ಬಿಎಂಟಿಸಿ ಬಸ್ ಗೆ ಕಾರು ಡಿಕ್ಕಿ ಐವರ ಸಾವು

road accident
ಬೆಂಗಳೂರು, ಸೆ.14 : ಬಿಎಂಟಿಸಿ ಬಸ್ ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕನಕಪುರ ರಸ್ತೆಯ ಎಪಿಎಸ್ ಇಂಜಿನಿಯರಿಂಗ್ ಕಾಲೇಜಿನ ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದವರೆಂದು ಗುರುತಿಸಲಾಗಿದೆ.

ಶನಿವಾರ ಸಂಜೆ ಕನಕಪುರದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಸ್ವಿಫ್ಟ್ ಕಾರು, ಎಪಿಎಸ್ ಕಾಲೇಜುಬಳಿ ಕೆಂಪಯ್ಯನ ಪಾಳ್ಯದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎ 3 ಎಫ್ 1241 ಬಿಎಂಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ.

ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಒಬ್ಬ ಮಹಿಳೆ ಮತ್ತು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲಘಟ್ಟಪುರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕೆಎ 3, ಎಂಎಲ್ 9825 ಕಾರಿನಲ್ಲಿ ಸಿಲುಕಿಕೊಂಡಿರುವ ಶವಗಳನ್ನು ಹೊರತೆಗೆಯಲು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಅಪಘಾದಿಂದಾಗಿ ಕನಕಪುರ-ಬೆಂಗಳೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಬಸ್ ಚಾಲಕ ತಲಘಟ್ಟಪುರ ಪೊಲೀಸರಿಗೆ ಶರಣಾಗಿದ್ದಾನೆ. ಮೃತರು ವಿದ್ಯಾರ್ಥಿಗಳಂತೆ ಕಂಡು ಬರುತ್ತಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+