ಸಿಎಂ ಕುಮಾರಸ್ವಾಮಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ
ಬೆಂಗಳೂರು, ಮಾರ್ಚ್ 8: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಬೆಂಗಳೂರು ಉತ್ತರ ತಾಲೂಕಿನ ದಾಸನಪುರದ ಕುದುರೆಗೆರೆಯಲ್ಲಿ ಬಹುಮಹಡಿ ಕಟ್ಟಡ ಉದ್ಘಾಟನೆಗೆಂದು ತೆರಳಿದ್ದರು. ಕಾರ್ಯಕ್ರಮ ನಡೆಯುವ ವೇಳೆ ವೇದಿಕೆ ಪಕ್ಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.
ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ, ಯಾವುದೇ ಅಪಾಯ ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.