• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಾಯಿ ಮೇಲೆ ಕಾರು ಹತ್ತಿಸಿದ ನಿವೃತ್ತ ಇನ್‌ಸ್ಪೆಕ್ಟರ್ ವಿರುದ್ಧ ಕೇಸು !

|

ಬೆಂಗಳೂರು, ಜನವರಿ 27: ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ ನಿವೃತ್ತ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಹಾರ್ನ್ ಹೊಡೆದರೂ ಮೇಲೆ ಏಳದ ನಾಯಿ ಮೇಲೆ ಕಾರು ಹತ್ತಿಸಿದ ನಿವೃತ್ತ ಪೊಲೀಸ್ ಅಧಿಕಾರಿ ಹೋಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪ್ರಾಣಿಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ನಿವೃತ್ತ ಪೊಲೀಸ್ ಇನ್‌ಸ್ಪೆಕ್ಟರ್ ನಾಗೇಶ್ ಆರೋಪಕ್ಕೆ ಗುರಿಯಾದವರು. ಚಿಕ್ಕ ರಸ್ತೆಯಲ್ಲಿ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ರಸ್ತೆಯ ಬದಿ ಮಲಗಿದ್ದ ನಾಯಿ ಎಷ್ಟು ಹಾರ್ನ್ ಹೊಡೆದರೂ ಮೇಲೆ ಎದ್ದಿಲ್ಲ. ಕ್ಷಣ ಕಾಲ ಕಾರು ನಿಲ್ಲಿಸಿ ಅದನ್ನು ಹೊರ ಕಳಿಸಿ ಹೋಗುವ ಬದಲಿಗೆ ನಿವೃತ್ತ ಇನ್‌ಸ್ಪೆಕ್ಟರ್ ಕಾರು ಚಾಲನೆ ಮಾಡಿದ್ದಾರೆ.

   ಬೆಂಗಳೂರು: ನೆಲಮಂಗಲದಲ್ಲಿ ಅನ್ನದಾತರ ಬೃಹತ್ ಪ್ರೊಟೆಸ್ಟ್..! | Oneindia Kannada

   ಎರಡೂ ಚಕ್ರ ನಾಯಿ ಮೇಲೆ ಹತ್ತಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯ ಆಧರಿಸಿ ನಾಯಿ ಮಾಲೀಕರು ಹುಳಿಮಾವು ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ನಿವೃತ್ತ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಹುಳಿಮಾವು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಆರೋಪಿತ ನಿವೃತ್ತ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

   English summary
   FIR Filed Against Retired Traffic Police Inspector for Attempting to Kill Street Dog in Bengaluru, incident captured in CCTV. Know more.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X