ಬೆಂಗಳೂರಿನಲ್ಲಿ ಬೆಂಕಿ ಅವಘಡ: 20ಕ್ಕೂ ಅಧಿಕ ಶೆಡ್ ಭಸ್ಮ
ಬೆಂಗಳೂರು ಏಪ್ರಿಲ್ 13: ಬೆಂಗಳೂರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು 20ಕ್ಕೂ ಹೆಚ್ಚು ಶೆಡ್‌ಗಳು ಸುಟ್ಟು ಭಸ್ಮವಾಗಿವೆ. ಕೂಲಿ ಕಾರ್ಮಿಕರು ವಾಸವಿದ್ದ ಶೆಡ್ಡುಗಳಿಗೆ ಕಳೆದ ದಿನ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಶೆಡ್ಡುಗಳು ಒಂದೊಂದಾಗಿ ಸುಟ್ಟು ಕರಕಲಾಗಿವೆ.
ಹೌದು ಬೆಂಗಳೂರಿನ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ ಈ ಘಟನೆ ನಡೆದಿದೆ. ಕೂಲಿ ಕಾರ್ಮಿಕರಿಗಾಗಿ ಆಟಿಕೆ ಫ್ಯಾಕ್ಟರಿಯೊಂದು ಈ ಶೆಡ್ಡುಗಳನ್ನು ನಿರ್ಮಾಣ ಮಾಡಿತ್ತು. ಸುಮಾರು 50 ಶೆಡ್ಡುಗಳಲ್ಲಿ 20ಕ್ಕೂ ಅಧಿಕ ಶೆಡ್‌ಗಳು ಬೆಂಕಿಗಾಹುತಿಯಾಗಿವೆ. ಈ ಶೆಡ್ಡುಗಳಲ್ಲಿ ಇದ್ದ ಆಟಿಕೆಗಳು ಸೇರಿದಂತೆ ಕಾರ್ಮಿಕರ ಬಟ್ಟೆ, ಹಾಸಿಗೆ,. ಹಣ ಇನ್ನಿತರ ವಸ್ತುಗಳು ಸುಟ್ಟು ಹೋಗಿವೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆಗೆ ಸೂಕ್ತ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.
ಈ ಬೆಂಕಿ ಅವಘಡದಿಂದಾಗಿ ರಾಯಚೂರು ಕೂಲಿ ಕಾರ್ಮಿಕನ ಜೀವನ ಬೀದಿಗೆ ಬಂದಿದೆ. ಕಷ್ಟಪಟ್ಟು ದುಡಿದು ಶೆಡ್‌ನಲ್ಲಿ ಇಟ್ಟ ಹಣವೆಲ್ಲಾ ಸುಟ್ಟು ಕರಕಲಾಗಿ ಹೋಗಿದ್ದು ಕಾರ್ಮಿಕ ಗೋಳಾಡಿದ್ದಾನೆ. ಬೆಂಕಿಗೆ ಆಹುತಿಯಾದ ಶೆಡ್‌ಗಳನ್ನು ತುಂಬಾ ಹತ್ತಿರದಲ್ಲಿ ನಿರ್ಮಾಣ ಮಾಡಲಾಗಿದೆ. ಆರಂಭದಲ್ಲಿ ಒಂದು ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಆ ಬೆಂಕಿ ಕೆನ್ನಾಲಿಗೆಗೆ ಉಳಿದ ಶೆಡ್‌ಗಳು ಆಹುತಿಯಾಗಿವೆ.
ವೀರನಪಾಳ್ಯ ಮುಖ್ಯ ರಸ್ತೆಯ ಖಾಸಗಿ ಶಾಲೆಯ ಪಕ್ಕದಲ್ಲಿ ಇರುವ ಶೆಡ್‌ಗಳನ್ನು ಆಟಿಕೆ ಫ್ಯಾಕ್ಟರಿ ಕೂಲಿ ಕಾರ್ಮಿಕರಿಗಾಗಿ ನಿರ್ಮಿಸಿ ಕೊಟ್ಟಿತ್ತು. ಅನೇಕ ವರ್ಷಗಳಿಂದ ಈ ಚಿಕ್ಕ ಚಿಕ್ಕ ಶೆಡ್‌ಗಳಲ್ಲಿ ನೂರಕ್ಕೂ ಹೆಚ್ಚು ಜನ ಕೂಲಿ ಕಾರ್ಮಿಕರು ವಾಸವಿದ್ದರು. ಕಳೆದ ರಾತ್ರಿ ಬೆಂಕಿ ಹೊತ್ತಿ ಉರಿದಿದ್ದರಿಂದ ದೇವಸ್ಥಾನದ ಅಂಗಳದಲ್ಲಿ ರಾತ್ರಿ ಕೂಲಿ ಕಾರ್ಮಿಕರು ಹಾಗೂ ಮಕ್ಕಳು, ಮಹಿಳೆಯರು ಮಲಗಿದ್ದಾರೆ.
ಅಲ್ಲದೆ ಫ್ಯಾಕ್ಟರಿ ಮಾಲೀಕ ಇಂದು ಬೆಳಗಿನ ಜಾವ ಬಂದು ಇತರೆ ಶೆಡ್‌ಗಳಲ್ಲಿರುವ ಜನರನ್ನು ಆದಷ್ಟು ಬೇಗ ಖಾಲಿ ಮಾಡುವಂತೆ ತಿಳಿಸಿದ್ದು ಕಾರ್ಮಿಕರು ಚಿಂತೆಗೀಡಾಗಿದ್ದಾರೆ. ಇದ್ದಕ್ಕಿದ್ದಂತೆ ಹೋಗಲು ಹೇಳಿದರೆ ಎಲ್ಲಿಗೆ ಹೋಗುವುದು? ನಮ್ಮ ಬಳಿ ಇದ್ದ ಹಣ, ಸಾಮಾಗ್ರಿಗಳೆಲ್ಲಾ ಸುಟ್ಟು ಹೋಗಿವೆ ಎಂದು ಕೂಲಿ ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ. ಸರ್ಕಾರ ಏನಾದ್ರು ಸಹಾಯ ಮಾಡಬೇಕು ಎಂದು ಬೇಡಿಕೊಂಡಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications