ಬೆಂಗಳೂರು ಕಲಾಗ್ರಾಮದಲ್ಲಿ ಬೆಂಕಿ ಅವಘಡ, ಅಪಾರ ಹಾನಿ
ಬೆಂಗಳೂರು, ಡಿಸೆಂಬರ್ 13: ಬೆಂಗಳೂರಿನ ಮಲ್ಲತ್ತಹಳ್ಳಿ ಬಳಿ ಇರುವ ಕಲಾಗ್ರಾಮದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು ಕೆಲಕಾಲ ಆತಂಕ ಸೃಷ್ಟಿ ಮಾಡಿತು.
ಬೆಳಗ್ಗೆ 5.30ರ ಸುಮಾರಿಗೆ ಕಲಾಗ್ರಾಮದಲ್ಲಿರುವ ಆಡಿಟೋರಿಯಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸುಮಾರು 40 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.
ಸೌಂಡ್ ಸಿಟ್ಟಂ, ಲೈಟ್ ರೂಂ, ಕುರ್ಚಿಗಳು ಹಾಗೂ ಇನ್ನಿತರೆ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ.












Click it and Unblock the Notifications