Breaking: ಬೆಂಗಳೂರಿನ ಒಂದೇ ಕುಟುಂಬದ ಐವರು ಆತ್ಮಹತ್ಯೆ

ಬೆಂಗಳೂರು, ಸೆಪ್ಟೆಂಬರ್ 17: ಬೆಂಗಳೂರು ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತಯಾಗಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ತಿಗಳರ ಪಾಳ್ಯದ ಮನೆಯೊಂದರಲ್ಲಿ ಈ ವಿಷಾದಕರ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಪತ್ರಿಕೆಯೊಂದರ ಸಂಪಾದಕರ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಕುಟುಂಬದ ಭಾರತಿ (50), ಸಿಂಚನ(33), ಸಿಂಧುರಾಣಿ (30), ಮಧು ಸಾಗರ(27) ಆತ್ಮಹತ್ಯೆ ಮಾಡಿಕೊಂಡವರು. ಜತೆಗೆ ಒಂಬತ್ತು ತಿಂಗಳು ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Five Members Of The Same Family Committed Suicide In Bengaluru

ಐದು ದಿನದ ಹಿಂದೆಯೇ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮನೆಯಲ್ಲಿ ಒಟ್ಟು 6 ಮಂದಿ ಇದ್ದರು. ಕಳೆದ ಐದು ದಿನಗಳಿಂದ 3 ವರ್ಷದ ಒಂದು ಮಗು ಮಾತ್ರ ಬದುಕಿತ್ತು. ಆಹಾರವಿಲ್ಲದೆ ನಿತ್ರಾಣವಾಗಿತ್ತು. ಸದ್ಯ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Recommended Video

      ಕೂಲ್ ಕ್ಯಾಪ್ಟನ್ ರಿವ್ಯೂ ತಗೊಂಡ್ರೆ ಮುಗೀತು ! | Oneindia Kannada

      ಕೌಟುಂಬಿಕ ಕಲಹದಿಂದ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಪ್ರತಿದಿನ ಗಲಾಟೆ ಆಗುತ್ತಿತ್ತು ಎನ್ನಲಾಗಿದೆ. ಶಂಕರ್ ಪತ್ನಿ ಜತೆ ಓರ್ವ ಮಗ, ಇಬ್ಬರು ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಂಕರ್ ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಓರ್ವ ಮಗ ಮತ್ತು ಮೊಮ್ಮಗ ಸಾವನ್ನಪ್ಪಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+