ಒತ್ತಡ ತಾಳಲಾರದೆ ಐಟಿ ಉದ್ಯೋಗಿ ಆತ್ಮಹತ್ಯೆ: ಸೂಕ್ತ ತನಿಖೆಗೆ ಮನವಿ
ಬೆಂಗಳೂರು, ಜೂನ್ 19: ಕಚೇರಿ ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಐಟಿ ಉದ್ಯೋಗಿ ಭವೇಶ್ ಜೈಸ್ವಾಲ್ ಅವರ ಸಾವಿನ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸುವಂತೆ ಐಟಿ ಉದ್ಯೋಗಿಗಳ ಒಕ್ಕೂಟ (ಎಫ್‌ಐಟಿಇ) ಮನವಿ ಮಾಡಿದೆ.
ಎಫ್‌ಐಟಿಇ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ದೀಪಕ್ ನೇತೃತ್ವದಲ್ಲಿ ಸದಸ್ಯರ ತಂಡವೊಂದು ವೈಟ್‌ಫೀಲ್ಡ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಪ್ರವೀಣ್ ಬಾಬು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಬಳಿಕ ಒಕ್ಕೂಟದ ಸದಸ್ಯರು ಉಪ ಪೊಲೀಸ್ ಆಯುಕ್ತ ಅಬ್ದುಲ್ ಅಹಾದ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಈ ಪ್ರಕರಣದ ವಿಚಾರದಲ್ಲಿನ ಕಟ್ಟುನಿಟ್ಟಾದ ತನಿಖೆಗಾಗಿ ಕೋರಿದರು.

ತಮ್ಮ ಮಗ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಳ್ಳಲು ಕಚೇರಿಯಲ್ಲಿನ ಒತ್ತಡ ಮತ್ತು ಮಾನಸಿಕ ಕಿರುಕುಳವೇ ಕಾರಣ ಎಂದು ಭವೇಶ್ ಜೈಸ್ವಾಲ್ ಅವರ ತಂದೆ ಚಂದ್ರ ಜೈಸ್ವಾಲ್ ದೂರಿನಲ್ಲಿ ತಿಳಿಸಿದ್ದಾರೆ.
ನಮಗೆಲ್ಲ ತಿಳಿದಿರುವಂತೆ ಐಟಿ ಉದ್ಯಮದಲ್ಲಿ ಸರಿಯಾದ ಸಮಯಕ್ಕೆ ಉತ್ಪನ್ನ/ಸೇವೆಯ ಪೂರೈಕೆಗಾಗಿ ಕೆಲಸದ ಒತ್ತಡ ಸಾಮಾನ್ಯ. ಒತ್ತಡವು ಕಿರುಕುಳ ಮತ್ತು ಉದ್ಯೋಗ ಅಭದ್ರತೆಯಾಗಿ ಬದಲಾದಾಗ ಅದು ಉದ್ಯೋಗಿಗಳ ಜೀವವನ್ನು ತೆಗೆದುಕೊಳ್ಳುತ್ತದೆ ಎಂದು ಒಕ್ಕೂಟದ ಸದಸ್ಯರು ಹೇಳಿದ್ದಾರೆ.
ಮಾಧ್ಯಮ ವರದಿಗಳ ಅನ್ವಯ 23 ವರ್ಷದ ಯುವ ಎಂಜಿನಿಯರ್ ಒತ್ತಡದ ಕಾರಣ ಸಾಯುವ ನಿರ್ಧಾರಕ್ಕೆ ಮುಂದಾಗಿರಬಹುದು.
ಬೆಂಗಳೂರು ನಗರ ಪೊಲೀಸರು ಭವೇಶ್ ಅವರ ಕಚೇರಿ ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್‌ಗಳನ್ನು ವಿಧಿವಿಜ್ಞಾನ ಇಲಾಖೆಗೆ ಕಳುಹಿಸಿ ಈಗಾಗಲೇ ತನಿಖೆ ಆರಂಭಿಸಿವೆ.
ಎಫ್‌ಐಟಿಇಯ ನಮಗೆ ಕಚೇರಿ ಸ್ಥಳದಲ್ಲಿನ ಕಿರುಕುಳ ಮತ್ತು ನೌಕರಿ ಅಭದ್ರತೆಯು ಹೆಚ್ಚುತ್ತಿದ್ದು, ಉದ್ಯಮವು ತನ್ನ ಉದ್ಯೋಗಿಯ ಸಾವಿನ ಕುರಿತು ಪೊಲೀಸರು ಸೂಕ್ತವಾದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಎಫ್‌ಐಟಿಯ ಸಲ್ಲಿಸಿದ ಬೇಡಿಕೆಗಳು
* ಐಟಿ ಉದ್ಯಮದಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಐಟಿ ಉದ್ಯೋಗಿಗಳು, ಉದ್ಯೋಗದಾತರು ಮತ್ತು ಸರ್ಕಾರಿ ಅಧಿಕಾರಿಗಳನ್ನು ಒಳಗೊಂಡ ಸಮಿತಿಯೊಂದನ್ನು ಸರ್ಕಾರ ರಚಿಸಬೇಕು.
* ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿಯ ಕುಟುಂಬಕ್ಕೆ ಕಂಪೆನಿ ಹಾಗೂ ರಾಜ್ಯ ಸರ್ಕಾರದ ಕಡೆಯಿಂದ ಹಣಕಾಸಿನ ಪರಿಹಾರ ನೀಡಬೇಕು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications