ರೌಡಿ ಶೀಟರ್ ರೂಪೇಶ್ ಮೇಲೆ ಪೊಲೀಸರ ಫೈರಿಂಗ್
ಬೆಂಗಳೂರು, ಮಾರ್ಚ್ 28: ರೌಡಿ ಶೀಟರ್ ರೂಪೇಶ್ ಅಲಿಯಾಸ್ ನಿರ್ಮಲ ಮೇಲೆ ಬುಧವಾರ ಕಾಟನ್ ಪೇಟೆ ಬಳಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ರೂಪೇಶ್ ಮೇಲೆ ಹಲವಾರು ಪ್ರಕಣಗಳು ದಾಖಲಾಗಿತ್ತು. 3 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ, ಪೊಲೀಸರು ಆತನನ್ನು ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಶೋಧ ನಡೆಸುತ್ತಿದ್ದರು, ಆತಮ ಕೋರ್ಟಿಗೂ ಹಾಜರಾಗದೆ ತಲೆ ಮರೆಸಿಕೊಂಡಿದ್ದ, ಬುಧವಾರ ಬೆಳಗ್ಗೆ ಪೊಲೀಸ್ ಕೈಗೆ ಸಿಕ್ಕಿಬಿದ್ದಿದ್ದಾನೆ. ಆತನನ್ನು ಬಂಧಿಸಲು ಯತ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ.

ಕಾಟನ್ ಪೇಟೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕುಮಾರಸ್ವಾಮಿ ಅವರು ತಮ್ಮ ಆತ್ಮರಕ್ಷಣೆಗಾಗಿ ರೂಪೇಶ್ ಮೇಲೆ ಗುಂಡು ಹಾರಿಸಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.











Click it and Unblock the Notifications