ಎಲ್‌ಐಸಿ ಕಚೇರಿಯಲ್ಲಿ ಬೆಂಕಿ: ಕಡತಗಳು ಬೆಂಕಿಗಾಹುತಿ
ಬೆಂಗಳೂರು, ಮಾರ್ಚ್ 13: ಎಲ್ ಐಸಿ ಕಚೇರಿಯಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು ಸಾಕಷ್ಟು ದಾಖಲೆಗಳು ಬೆಂಕಿಗಾಹುತಿಯಾಗಿರುವ ಘಟನೆ ನಗರದ ಎಂಜಿ ರಸ್ತೆಯಲ್ಲಿ ನಡೆದಿದೆ.
ಬೆಳಗ್ಗೆ 6.30ರ ಸುಮಾರಿಗೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ವೃತ್ತ ಬಳಿ ಇರುವ ಎಲ್ ಐ ಸಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಲ್ಲಿದ್ದ ಸಾವಿರಾರು ದಾಖಲೆಗಳು ಅಗ್ನಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಹೇಳಲಾಗಿದೆ.

ಕಚೇರಿಗೆ ಬೆಂಕಿ ತಗುಲಿರುವ ಕಾರಣ ಸಾವಿರಾರು ಕಡತಗಳು ಬೆಂಕಿಗೆ ಅಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು, ಆದರೆ ಕೆಲಸ ಸಮಯ ಬಳಿಕವಷ್ಟೇ ಬೆಂಕಿಯ ಜ್ವಾಲೆಯನ್ನು ಕಡಿಮೆ ಮಾಡಲು ಸಾಧ್ಯವಾಯಿತು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












Click it and Unblock the Notifications