ಯಲಹಂಕ ಕೆಪಿಟಿಸಿಎಲ್ ಘಟಕದಲ್ಲಿ ಬೆಂಕಿ; 15 ಸಿಬ್ಬಂದಿಗೆ ಗಾಯ

ಬೆಂಗಳೂರು, ಅಕ್ಟೋಬರ್ 02: ಯಲಹಂಕದ ಕೆಪಿಟಿಸಿಎಲ್ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಹಲವು ಸಿಬ್ಬಂದಿ ಗಾಯಗೊಂಡಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.

ಶುಕ್ರವಾರ ಮುಂಜಾನೆ 3.30ರ ವೇಳೆಗೆ ಕೆಪಿಟಿಸಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಈ ಸಮಯದಲ್ಲಿ ಘಟಕದಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದರು.

ಗಾಯಗೊಂಡ ಸಿಬ್ಬಂದಿಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಇಬ್ಬರು ಅಧಿಕಾರಿಗಳು ಮಾತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Fire Accident At KPTCL Plant In Yelahanka 15 Inured

"ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿತ್ತು. ಮಾಹಿತಿ ತಿಳಿದ ತಕ್ಷಣ 7 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿವೆ" ಎಂದು ಈಶಾನ್ಯ ವಿಭಾಗದ ಡಿಸಿಪಿ ಸಿ. ಕೆ. ಬಾಬ ಹೇಳಿದ್ದಾರೆ.

ಕೆಪಿಟಿಸಿಎಲ್ ಘಟಕದಲ್ಲಿ ಸ್ಪೋಟ ಉಂಟಾಗಿದೆ ಎಂಬ ಸುದ್ದಿಯ ಕುರಿತು ಪೊಲೀಸರು ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

350 ಮೆಗಾವಾಟ್ ಸಾಮರ್ಥ್ಯದ ಅನಿಲ ಆಧಾರಿತ ಕೆಪಿಟಿಸಿಎಲ್ ಘಟಕ ಇದಾಗಿದೆ. ಘಟನೆ ನಡೆಯುವಾಗ 15ಕ್ಕೂ ಹೆಚ್ಚು ಕಾರ್ಮಿಕರು ಘಟಕದಲ್ಲಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+