ಬೆಂಗಳೂರು: ಖಾಸಗಿ ಕಂಪನಿ ಮಾಲೀಕನ ಮೇಲೆ ಗುಂಡಿನ ದಾಳಿ
ಬೆಂಗಳೂರು, ಜೂನ್ 2: ಖಾಸಗಿ ಕಂಪನಿ ಮಾಲೀಕನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆದಿದ್ದು ಪ್ರಾಮಾಪಾಯದಿಂದ ಪಾರಾದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ಶನಿವಾರ ನಡೆದಿದೆ.
ಕೋರಮಂಗಲದ ರಹೇಜಾ ಆರ್ಕೆಡ್‌ನ 3ನೇ ಮಹಡಿಯಲ್ಲಿ ವಾಸಿಸುತ್ತಿದ್ದ ಖಾಸಗಿ ಕಂಪನಿ ಮಾಲೀಕನ ಮೇ 3 ಸುತ್ತು ಗುಂಡಿನ ದಾಳಿ ನಡೆದಿದೆ. ತಲೆ ಭಾಗದಲ್ಲಿ ತರಚಿದ ಗಾಯಗಳಾಗಿದ್ದು ಸ್ವಲ್ಪಸರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನ ಸುಮಾರು 2 ಗಂಟೆಗೆ ಘಟನೆ ನಡೆದಿದೆ. ಆರೋಪಿಗಳ ಬಂಧನಕ್ಕೆ 3 ವಿಶೇಷ ತಂಡಗಳನ್ನು ಪೊಲೀಸರು ರಚನೆ ಮಾಡಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications