ಬೆಂಗಳೂರಿನ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಬೆಂಗಳೂರು, ನವೆಂಬರ್ 10: ಬೆಂಗಳೂರಿನ ಹೊಸಗುಡ್ಡದ ಹಳ್ಳಿಯಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ರಾಸಾಯನಿಕ ಕಾರ್ಖಾನೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಮಾತ್ರದಲ್ಲಿ ಬೆಂಕಿ ಎಲ್ಲೆಡೆ ಆವರಿಸಿದ್ದು, ಎಷ್ಟೇ ಪ್ರಯತ್ನ ಪಡುತ್ತಿದ್ದರೂ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬ್ಯಾಟರಾಯನಪುರ ಪೊಲೀಸರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕ್ಷಣಕ್ಷಣವೂ ಬೆಂಕಿ ಹಬ್ಬುತ್ತಿರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Fire Broke Out At Chemical Factory In Hosaguddada Halli

ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದು, ಕಾರ್ಖಾನೆಯ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ವ್ಯಾಪಿಸುತ್ತಿದೆ. ಫ್ಯಾಕ್ಟರಿ ಸಮೀಪ ನಿಲ್ಲಿಸಿದ್ದ ವಾಹನಗಳೂ ಬೆಂಕಿಗೆ ಆಹುತಿಯಾಗಿವೆ. ಸದ್ಯಕ್ಕೆ ಕಾರ್ಖಾನೆ ಸಮೀಪದ ಮನೆಗಳಲ್ಲಿದ್ದವರನ್ನು ಪೊಲೀಸರು ಸ್ಥಳಾಂತರಿಸುತ್ತಿದ್ದಾರೆ. ಇಡೀ ರಸ್ತೆಯಲ್ಲಿ ಎಲ್ಲಿ ನೋಡಿದರೂ ಹೊಗೆ ಆವರಿಸಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.

Recommended Video

      BiharElectionResult : ತಮ್ಮನ ಪರವಾಗಿ ಟ್ವೀಟ್ ಮಾಡಿದ ತೇಜ್ | Oneindia Kannada

      ಬೆಂಕಿ ಅವಘಡದಿಂದ ಸಂಭವಿಸಿದ ನಷ್ಟದ ಕುರಿತು ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದರ ಕುರಿತು ಮಾಹಿತಿ ದೊರೆತಿಲ್ಲ. ಸದ್ಯಕ್ಕೆ ವ್ಯಾಪಕವಾಗಿ ಆವರಿಸುತ್ತಿರುವ ಬೆಂಕಿ ನಂದಿಸುವ ಕಾರ್ಯದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ನಿರತರಾಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+