ಬೆಂಗಳೂರಿನ ಎಂಎಸ್ ಬಿಲ್ಡಿಂಗ್‌ನಲ್ಲಿ ಅಗ್ನಿ ಅವಘಡ
ಬೆಂಗಳೂರು, ಡಿಸೆಂಬರ್ 10: ಬೆಂಗಳೂರಿನಲ್ಲಿರುವ ಎಂಎಸ್ ಬಿಲ್ಡಿಂಗ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮುಖ್ಯಮಂತ್ರಿಗಳ ಇ- ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಅಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನವೆಂಬರ್ 6ರಂದು ಶಾರ್ಟ್ ಸರ್ಕ್ಯೂಟ್‌ನಿಂದ ವಿಧಾನಸೌಧದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವಿಧಾನಸೌದ ಎರಡನೇ ಮಹಡಿಯಲ್ಲಿರುವ ಆರ್ಥಿಕ ಇಲಾಖೆ ವಿಶೇಷ ಕಾರ್ಯದರ್ಶಿ ಪದ್ಮಾವತಿ ಅವರ ಕಚೇರಿಯ ಎರಡು ಎ.ಸಿಗಳ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿತು. ಇದರಿಂದ ಕೆಲಕಾಲ ವಿಧಾನಸೌಧ ಸಿಬ್ಬಂದಿ ಆತಂಕ ಮನೆ ಮಾಡಿತ್ತು.












Click it and Unblock the Notifications