Karnataka Election 2023: ಬಿರಿಯಾನಿ ಔತಣ ನೀಡಿದ ಬಿಜೆಪಿ ಸಚಿವ ಸೋಮಶೇಖರ್ ವಿರುದ್ಧ ಎಫ್‌ಐಆರ್
ಬೆಂಗಳೂರು, ಏಪ್ರಿಲ್ 14: ಇದು ಚುನಾವಣಾ ಸಮಯ. ನಾವು ಏನೇ ಮಾಡಿದರೂ ಅದರ ಮೇಲೆ ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ಕಣ್ಣಿರುತ್ತದೆ ಎಂಬುದು ರಾಜಕೀಯ ಪಕ್ಷಗಳು ಮತ್ತು ನಾಯಕರಿಗೆ ತಿಳಿದಿರಬೇಕು. ಹೇಗೋ ರಂಜಾನ್ ಪವಿತ್ರ ತಿಂಗಳು ನಡೆಯುತ್ತಿದೆ ಇದೇ ನೆಪದಲ್ಲಿ ಜನರಿಗೆ ರುಚಿಕರವಾದ ಬಿರಿಯಾನಿ ತಿನ್ನಲು ಆಹ್ವಾನಿಸುವ ಎಂದರೇ ಮಾತ್ರ ನಿಮ್ಮ ಮೇಲೆ ಪ್ರಕರಣ ದಾಖಲಾಗುತ್ತೆ ಹುಷಾರ್..!
ಹೌದು.... ಒಳ್ಳೆ ಊಟ ಕೊಡುಸ್ತಿನಿ ಬನ್ನಿ ಅಂತ ನೀವು ಜನರನ್ನು ಕರೆದು ಆರಾಮಾವಾಗಿ ಊಟ ಹಾಕಿಸಬಹುದು. ಆದರೆ ನೀವು ರಾಜಕೀಯ ಪಕ್ಷದವರಾಗಿದ್ದು, ಚುನಾವಣಾ ಪ್ರಚಾರದಲ್ಲಿ ನಿರತ ರಾಜಕಾರಣಿಯಾಗಿದ್ದರೆ ಮಾತ್ರ ಅದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಬಹುದು. ನಿಮ್ಮ ಮೇಲೆ ದೂರು ಕೂಡ ದಾಖಲಾಗಬಹುದು.

ಬೆಂಗಳೂರಿನ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ಮತದಾರರನ್ನು ಬಿರಿಯಾನಿ ತಿನ್ನಲು ಬನ್ನಿ ಎಂದು ಆಹ್ವಾನಿಸಿದ್ದಕ್ಕೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಚುನಾವಣಾ ಪ್ರಚಾರದ ವೇಳೆ ಜನರಿಗೆ ಊಟ ಮಾಡುವಂತೆ ಮನವಿ ಮಾಡಿದ್ದಕ್ಕಾಗಿ ಚುನಾವಣಾಧಿಕಾರಿಗಳು ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಸಚಿವ ಎಸ್‌ಟಿ ಸೋಮಶೇಖರ್ ವಿರುದ್ಧ ಜಾತ್ಯಾತೀತ ಜನತಾದಳ ಪಕ್ಷದ ದೂರಿನ ನಂತರ ಚುನಾವಣಾ ಆಯೋಗವು ಈ ಬಿರಿಯಾನಿ ಪಾರ್ಟಿ ಆಯೋಜಿಸಿದ್ದಕ್ಕಾಗಿ ಬಿಜೆಪಿ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಿದೆ.
ಏಪ್ರಿಲ್ 9ರಂದು ಬೆಂಗಳೂರಿನ ಕೆಂಗೇರಿ ಹೋಬಳಿಯ ದೊಡ್ಡಿಪಾಳ್ಯದ ಕಬ್ಬಾಳಮ್ಮ ದೇವಸ್ಥಾನದ ಬಳಿ ಎಸ್‌ಟಿ ಸೋಮಶೇಖರ್ ಪ್ರಚಾರ ನಡೆಸುತ್ತಿದ್ದು, ಅಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾಷಣ ಮುಗಿಸಲು ಸಿದ್ಧವಾದಾಗ ಅವರ ಬೆಂಬಲಿಗರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದವರಿಗೆ ಊಟ ಸಿದ್ಧವಾಗಿದೆ ಎಂದು ಘೋಷಿಸುವಂತೆ ಮನವಿ ಮಾಡಿದರು.

ಈ ವೇಳೆ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಬೆಂಬಲಿಗರ ಮನವಿಗೆ ಒಪ್ಪಿಕೊಂಡು, "ಈಗಾಗಲೇ ಊಟಕ್ಕೆ ತಡವಾಗಿದೆ ಮತ್ತು ಆಹಾರ ಕೂ ಸಿದ್ಧವಾಗಿದೆ. ಅದೂ ಬಿರಿಯಾನಿ. ದಯವಿಟ್ಟು ಎಲ್ಲರೂ ಊಟ ಮಾಡಿಕೊಂಡು ಹೋಗಿ" ಎಂದಿದ್ದಾರು. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಿರುವ ಕಾರಣ ಹೀಗೆ ಮತದಾರರಿಗೆ ಆಮೀಷ ಒಡ್ಡುವಂತಿಲ್ಲ.
ಸೋಮಶೇಖರ್ ಅವರು ಮತದಾರರಿಗೆ ಆಮಿಷ ಒಡ್ಡಿ ಬಿರಿಯಾನಿ ಔತಣ ನೀಡಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಅವರ ಹೇಳಿಕೆಯ ವಿಡಿಯೋ ದೃಶ್ಯಾವಳಿ ಆಧರಿಸಿ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ವಿಡಿಯೋ ದೃಶ್ಯಾವಳಿ ಆಧರಿಸಿ ಚುನಾವಣಾ ಕಣ್ಗಾವಲು ತಂಡದ ಅಧಿಕಾರಿ ಪ್ರಕಾಶ್ ಸಿಪಿ ಅವರು ಕಗ್ಗಲಿಪುರ ಪೊಲೀಸರಿಗೆ ದೂರು ನೀಡಿದ್ದು, ಬುಧವಾರ ಸೋಮಶೇಖರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಮೇ ಹತ್ತರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮಾರ್ಚ್ 29 ನೀತಿ ಸಂಹಿತೆ ಜಾರಿಯಾಗಿದೆ. ಆದರೂ, ಕೂಡ ಸಿವಿಜಿಲ್ ಆ್ಯಪ್‌ನಲ್ಲಿ ಏಪ್ರಿಲ್ 11ರವರೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 460 ದೂರುಗಳು ದಾಖಲಾಗಿವೆ.
ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಮಂಗಳವಾರದವರೆಗೆ 1,018 ಎಫ್‌ಐಆರ್‌ಗಳು ದಾಖಲಾಗಿದ್ದು, ಮಾದಕ ದ್ರವ್ಯ, ಮದ್ಯ, ಅಮೂಲ್ಯ ಲೋಹಗಳು ಮತ್ತು ಇತರ ಉಡುಗೊರೆಗಳು ಸೇರಿದಂತೆ 51 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ 24 ಗಂಟೆಗಳ ಸಹಾಯವಾಣಿ ಸೇವೆಯನ್ನು ತೆರೆಯಲಾಗಿದೆ
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ












Click it and Unblock the Notifications