ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀಲಂಕಾ ಸ್ಫೋಟ: ಬೆಂಗಳೂರು ತಲುಪಿದ ಐವರು ಕನ್ನಡಿಗರ ಮೃತದೇಹ

|
Google Oneindia Kannada News

ಬೆಂಗಳೂರು, ಏ.24: ಶ್ರೀಲಂಕಾದ ಕೊಲಂಬೋದಲ್ಲಿ ಭಾನುವಾರ ಸಂಭವಿಸಿದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ 8 ಕನ್ನಡಿಗರ ಪೈಕಿ ಐವರ ಮೃತದೇಹ ಬೆಂಗಳೂರು ತಲುಪಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಯುಎಲ್-173 ಶ್ರೀಲಂಕಾ ಏರ್ ಲೈನ್ಸ್ ವಿಮಾನದ ಮೂಲಕ ನಾಲ್ವರ ಮೃತದೇಹವನ್ನು ರವಾನೆ ಮಾಡಲಾಗಿದ್ದು, ಮಧ್ಯರಾತ್ರಿ 2.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿತ್ತು. ಇದೇ ವೇಳೆ ನೆಲಮಂಗಲ ಶಾಸಕ ಶ್ರೀನಿವಾಸ್, ಇ.ಕೃಷ್ಣಪ್ಪ ಬೆಂಗಳೂರಿಗೆ ಆಗಮಿಸಿ ಅಂತಿಮ ದರ್ಶನ ಪಡೆದರು.

ಬಾಂಬ್ ದಾಳಿಯ ಬಗ್ಗೆ ಶ್ರೀಲಂಕಾ ಕ್ಕೆ ಎಚ್ಚರಿಕೆ ನೀಡಿತ್ತು ಭಾರತ ಬಾಂಬ್ ದಾಳಿಯ ಬಗ್ಗೆ ಶ್ರೀಲಂಕಾ ಕ್ಕೆ ಎಚ್ಚರಿಕೆ ನೀಡಿತ್ತು ಭಾರತ

ಮೃತರಾದವರು ನೆಲಮಂಗಲ, ಕಾಚನಹಳ್ಳಿ ಜೆಡಿಎಸ್ ಮುಖಂಡ ಹನುಮಂತರಾಯಪ್ಪ, ಲಕ್ಷ್ಮೀ ನಾರಾಯಣ, ಶಿವಕುಮಾರ್, ದಾಸರಹಳ್ಳಿಯ ರಂಗಪ್ಪ ಈ ನಾಲ್ವರ ಮೃತದೇಹಗಳು ಶ್ರೀಲಂಕಾದಿಂದ ರವಾನೆಯಾಗಿದೆ. ರಂಗಪ್ಪ ಮೃತದೇಹ ದಾಸರಹಳ್ಳಿಯ ಚೊಕ್ಕಸಂದ್ರದ ನಿವಾಸಕ್ಕೆ ರವಾನೆಯಾಗಿದೆ.

Five dead bodies brought down to bengaluru from sri lanka

ಉಳಿದ ಮೂವರ ಮೃತದೇಹಗಳನ್ನು ನೆಲಮಂಗಲದ ಅವರವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಹನುಮಂತರಾಯಪ್ಪ, ಲಕ್ಷ್ಮೀನಾರಾಯಣ, ಶಿವಕುಮಾರ್ ಮೃತದೇಹಗಳನ್ನು ನೆಲಮಂಗಲದ ಜ್ಯೂನಿಯರ್ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ಇಡುವ ಸಾಧ್ಯತೆ ಇದೆ.

ಶ್ರೀಲಂಕಾ ಸ್ಫೋಟ: ಸುತ್ತಾಡುತ್ತಿದ್ದ ಶಂಕಿತ ಉಗ್ರನ ವಿಡಿಯೋ ವೈರಲ್ ಶ್ರೀಲಂಕಾ ಸ್ಫೋಟ: ಸುತ್ತಾಡುತ್ತಿದ್ದ ಶಂಕಿತ ಉಗ್ರನ ವಿಡಿಯೋ ವೈರಲ್

ಜೆಡಿಎಸ್ ಮುಖಂಡ, ತುಮಕೂರು ನಿವಾಸಿ ರಮೇಶ್, ಅಡಕಮಾರನಹಳ್ಳಿಯ ಮಾರೇಗೌಡ ಹಾಗೂ ನೆಲಮಂಗಲ ಹಾರೋಕ್ಯಾತನಹಳ್ಳಿಯ ಪುಟ್ಟರಾಜು ಈ ಮೂವರ ಮೃತದೇಹಗಳು ಇಂದು ಮಧ್ಯಾಹ್ನ ಬೆಂಗಳೂರಿಗೆ ಕರೆತರಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶ್ರೀಲಂಕಾದಲ್ಲಿ ಸಾವನ್ನಪ್ಪಿದ ಆ ಐವರು ನಮ್ಮ ಪಕ್ಷದ ಶಕ್ತಿಗಳು:ಸಿಎಂ ಶ್ರೀಲಂಕಾದಲ್ಲಿ ಸಾವನ್ನಪ್ಪಿದ ಆ ಐವರು ನಮ್ಮ ಪಕ್ಷದ ಶಕ್ತಿಗಳು:ಸಿಎಂ

ಬಿಟಿಎಂ ಲೇಔಟ್‌ನಾಗರಾಜ್ ರೆಡ್ಡಿ ಮೃತದೇಹ ಕೂಡ ಮಂಗಳವಾರ ರಾತ್ರಿಯೇ ಬೆಂಗಳೂರಿಗೆ ರವಾನೆಯಾಗಿದೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ 11.30ಕ್ಕೆ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

English summary
There are eight dead reports of Kannadigas in Sri Lanka. In that five dead bodies has been brought down to the capital city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X