ಬೆಂಗಳೂರಿನಲ್ಲಿ ಅಗ್ನಿ ದುರಂತ: ಕರ್ಲಾನ್ ಕಾರ್ಖಾನೆಯಲ್ಲಿ ಧಗಧಗಿಸಿದ ಬೆಂಕಿ
ಬೆಂಗಳೂರು ಏಪ್ರಿಲ್ 1: ಬೆಂಗಳೂನಿಲ್ಲಿ ಭಾರೀ ಅಗ್ನಿ ಅವಘಡವೊಂದು ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಲೂರು ಬಳಿಯಿರುವ ಕರ್ಲಾನ್ ಕಾರ್ಖಾನೆಗೆ ಬೆಂಕಿ ಬಿದ್ದಿ ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಿಕ್ಕೆ ಚಾಚಿಕೊಂಡಿದ್ದು ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಬೆಂಗ್ಗೆ ಈ ಘಟನೆ ನಡೆದಿದ್ದು ಅದಾಗಲೇ ಕೆಲವು ಜನ ಕಾರ್ಮಿಕರು ಕಾರ್ಖಾನೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಬೆಂಕಿ ಹರಡಿಕೊಳ್ಳುತ್ತಿದ್ದೆ ಕಾರ್ಮಿಕರು ಕಾರ್ಖಾನೆಯಿಂದ ಹೊರ ಬಂದಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಘಿವೆ. ಅಕ್ಕ-ಪಕ್ಕದಲ್ಲಿ ಆಯಿಲ್ ಇನ್ನಿತರೆ ಕಾರ್ಖಾನೆಗೆ ಬೆಂಕಿ ಹರಡಿಕೊಳ್ಳುವ ಆತಂಕ ಹೆಚ್ಚಾಗಿದೆ.
ನೆಲಮಂಗಲ ಅಗ್ನಿಶಾಮಕ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೈಟೆನ್ಶನ್ ವೈರ್ ಕಾರ್ಖಾನೆ ಮೇಲೆ ಬಿದ್ದಿರೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರಿಂದ ಬೆಕ್ಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.












Click it and Unblock the Notifications