Breaking: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ: ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ!
ಬೆಂಗಳೂರು ಆಗಸ್ಟ್ 19: ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರೈಲಿನ ಇಂಜಿನ್ ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದು ಪ್ರಯಾಣಿಕರು ಆತಂಕಗೊಂಡಿದ್ದಾರೆ.
ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಈ ಬೆಂಕಿ ರೈಲಿನ ಎರಡು ಕೋಚ್‌ಗಳಿಗೆ ಆವರಿಸಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.

ನಾಲ್ಕೈದು ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.












Click it and Unblock the Notifications