ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೌನ ಮುರಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಸೆ. 07: ಡ್ರಗ್ಸ್ ವಿಚಾರ ಮಳೆಗಾಲದ ಈ ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರ ಹಾಗೂ ವಿರೋಧ ಪಕ್ಷಗಳ ಜಟಾಪಟಿಗೆ ಕಾರಣವಾಘುವ ಎಲ್ಲ ಸಾಧ್ಯತೆಗಳಿವೆ. ಈಗಾಗಲೇ ಕಾಂಗ್ರೆಸ್ ಪಕ್ಷ ಅಧಿವೇಶನಕ್ಕೆ ತಯಾರಿ ನಡೆಸಿದ್ದು, ಡ್ರಗ್ಸ್, ಕೊರೊನಾ ಹಾಗೂ ನೆರೆ ಪರಿಸ್ಥಿತಿ ನಿರ್ವಹಣೆ ಕುರಿತು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಕುರಿತು ಚರ್ಚೆ ನಡೆಸಿದೆ.

Recommended Video

ಕಣ್ಣೀರಿಡುತ್ತ Zameer Ahmedರನ್ನು ಬೇಡಿಕೊಂಡರ Sanjjanaa Galrani | Oneindia Kannada

ಜೊತೆಗೆ ಡ್ರಗ್ಸ್ ವಿಚಾರವಾಗಿಯೂ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧತೆ ಆರಂಭಿಸಿದೆ. ಡ್ರಗ್ಸ್ ವಿಚಾರದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸಿದ್ದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಜೊತೆಗೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ಮಾಡಿದ್ದರು. ಇದೀಗ ಅವರು ಬಂಧನಕ್ಕೆ ಒಳಗಾಗಿರುವುದು ಬಿಜೆಪಿಯನ್ನು ಮುಜುಗರಕ್ಕೆ ಈಡು ಮಾಡಿದೆ. ಹೀಗಾಗಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೊದಲ ಬಾರಿ ಮೌನ ಮುರಿದು ಮಾತನಾಡಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ಕೊಟ್ಟಿದ್ದು, ಇದರಲ್ಲಿ ಯಾರನ್ನೇ ಆಗಲಿ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಬಿಗಿಯಾದ ಕ್ರಮ ತೆಗೆದು ಕೊಂಡಿದ್ದೇವೆ. ಡ್ರಗ್ಸ್‌ನಿಂದ ಯುವಕರು, ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ದುಷ್ಪರಿಣಾಮ ಕೊನೆಯಾಗಬೇಕು. ಆ ದಿಕ್ಕಿನಲ್ಲಿ ನಾವು ಏನೇನು ಕ್ರಮ ತಗೋಬೇಕೋ ಅವನೆಲ್ಲ ನಾವು ತೆಗೆದುಕೊಳ್ಳುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

First Time Chief Minister B.s. Yediyurappa Has Broken His Silence On Drug Mafia In Karnataka

ಕೇಂದ್ರ ಅಧ್ಯಯನ ತಂಡ: ಕೇಂದ್ರ ಅಧ್ಯಯನ ತಂಡ ರಾಜ್ಯ ಪ್ರವಾಸ ವಿಚಾರಕ್ಕೆ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅತಿವೃಷ್ಠಿ ಹಾನಿ ಕುರಿತು ಅಧ್ಯಯನ ನಡೆಸಲು ಕೇಂದ್ರದ ಅಧ್ಯಯನ ತಂಡ ಇಂದು ರಾಜ್ಯಕ್ಕೆ ಬರುತ್ತಿದೆ. ಕಳೆದ ಮೂರು ನಾಲ್ಕು ದಿನಗಳ ಹಿಂದೆಯೇ ಅವರು ಬರಬೇಕಾಗಿತ್ತು. ಆದರೆ ಬೇರೆ ಬೇರೆ ಕಾರಣಗಳಿಂದ ಅವರು ಬರುವುದು ವಿಳಂಬವಾಗಿದೆ. ಇವತ್ತು ಸಂಜೆ ಅವರೊಂದಿಗೆ ರಾಜ್ಯದ ಸ್ಥಿತಿಗತಿ ಬಗ್ಗೆ ಚರ್ಚೆ ಮಾಡುತ್ತೇವೆ. ಮೂರು ತಂಡಗಳಲ್ಲಿ ಅವರು ರಾಜ್ಯ ಪ್ರವಾಸ ಮಾಡಿ ವರದಿ ಕೊಡಲಿದ್ದಾರೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಸುಮಾರು 4 ರಿಂದ 5 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ.

First Time Chief Minister B.s. Yediyurappa Has Broken His Silence On Drug Mafia In Karnataka

ಅದಿಷ್ಟೂ ಪರಿಹಾರ ಕೊಡುವಂತೆ ಇಂದು ಕೇಂದ್ರ ಅಧ್ಯಯನ ತಂಡಕ್ಕೆ ತಿಳಿಸಲಿದ್ದೇವೆ. ಆ ತಂಡ ರಾಜ್ಯದಲ್ಲಿ ಪ್ರವಾಸ ನಂತರ ರಾಜ್ಯದ ವಾಸ್ತವತೆ ಏನೆಂಬುದು ಗೊತ್ತಾಗಲಿದೆ ಎಂದು ಬೆಂಗಳೂರಿಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ ಕೊಟ್ಟಿದ್ದಾರೆ.

English summary
This is the first time Chief Minister B.S. Yediyurappa has broken his silence on drugs mafia in Karnataka. CM Yeddyurappa's response to the Drugs deal in the state was that there was no question of protecting anyone. Know more here about cm's reaction on drug mafia,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X