Breaking: ಬೆಂಗಳೂರಿನ ಶಾಪಿಂಗ್ ಮಾಲ್ನಲ್ಲಿ ಅಗ್ನಿ ಅವಘಡ; ಜೀವ ಉಳಿಸಿದ ವೀಕೆಂಡ್ ಕರ್ಫ್ಯೂ
ಬೆಂಗಳೂರು, ಜನವರಿ 15: ರಾಜಧಾನಿ ಬೆಂಗಳೂರಿನ ಶಾಪಿಂಗ್ ಮಾಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಕೆರೆ ಗೇಟ್ ಬಳಿಯಿರುವ ಶಾಪಿಂಗ್ ಮಾಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೀಟ್ ಪೊಲೀಸರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. 6 ಆಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ನಿರಂತರ ಎರಡು ಗಂಟೆಗಳ ಕಾರ್ಯಾಚರಣೆ ಬಳಿ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಶಾಪಿಂಗ್ ಮಾಲ್ನ ಗ್ರೌಂಡ್ ಪ್ಲೋರ್ನಲ್ಲಿರುವ ಸೂಪರ್ ಮಾರ್ಕೆಟ್ನ ಸ್ಟೋರೇಜ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಶುಕ್ರವಾರ ರಾತ್ರಿಯಿಂದ ನಗರದಲ್ಲಿ ವಾರಾಂತ್ಯ ಕರ್ಫ್ಯೂ ಹಿನ್ನೆಲೆ ಶಾಪಿಂಗ್ ಮಾಲ್ನಲ್ಲಿ ಯಾವುದೇ ಜನರು, ಸಿಬ್ಬಂದಿ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಶಾಪಿಂಗ್ ಮಾಲ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.
Recommended Video
ಕೆಲ ದಿನಗಳ ಹಿಂದೆ ನಗರದ ಕೋಣನಕುಂಟೆ ಕ್ರಾಸ್ ಮೆಟ್ರೋ ನಿಲ್ದಾಣ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು, ದಟ್ಟವಾದ ಹೊಗೆಯಿಂದ ರಸ್ತೆಯೂ ಕಾಣದಂಥ ಪರಿಸ್ಥಿತಿ ನಿರ್ಮಾಣವಾಗಿತ್ತು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications