ಮೊದಲು ಉತ್ತರ ಕೊಡಿ, ಅಂಜಿಕೆ ಯಾಕೆ? ಸಿದ್ದರಾಮಯ್ಯ

ಬೆಂಗಳೂರು, ಜುಲೈ 8: ಕೊರೊನಾ ವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಖರೀದಿಸಿರುವ ವೈದ್ಯಕೀಯ ಸಾಮಾಗ್ರಿಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ''ಮೊದಲು ನಾನು ಬರೆದಿರುವ ಪತ್ರಗಳಿಗೆ ಉತ್ತರ ಕೊಡಿ, ಆಮೇಲೆ ವಿಧಾನಸೌಧಕ್ಕೆ ಬರುತ್ತೇನೆ'' ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

Recommended Video

      INDO-CHINA : We stand with India : Mark Meadows | USA | Oneindia Kannada

      ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಯಡಿಯೂರಪ್ಪ ''ವೈದ್ಯಕೀಯ ಸಾಮಾಗ್ರಿ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ. ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರಾಗಿ ವಿಧಾನಸೌಧಕ್ಕೆ ಬಂದು ಅಗತ್ಯ ದಾಖಲೆಗಳನ್ನು ಪರಿಶೀಲಿಸಿಲಿ. ಒಂದು ವೇಳೆ ಅಕ್ರಮ ಸಾಬೀತಾದರೆ ಕ್ರಮ ತೆಗೆದುಕೊಳ್ಳುತ್ತೇವೆ'' ಎಂದು ಹೇಳಿದ್ದರು.

      ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ''ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಅವರು, ದಾಖಲೆಗಳನ್ನು ಪರಿಶೀಲಿಸಲು ವಿಧಾನಸೌಧಕ್ಕೆ ನನ್ನನ್ನು ಆಹ್ಹಾನಿಸಿದ್ದಾರೆ.‌ ಕಳೆದ ಮೂರು ತಿಂಗಳಲ್ಲಿ‌ ಮಾಹಿತಿ ಕೋರಿ‌ ಕನಿಷ್ಠ 20 ಪತ್ರ ಬರೆದಿದ್ದೇನೆ. ಮೊದಲು ಅವುಗಳಿಗೆ ಉತ್ತರ ಕೊಡಿ. ಮಾಹಿತಿ ನೀಡಲು ಯಾಕೆ ಅಂಜಿಕೆ?'' ಎಂದು ಪ್ರಶ್ನಿಸಿದ್ದಾರೆ.

      First answer my letters siddaramaiah asked to govt

      ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಈವರೆಗೆ 3320 ಕೋಟಿ ರೂ. ಖರ್ಚು ಮಾಡಿದೆ. ಆದರೆ, 815 ಕೋಟಿಗೆ ಲೆಕ್ಕವೇ ಇಲ್ಲ. ಉಪಕರಣಗಳನ್ನು ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಹಣ ನೀಡಿ ಖರೀದಿ ಮಾಡಲಾಗಿದೆ. ವೈದ್ಯಕೀಯ ಸಾಮಾಗ್ರಿ ಖರೀದಿಯಲ್ಲಿ 2,200 ಕೋಟಿ ಭ್ರಷ್ಟಾಚಾರ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿ ವಿವರ ನೀಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+