• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು; ಹ್ಯಾಂಗ್ ಓವರ್‌ ಪಬ್‌ನಲ್ಲಿ ಬೆಂಕಿ ಅವಘಡ

|

ಬೆಂಗಳೂರು, ನವೆಂಬರ್ 16 : ಬೆಂಗಳೂರು ನಗರದ ಹೆಚ್‌ಎಸ್ಆರ್ ಲೇಔಟ್‌ನ ಪಬ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ.

ಸೋಮವಾರ ಮಧ್ಯಾಹ್ನ 12.25ರ ಸುಮಾರಿಗೆ ಹ್ಯಾಂಗ್ ಓವರ್ ಪಬ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ತಮ್ಮ ಮನೆಗೆ ಬೆಂಕಿ ಹಚ್ಚುತ್ತಿರುವ ಜನ, ಕಾರಣ ಮಾತ್ರ ಕರುಣಾಜನಕ

ವಿಷಯ ತಿಳಿದ ತಕ್ಷಣ ಮೂರು ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿದವು. ಬೆಂಕಿಯನ್ನು ನಂದಿಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದವು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

ಬೆಂಕಿ ನಂದಿಸುವ ವೇಳೆ ಕಟ್ಟಡ ಕುಸಿದು ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವು

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಬ್ ಹೊತ್ತಿ ಉರಿದಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ವಿದ್ಯುತ್ ತಂತಿ ತಗುಲಿ ಬೆಂಕಿ; ಕಟಾವಿಗೆ ಬಂದಿದ್ದ 8 ಎಕರೆ ಕಬ್ಬು ಭಸ್ಮ

ಕಳೆದ ವಾರ ಬೆಂಗಳೂರಿನ ಹೊಸಗುಡ್ಡದಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ನಡೆದಿತ್ತು. ರಾಸಾಯನಿಕ ಸಂಗ್ರಹ ಮಾಡಿದ್ದ ಗೋದಾಮಿಗೆ ಬೆಂಕಿ ಹೊತ್ತುಕೊಂಡಿತ್ತು. ಬ್ಯಾಟರಾಯನಪುರ ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

56 ಅಗ್ನಿ ಶಾಮಕದ ದಳದ ವಾಹನಗಳು ಸುಮಾರು 22 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು. ರಾಸಾಯನಿಕ ಸಂಗ್ರಹ ಮಾಡಿದ್ದ ಕಾರ್ಖಾನೆಯ ಮಾಲೀಕ ಸಜ್ಜನ್ ರಾಜ್ ಹಾಗೂ ಪತ್ನಿ ಕಮಲಾ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಅವರನ್ನು ಬಂಧಿಸಲಾಗಿದೆ.

English summary
Fire accident at Bengaluru HSR Layout Hangover pub. Fire engine rushed spot and situation under control.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X