ಪಟಾಕಿ ಹಚ್ಚಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಾಟಾಳ್!
ಬೆಂಗಳೂರು, ನವೆಂಬರ್ 09: ಕೋವಿಡ್ ಹಿನ್ನಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸದಂತೆ ಕರ್ನಾಟಕ ಸರ್ಕಾರ ಸೂಚನೆ ನೀಡಿದೆ. ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ. ಸರ್ಕಾರದ ವಿರುದ್ಧ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪಟಾಕಿ ಸಿಡಿಸಿ ಅವರು ಪ್ರತಿಭಟನೆ ನಡೆಸಿದ್ದಾರೆ.

"ಮೂರು ದಿನ ಪಟಾಕಿ ಹೊಡೆದರೆ ಏನೂ ಆಗುವುದಿಲ್ಲ. ಪಟಾಕಿ ಹೊಗೆಯಿಂದಲೇ ಕೊರೊನಾ ಬರುತ್ತದೆ ಎಂದು ಹೇಳಿದ್ದು ಯಾರು?. ವೈಜ್ಞಾನಿಕವಾಗಿ ಯಾವ ದೇಶ ಈ ಬಗ್ಗೆ ಸಂಶೋಧನೆ ನಡೆಸಿದೆ?" ಎಂದು ವಾಟಾಳ್ ನಾಗರಾಜ್ ಪ್ರಶ್ನಿಸಿದರು.

"ಪಟಾಕಿಯಿಂದ ಕೊರೊನಾ ಬರುತ್ತದೆ ಎಂದು ಹೇಳಿದ ಮುಖ್ಯಮಂತ್ರಿ ದೇಶದಲ್ಲಿ ಯಡಿಯೂರಪ್ಪ ಅವರೊಬ್ಬರೇ. ದೀಪಾವಳಿಗೆ ಪಟಾಕಿ ಹೊಡೆಯಬೇಕು. ಪಟಾಕಿ ಹೊಡೆಯಲು ಸಂಪೂರ್ಣ ಬೆಂಬಲವಿದೆ" ಎಂದು ವಾಟಾಳ್ ನಾಗರಾಜ್ ಹೇಳಿದರು.
ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ನಿರ್ದೇಶದಂತೆ ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು ಎಂದು ಮಾರ್ಗಸೂಚಿ ಹೊರಡಿಸಿದೆ. ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಹಸಿರು ಪಟಾಕಿ ಮಾರಾಟ ಮಾಡಬಹುದು ಎಂದು ಹೇಳಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್
ಕೋವಿಡ್19 ಸೋಂಕು ನಿಯಂತ್ರಿಸಲು ರಾಜ್ಯಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ಬಾರಿ ದೀಪಾವಳಿ ಹಬ್ಬದ ಸರಳ ಆಚರಣೆ ಸೂಕ್ತವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪರಿಸರ-ಸ್ನೇಹಿ ಪಟಾಕಿ ಬಳಸಿ ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸಲು ಮುಖ್ಯಮಂತ್ರಿ @BSYBJP ಮನವಿ ಮಾಡಿದ್ದಾರೆ. pic.twitter.com/WgVKnEVg0k
— CM of Karnataka (@CMofKarnataka) November 6, 2020












Click it and Unblock the Notifications