ಬೆಂಗಳೂರು: ಎಲೆಕ್ಟ್ರಿಕ್ ಬೈಕ್ ಶೋ ರೂಮ್‌​​​ನಲ್ಲಿ ಅಗ್ನಿ ಅವಘಡ

ಬೆಂಗಳೂರು, ಜನವರಿ, 27: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಗ್ನಿ ಅವಘಡ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಹಾಗೆಯೇ ಇಂದು (ಜನವರಿ 27) ನಗರದ ರಾಜಾಜಿನಗರ ಎಲೆಕ್ಟ್ರಿಕ್ ಬೈಕ್ ಶೋ ರೂಮ್‌ನಲ್ಲಿ ಅಗ್ನಿ ಅಗಘಡ ಸಂಭವಿಸಿದೆ. ಘಟನೆಯಲ್ಲಿ 10 ವಾಹನಗಳು ಸುಟ್ಟು ಭಸ್ಮವಾಗಿದ್ದು, 20ಕ್ಕೂ ಹೆಚ್ಚು ವಾಹನಗಳು ಭಾಗಶಃ ಹಾನಿಗೆ ಒಳಗಾಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಈ ಘಟನೆ ಇಂದು ಮಧ್ಯಾಹ್ನ ನಡೆದಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮನಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಕಟ್ಟಡದ ನೆಲಮಳಿಗೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Fire Accident at Electric Bike Showroom in Bengaluru

ಮೂರು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ಈ ವೇಳೆ ಮೂವರು ಸಿಬ್ಬಂದಿ ಶೋ ರೂಮ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆಯಲ್ಲಿ ಸಿಬ್ಬಂದಿಯು ಹೊರ ಬಂದು ಜೀವ ರಕ್ಷಣೆ ಮಾಡಿಕೊಂಡಿದ್ದು, ಓರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಆತನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್‌ಕುಮಾರ್ ರಸ್ತೆಯಲ್ಲಿರುವ ಪ್ಲಾನೆಟ್ ಹೋಂಡಾ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾಜಾಜಿನಗರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಾರ್ಜ್ ಹಾಕುವಾಗ ಶರ್ಟ್ ಸರ್ಕ್ಯೂಟ್ ಆಗಿ ಈ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತ ಆಗಿದ್ದು, ಕ್ವಾಲಿಟಿ ಇಲ್ಲದೆ ಇರುವ ಬ್ಯಾಟರಿಯಿಂದ ನಡೆದಿದೆ ಎನ್ನಲಾಗಿದೆ.

ಬಟ್ಟೆ ಕಾರ್ಖಾನೆಗೆ ಬೆಂಕಿ: ಕಳೆದ ಕೆಲವು ವಾರಗಳ ಹಿಂದೆಯಷ್ಟೇ ಬಟ್ಟೆ ಕಾರ್ಖಾನೆ ಬೆಂಕಿಗಾಹುತಿಯಾದ ಘಟನೆ ಆನೇಕಲ್‌ ಬಳಿ ನಡೆದಿತ್ತು.

ಇಡೀ ಕೈಗಾರಿಕಾ ಪ್ರದೇಶವು ಹೊಗೆಯಿಂದ ಕೂಡಿದ್ದು, ಅಕ್ಕಪಕ್ಕದಲ್ಲಿ ಬೆಂಕಿ ಆವರಿಸಿದೆ. ಪರಿಣಾಮ ಕೋಟಿಗಟ್ಟಲೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟ ಭಸ್ಮವಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇನ್ನು ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟು ಭಸ್ಮವಾಗಿದ್ದವು.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಶೋರೂಂ ಮುಚ್ಚಿರುವಾಗ ಈ ಅವಘಡ ಸಂಭವಿಸಿದೆ. ಕಟ್ಟಡದಿಂದ ದಟ್ಟ ಹೊಗೆ ಹೊರಡುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರಯ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+