Bengaluru Rain: ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ

ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಮತ್ತು ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಆದರೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೂ ಮಳೆ ದರ್ಶನ ನೀಡಿಲ್ಲ.

ಗುರುವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿತ್ತು. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ದಾಖಲಾಗಿದೆ.

First Rain of the Year in Bengaluru Rural and Mandya Districts

ಗುರುವಾರ ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಪಟ್ಟಣದಲ್ಲಿ ಸಾಧಾರಣ ಮಳೆಯಾಗಿದೆ. ಪೃಥ್ವಿ ರೆಡ್ಡಿ ಎನ್ನುವವರು ಎಕ್ಸ್ ಖಾತೆಯಲ್ಲಿ ಮಳೆಯ ವಿಡಿಯೋ ಹಂಚಿಕೊಂಡಿದ್ದು, ಈ ವರ್ಷದ ಮೊದಲ ಮಳೆ ಎಂದು ಬರೆದಿದ್ದಾರೆ.

ಮಂಡ್ಯದಲ್ಲಿ ಉತ್ತಮ ಮಳೆ

ಇನ್ನು ಮಂಡ್ಯ ಜಿಲ್ಲೆಯಲ್ಲಿ ಕೂಡ ವರ್ಷದ ಮೊದಲ ಮಳೆ ಜನರಲ್ಲಿ ಸಂತಸ ತಂದಿದೆ. ಮಂಡ್ಯ ನಗರದಲ್ಲಿ ಗುರುವಾರ ಸಂಜೆ ಮಳೆ ಆರಂಭವಾಗಿದ್ದು, ರಾತ್ರಿ ವೇಳೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗನಲು, ನೆಲ್ಲಿಗೆರೆ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಕನಕಪುರದ ಹಾರೋಹಳ್ಳಿಯಲ್ಲಿ ಕೂಡ ಸಾಧಾರಣ ಮಳೆಯಾಗಿದ್ದು, ಅಂತೂ ಇಂತೂ ಬೆಂಗಳೂರು ಸಮೀಪದಲ್ಲಿ ಮಳೆಯಾಗುತ್ತಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಮಳೆಯಾಗಿದೆ.

ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಗುರುವಾರ ಧಾರವಾಡ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ವ್ಯಾಪಕ ಮಳೆಯಾಗಿದೆ. ಧಾರವಾಡ ಮಾತ್ರವಲ್ಲದೆ ಹುಬ್ಬಳ್ಳಿ ನಗರದಲ್ಲಿ ಕೂಡ ಉತ್ತಮ ಮಳೆಯಾಗಿದೆ. ಸತತ ಎರಡನೇ ದಿನ ಧಾರವಾಡ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು ಜನರ ಸಂತಸ ಹೆಚ್ಚಿಸಿದೆ.

ಬೆಳಗಾವಿ, ಹಾವೇರಿ, ದಾವಣಗೆರೆ, ಬಳ್ಳಾರಿ, ಗದಗ, ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+