ್ತಿದ್ದು, ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿಯೆ ವಿನಿಮಯ ಆಗುತ್ತಿವೆ. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕಾರು ಚಾಲಕರ ಮೇಲೆ ದೂರು ದಾಖಲಾಗಿರುವುದು ಕುತೂಹಲ ಮೂಡಿಸಿದೆ.

   Kusuma ಗೆ ದೊಡ್ಡ Shock | Oneindia Kannada

   ಆರ್‌ ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಉಪಸ್ಥಿತರಿದ್ದವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ಅವರು, ನಮ್ಮ ಚಾಲಕರು, ಅಭ್ಯರ್ಥಿ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಾವು ನಾಮಪತ್ರ ಸಲ್ಲಿಕೆ‌ಗೆ ಹೋಗುತ್ತಿದ್ದಾಗ ಬಲವಂತವಾಗಿ ಪೊಲೀಸರ ಮೂಲಕ ತಡೆದಿದ್ದಾರೆ. ನಾಮಪತ್ರ ಸಲ್ಲಿಸುವುದಕ್ಕೆ ಸರ್ಕಾರ ಅಡ್ಡಿ ಮಾಡಿದೆ ಎಂಬ ಗಂಭೀರ ಆರೋಪವನ್ನು ಸಿದ್ದರಾಮಯ್ಯ ಅವರು ಮಾಡಿದ್ದಾರೆ.

   ಆರ್. ಆರ್. ನಗರ ಉಪ ಚುನಾವಣೆ; ಡಿಕೆಶಿ ತುರ್ತು ಸುದ್ದಿಗೋಷ್ಠಿ

   ನಮ್ಮ ಅಭ್ಯರ್ಥಿ ಎಚ್. ಕುಸುಮಾ ಹಾಗೂ ನಮ್ಮ ವಾಹನ ಚಾಲಕರ ಮೇಲೆ ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಇದು ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಇದರಲ್ಲಿ ಸರ್ಕಾರದ ಕೈವಾಡ ಎದ್ದು ಕಾಣುತ್ತಿದೆ. ಚುನಾವಣಾ ಆಯೋಗದ ಕಣ್ಗಾವಲಿನಲ್ಲಿ ಚುನಾವಣೆ ನಡೆಯಬೇಕು. ಪೊಲೀಸರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

   ಬಿಜೆಪಿ ನಾಯಕರಿಂದ ನೀತಿ ಸಂಹಿತೆ ಉಲ್ಲಂಘನೆ

   ಬಿಜೆಪಿ ನಾಯಕರಿಂದ ನೀತಿ ಸಂಹಿತೆ ಉಲ್ಲಂಘನೆ

   ಆರ್ ಆರ್ ನಗರದಲ್ಲಿ ಬಿಜೆಪಿ ನಾಯಕರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಆದರೆ ಅಲ್ಲಿ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಪೊಲೀಸರ ನಡವಳಿಕೆ ಖಂಡನೀಯವಾದುದು. ನಮ್ಮನ್ನು ರಾಜಕೀಯವಾಗಿ ಎದುರಿಸಲು ಬಿಜೆಪಿಗೆ ಶಕ್ತಿಯಿಲ್ಲ. ಹೀಗಾಗಿ ಪ್ರಕರಣ ದಾಖಲಿಸುವ ಮೂಲಕ ನಮ್ಮ ಮೇಲೆ ಒತ್ತಡ ಹಾಕುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

   ಚುನಾವಣಾ ಆಯೋಗಕ್ಕೆ ದೂರು

   ಚುನಾವಣಾ ಆಯೋಗಕ್ಕೆ ದೂರು

   ನಿಜವಾಗಿಯೂ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಬಿಜೆಪಿ ನಾಯಕರು. ಆದರೆ ಪ್ರಕರಣ ಹಾಕಿರುವುದು ನಮ್ಮ ಮೇಲೆ. ಈ ಬಗ್ಗೆ ನಾವು ಆಯೋಗಕ್ಕೆ ದೂರು ಕೊಡುತ್ತೇವೆ. ಈ ರೀತಿ ನಮ್ಮ ಮೇಲೆ ದೂರು ದಾಖಲಿಸಿ ನಮ್ಮನ್ನ ನಿಯಂತ್ರಿಸುವುದಕ್ಕೆ ಸಾಧ್ಯವಿಲ್ಲ ಎಂದು ಪತ್ರಿಕಾ ಪ್ರಕಟಣೆ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

   ಉಪ ಚುನಾವಣೆ ಮೂಲಕ ಆ ಸಂದೇಶವನ್ನು ಮೋದಿಗೆ ರವಾನಿಸುತ್ತೇವೆ: ಡಿಕೆಶಿ

   ಬಿಜೆಪಿ ಕಾರ್ಯಕರ್ತರೇ ಅವರ ಅಭ್ಯರ್ಥಿ ಸೋಲಿಸುತ್ತಾರೆ

   ಬಿಜೆಪಿ ಕಾರ್ಯಕರ್ತರೇ ಅವರ ಅಭ್ಯರ್ಥಿ ಸೋಲಿಸುತ್ತಾರೆ

   ಕಾಂಗ್ರೆಸ್ ಅಭ್ಯರ್ಥಿ ಮೇಲೆ ಎಫ್‌ಐಆರ್ ಹಾಕಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಖಂಡಿಸಿದ್ದಾರೆ. ನಮ್ಮ ಮೇಲೆ ಎಫ್‌ಐಆರ್ ಹಾಕಿರುವುದನ್ನು ಬಿಜೆಪಿ ಕಾರ್ಯಕರ್ತರೆ ನನಗೆ ಕರೆ ಮಾಡಿ ತಿಳಿಸಿದ್ದಾರೆ. ಹೀಗಾಗಿ ಆರ್ ಆರ್ ನಗರ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರೆ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುತ್ತಾರೆ ಎಂದು ಡಿಕೆಶಿ ಎಚ್ಚರಿಸಿದ್ದಾರೆ.

   ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

   ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

   ಆರ್ ಆರ್ ನಗರ ವಿಧಾನ ಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ (ಅ. 14 ರಂದು) ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಕಾಂಗ್ರೆಸ್ ಅಭ್ಯರ್ಥಿ ಎಚ್. ಕುಸುಮಾ, ಅವರ ವಾಹನ ಚಾಲಕರ ಮೇಲೆ ದಾಖಲಿಸಲಾಗಿದೆ. ಜೊತೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರು ಚಾಲಕರ ಮೇಲೂ ಪ್ರಕರಣ ದಾಖಲಿಸಲಾಗಿದೆ. ಆರ್ ಆರ್ ನಗರ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಒಟ್ಟು 8 ಜನರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.

   English summary
   Police have registered a case of violation of the Model Code of Conduct during the nomination of Congress candidate H Kusuma in RR Nagara. FIR Registered against Siddaramaiah's driver and 8 Congressmen, including Congress candidate Kusuma
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X