Fire Accident: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ, ಎದೆ ಝಲ್ ಎನಿಸುವ ದೃಶ್ಯ
ಬೆಂಗಳೂರು, ಏಪ್ರಿಲ್ 07: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಟೈರ್ ಗೋಡೌನ್ ನೂರಾರು ಜನರ ಕಣ್ಣೆದುರೇ ಹೊತ್ತಿ ಉರಿದಿದೆ. ಬೆಂಕಿ ದುರಂತದ ಎದೆ ಝಲ್ ಎನಿಸುವ ದೃಶ್ಯ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ಚಾಮರಾಜಪೇಟೆಯಲ್ಲಿರುವ ಟೈರ್, ಫೈಪ್ ಮತ್ತು ಫ್ಲೈವುಡ್ ಗೋಡೌನ್‌ಗೆ ಬೆಂಕಿ ತಗುಲಿದ್ದು, ನೋಡ ನೋಡುತ್ತಿದ್ದಂತೆ ಸಂಪೂರ್ಣ ಗೋಡೌನ್ ಹೊತ್ತಿ ಉರಿದಿದೆ. ಘಟನೆಯಲ್ಲಿ ಟೈರ್, ಫೈಪ್ ಮತ್ತು ಫ್ಲೈವುಡ್ ಗೋಡೌನ್‌ಗೆ ಮೂರು ಸಹ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸದ್ಯ ಬೆಂಕಿ ಆರಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಚಾಮರಾಜಪೇಟೆಯಲ್ಲಿ ದಟ್ಟ ಹೊಗೆ ಆವರಿಸಿದೆ.

ಇಂದು ಬೆಳಗಿನ ಜಾವ 4 ಗಂಟೆ ವೇಳೆಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಟೈರ್, ಫೈಪ್ ಮತ್ತು ಫ್ಲೈವುಡ್ ಗೋಡೌನ್ ಆದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದೆ. ವಿಷಯ ತಿಳಿಯುತ್ತಿದ್ದಂತೆ ಐದಕ್ಕೂ ಹೆಚ್ಚು ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು, 30ಕ್ಕೂ ಹೆಚ್ಚು ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications