ಬೆಂಗಳೂರು: ಅಲಂಕಾರಿಕಾ ವಸ್ತುಗಳ ಸ್ಟೋರ್‌ನಲ್ಲಿ ಅಗ್ನಿ ಅವಘಡ
ಬೆಂಗಳೂರು, ಫೆಬ್ರವರಿ, 16: ಬೆಂಗಳೂರಿನಲ್ಲಿ ಅಗ್ನಿ ಅವಘಡ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲಿವೆ. ಹಾಗೆಯೇ ಇದೀಗ ಇಂದು (ಫೆಬ್ರವರಿ 16) ಅಲಂಕಾರಿಕಾ ವಸ್ತುಗಳ ಸ್ಟೋರ್ ಮಾಡಿದ್ದ ಜಾಗದಲ್ಲಿ ದಿಢೀರ್ ಹೊತ್ತಿ ಕಾಣಿಸಿಕೊಂಡ ಘಟನೆ ನಗರದ ಅರಮನೆ ಮೈದಾನದಲ್ಲಿ ನಡೆದಿದೆ.
ಡೆಕೊರೇಷನ್ ವೇಸ್ಟ್ ವಸ್ತುಗಳನ್ನು ಸಂಗ್ರಹ ಮಾಡುವ ಜಾಗದಲ್ಲಿ ಅಗ್ನಿ ಕಾಣಿಸಿಕೊಂಡಿದೆ. ಬೆಂಕಿ ಕಂಡ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಈ ಮಾಹಿತಿ ಮೇರೆಗೆ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.

ಬೈಕ್ ಶೋ ರೂಮ್‌ನಲ್ಲಿ ಅಗ್ನಿ ಅವಘಡ: ಇತ್ತೀಚೆಗಷ್ಟೇ ಬೆಂಗಳೂರಿನ ರಾಜಾಜಿನಗರ ಎಲೆಕ್ಟ್ರಿಕ್ ಬೈಕ್ ಶೋ ರೂಮ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 10 ವಾಹನಗಳು ಸುಟ್ಟು ಭಸ್ಮವಾಗಿದ್ದು, 20ಕ್ಕೂ ಹೆಚ್ಚು ವಾಹನಗಳು ಭಾಗಶಃ ಹಾನಿಗೆ ಒಳಗಾಗಿದ್ದವು. ಈ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ ಎಂದು ತಿಳಿದುಬಂದಿತ್ತು.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮನಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದರು. ಕಟ್ಟಡದ ನೆಲಮಳಿಗೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ಮೂರು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ಈ ವೇಳೆ ಮೂವರು ಸಿಬ್ಬಂದಿ ಶೋ ರೂಮ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆಯಲ್ಲಿ ಸಿಬ್ಬಂದಿಯು ಹೊರ ಬಂದು ಜೀವ ರಕ್ಷಣೆ ಮಾಡಿಕೊಂಡಿದ್ದು, ಓರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗೊಂಡಿದ್ದರು. ಆತನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿತ್ತು.
ರಾಜ್‌ಕುಮಾರ್ ರಸ್ತೆಯಲ್ಲಿರುವ ಪ್ಲಾನೆಟ್ ಹೋಂಡಾ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಚಾರ್ಜ್ ಹಾಕುವಾಗ ಶರ್ಟ್ ಸರ್ಕ್ಯೂಟ್ ಆಗಿ ಈ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತ ಆಗಿದ್ದು, ಕ್ವಾಲಿಟಿ ಇಲ್ಲದೆ ಇರುವ ಬ್ಯಾಟರಿಯಿಂದ ನಡೆದಿದೆ ಎನ್ನಲಾಗಿದೆ.
ಬಟ್ಟೆ ಕಾರ್ಖಾನೆಗೆ ಬೆಂಕಿ: ಕಳೆದ ಕೆಲವು ವಾರಗಳ ಹಿಂದೆಯಷ್ಟೇ ಬಟ್ಟೆ ಕಾರ್ಖಾನೆ ಬೆಂಕಿಗಾಹುತಿಯಾದ ಘಟನೆ ಆನೇಕಲ್ ಬಳಿ ನಡೆದಿತ್ತು.
ಇಡೀ ಕೈಗಾರಿಕಾ ಪ್ರದೇಶವು ಹೊಗೆಯಿಂದ ಕೂಡಿದ್ದು, ಅಕ್ಕಪಕ್ಕದಲ್ಲಿ ಬೆಂಕಿ ಆವರಿಸಿದೆ. ಪರಿಣಾಮ ಕೋಟಿಗಟ್ಟಲೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.
ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟ ಭಸ್ಮವಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇನ್ನು ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟು ಭಸ್ಮವಾಗಿದ್ದವು.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಶೋರೂಂ ಮುಚ್ಚಿರುವಾಗ ಈ ಅವಘಡ ಸಂಭವಿಸಿದೆ. ಕಟ್ಟಡದಿಂದ ದಟ್ಟ ಹೊಗೆ ಹೊರಡುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರಯ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.












Click it and Unblock the Notifications