ನಾಯಂಡಳ್ಳಿ: ಬೆಳ್ಳಂಬೆಳಗ್ಗೆ ಕಾರು-ಬಿಎಂಟಿಸಿ ಬಸ್ ಅಪಘಾತ, ಹೊತ್ತಿ ಉರಿದ ಕಾರು
ಬೆಂಗಳೂರು, ಡಿಸೆಂಬರ್ 04: ಬೆಳ್ಳಂಬೆಳಗ್ಗೆ ಕಾರು ಹಾಗೂ ಬಿಎಂಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಳ್ಳಿ ಸಮೀಪದ ರಿಂಗ್‌ರೋಡ್‌ನಲ್ಲಿ ನಡೆದಿದೆ.
ಬಿಎಂಟಿಸಿ ಬಸ್ ರಿಂಗ್‌ರೋಡ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಈ ವೇಳೆ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ i20 ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ಚಾಲಕ ಹೊರ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೋಡ ನೋಡುತ್ತಿದ್ದಂತೆ ಕಾರು ಬೆಂಕಿ ಕೆನ್ನಾಲಿಗೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ ಬಿಎಂಟಿಸಿ ಬಸ್‌ಗೂ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನೆಯಲ್ಲಿ ಕಾರಿನಲ್ಲಿದ್ದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಇನ್ನು ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಯಂಡಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಐಷಾರಾಮಿ ಬಸ್‌ನಲ್ಲಿ ಅಗ್ನಿ ಅವಘಡ: ಓರ್ವ ಸಾವು
ಶಾಕ್ ಸರ್ಕ್ಯೂಟ್‌ನಿಂದ ಐಷಾರಾಮಿ ಬಸ್ ಸುಟ್ಟು ಕರಕಲಾಗಿರುವ ಘಟನೆ ನಲ್ಲಗೊಂಡ-ಮರಿಗೂಡ ಬೈಪಾಸ್ ರಸ್ತೆ ಬಳಿ ನಡೆದಿದೆ. ಹೈದರಾಬಾದ್‌ನಿಂದ ಚಿರಾಲಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು, ಓರ್ವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಂಕಿಗೆ ಆಹುತಿಯಾದ ಬಸ್ ಶ್ರೀ ಕೃಷ್ಣ ಟ್ರಾವೆಲ್ಸ್ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಾಕ್ ಸರ್ಕ್ಯೂಟ್‌ನಿಂದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಸಂಪೂರ್ಣ ಬಸ್ ಹೊತ್ತಿ ಉರಿದಿದೆ. ಅಪಘಾತದ ವೇಳೆ ಬಸ್ಸಿನಲ್ಲಿ 40 ಮಂದಿ ಪ್ರಯಾಣಿಕರಿದ್ದು, ಪ್ರಾಣ ಉಳಿಸಿಕೊಳ್ಳಲು ಹರಸಾಹಸಪಟ್ಟಿದ್ದಾರೆ. ಸಹಾಯಕ್ಕಾಗಿ ಮೂರು ಗಂಟೆಗಳ ಕಾಲ ರಸ್ತೆಯಲ್ಲಿ ಪ್ರಯಾಣಿಕರು ಪರದಾಡಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಸಂಪೂರ್ಣ ಬಸ್ ಸುಟ್ಟು ಕರಕಲಾಗಿದ್ದು, ಪ್ರಯಾಣಿಕರ ವಸ್ತುಗಳು ದಾಖಲೆಗಳು ಬೆಂಕಿಗಾಹುತಿಯಾಗಿದೆ ಎಂದು ವರದಿಯಾಗಿದೆ.












Click it and Unblock the Notifications