ಬೆಳ್ಳಂಬೆಳಗ್ಗೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ: ಹೊತ್ತಿ ಉರಿದ ಬೈಕ್‌ಗಳು

ಬೆಂಗಳೂರು, ಜನವರಿ 16: ಬೆಳ್ಳಂಬೆಳಗ್ಗೆ ಬೆಂಗಳೂರು ನಗರದ ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ ಸಂಭವಿಸಿದ್ದು 4 ಬೈಕ್​ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಇಂದು( ಜನವರಿ 16) ಬೆಳಗ್ಗೆ ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ವಾಹನಗಳನ್ನು ಪಾರ್ಕ್ ಮಾಡಲಾಗಿದ್ದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 3 ಸ್ಕೂಟಿ 1 ಬೈಕ್​ಗೆ ಬೆಂಕಿ ತಗುಲಿದೆ. ನೋಡನೋಡುತ್ತಿದ್ದಂತೆ ಬೆಂಕಿ ಧಗಧಗ ಹೊತ್ತಿ ಉರಿದಿದ್ದು, ನಾಲ್ಕು ಬೈಕ್​ಗಳು ಸುಟ್ಟು ಕರಕಲಾಗಿವೆ. ಈವರೆಗೆ ಬೆಂಕಿ ಹೇಗೆ ಹೊತ್ತಿಕೊಂಡಿತು ಎನ್ನುವುದಕ್ಕೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

Fire Breaks Out Near Rajajinagar Metro Station

ಬೆಂಕಿ ಅವಘಡದ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡ ಸಂಬಂಧ ಪ್ರಕರಣ ದಾಖಲಾಗಿದೆ.

ಯಲಹಂಕದಲ್ಲಿ ಸಿಲಿಂಡರ್ ಸ್ಫೋಟ: ಐದು ಮನೆಗಳಿಗೆ ಹಾನಿ

ಬೆಂಗಳೂರು: ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಏಳು ಜನರು ಗಾಯಗೊಂಡ ಘಟನೆ ನಗರದ ಯಲಹಂಕದ ಎಲ್​ಬಿಎಸ್​​ ಲೇಔಟ್​ನಲ್ಲಿ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Fire Breaks Out Near Rajajinagar Metro Station

ದೆಹಲಿ ಮೂಲದ ಹಸ್ಮಾ ಬಾನು ಎಂಬುವರು ಮನೆ ಕೆಲಸ ಮಾಡಿಕೊಂಡು ನಗರದಲ್ಲಿ ವಾಸವಾಗಿದ್ದಾರೆ. ಹಸ್ಮಾ ಬಾನು ಅವರ ಸಿಲಿಂಡರ್​ ಸ್ಫೋಟಗೊಂಡಿದೆ. ಅವಘಡದಲ್ಲಿ ಸಲ್ಮಾ, ಶಾಹಿದ್ ಸೇರಿದಂತೆ ಐವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಪಸಿಯಾ ಭಾನು ಮತ್ತು ಹಸ್ಮಾ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಇನ್ನು ಇದೇ ವೇಳೆ ಶಾರ್ಟ್ ಸರ್ಕ್ಯೂಟ್ ಕೂಡ ಆಗಿದ್ದು, ವಿದ್ಯುತ್‌ ಪ್ರವಹಿಸಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಹಾನಿಯಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+