FlixBus: ಬೆಂಗಳೂರು ಸೇರಿ ದಕ್ಷಿಣ ಭಾರತಕ್ಕೆ 'ಫ್ಲಿಕ್ಸ್‌ಬಸ್' ಎಂಟ್ರಿ: ಟಿಕೆಟ್ ದರ ಕೇವಲ ₹99

ಬೆಂಗಳೂರು, ಸೆಪ್ಟಂಬರ್ 04: ದೇಶದ ದಕ್ಷಿಣ ಭಾರತದಲ್ಲಿನ ಪ್ರಮುಖ ನಗರಗಳ ನಡುವೆ ಬಸ್ ಸಂಚಾರ ಒದಗಿಸುವ ಜರ್ಮನಿ ಮೂಲದ ಫ್ಲಿಕ್ಸ್‌ಬಸ್ ಸಂಚಾರಕ್ಕೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಅವರು ಮಂಗಳವಾರ ಗ್ರೀನ್ ಸಿಗ್ನಲ್ ನೀಡಿದರು. ಈ ಮೂಲಕ ಬೆಂಗಳೂರು, ಮಂಗಳೂರು, ಹೈದರಾಬಾದ್ ನಂತಹ ನಗರಗಳಿಗೆ ಫ್ಲಿಕ್ಸ್ ಬಸ್ ಸೇವೆಯು ಅಧಿಕೃತವಾಗಿ ಕಾಲಿಟ್ಟಂತಾಯಿತು.

ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವ ಎಂಬಿ ಸಚಿವರು, ಭಾರತವೂ ಸೇರಿದಂತೆ 43 ದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಫ್ಲಿಕ್ಸ್‌ಬಸ್ ಸೇವೆಯು ದಕ್ಷಿಣ ಭಾರತದಲ್ಲಿ ಜನರ ಪ್ರಯಾಣದ ಅನುಭವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ. ಸದ್ಯ ಈ ಭಾಗದಲ್ಲಿ 12ಬಸ್‌ಗಳು ಸೇವೆ ನೀಡಲಿವೆ. ನಿಗದಿತ ಸಮಯದ ಆಫರ್ ಎಂಬಂತೆ ಬೆಂಗಳೂರಿನಿಂದ ಇತರ ನಗರಗಳಿಗೆ ಪ್ರಯಾಣದ ಟಿಕೆಟ್ 99ರೂ. ನಿಗದಿ ಮಾಡಲಾಗಿದೆ. ಜನರು ಈ ಬಸ್‌ಗಳನ್ನು ಹೆಚ್ಚು ಅವಲಂಭಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

FlixBus Entry for South India Cities MB Patil Gave Green Signal for First Travel Know ticket price

ಖಾಸಗಿ ಬಸ್ ನಿರ್ವಾಹಕರ ಸಹಯೋಗದಲ್ಲಿ ಸಂಚಾರ ಜಾಲ ವಿಸ್ತರಿಸಿಕೊಳ್ಳುವ ಯೋಜನೆಯನ್ನು ಫ್ಲಿಕ್ಸ್‌ಬಸ್ ಹೊಂದಿದೆ. ಹೆಚ್ಚಿನ ಅನುಕೂಲ, ಸುರಕ್ಷತೆ ಹಾಗೂ ಹೊರೆ ಎನ್ನಿಸದ ದರಗಳ ಮೂಲಕ ಬಸ್ ಪ್ರಯಾಣಿಕರ ವಿಶ್ವಾಸ ಗಳಿಸುವ ಗುರಿ ಹೊಂದಿದೆ ಎಂದರು.

ದೇಶದ ಸುಸ್ಥಿರ ಸಂಚಾರ ಕೊಡುಗೆ ನೀಡಲಿ

ಬಸ್ ಸಂಚಾರದಲ್ಲಿ ಭಾರತವು ಜಗತ್ತಿನ ಎರಡನೇ ದೊಡ್ಡ ಮಾರುಕಟ್ಟೆಯಾಗಿದೆ. ಪರಿಸರ ಸ್ನೇಹಿ ಇಂಧನಗಳ ಬಳಕೆಗೆ ಒತ್ತು ನೀಡಿ ದೇಶದಲ್ಲಿ ಸುಸ್ಥಿರ ಸಂಚಾರಕ್ಕೆ ಕೊಡುಗೆ ನೀಡಲು ಸಂಸ್ಥೆಯು ಆದ್ಯತೆ ನೀಡಬೇಕೆಂದು ಸಚಿವರು ತಿಳಿಸಿದರು.

ಜರ್ಮನಿಯ ಡೆಪ್ಯುಟಿ ಕಾನ್ಸುಲ್ ಜನರಲ್ ಅನೆಟ್ ಬೆಸಿಯರ್, ಫ್ಲಿಕ್ಸ್ ಬಸ್ ಸಹ-ಸ್ಥಾಪಕ ಡೇನಿಯಲ್ ಕ್ರೌಸ್, ಫ್ಲಿಕ್ಸ್ ಬಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೂರ್ಯ ಖುರಾನ ಅವರು ಉಪಸ್ಥಿತರಿದ್ದರು.

FlixBus Entry for South India Cities MB Patil Gave Green Signal for First Travel Know ticket price

ಎಐ ಕೌಶಲ: ಸರ್ಕಾರದ ಮೈಕ್ರೋಸಾಫ್ಟ್ ಒಪ್ಪಂದ

ಜನರೇಟೀವ್ ಎಐ ಮತ್ತು ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನಗಳಿಗೆ ಸಂಬಂಧಿಸಿದ ಕೌಶಲಗಳನ್ನು ಕಲಿಸಲು ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಮೈಕ್ರೋಸಾಫ್ಟ್ ಕಂಪನಿಯು ಉತ್ಸುಕವಾಗಿದೆ ಎಂದು ಸಚಿವರು ಇದೇ ವೇಳೆ ಮಾಹಿತಿ ನೀಡಿದರು.

ಮಂಗಳವಾರ ಸಚಿವರನ್ನು ಮೈಕ್ರೋಸಾಫ್ಟ್ ಕಂಪನಿಯ ಭಾರತ ಮತ್ತು ದಕ್ಷಿಣ ಏಷ್ಯಾದ ಅಧ್ಯಕ್ಷ ಪುನೀತ್ ಚಾಂದೋಕ್ ನೇತೃತ್ವದ ಉನ್ನತ ಮಟ್ಟದ ನಿಯೋಗ ಭೇಟಿ ಮಾಡಿತು. ಕರ್ನಾಟಕವನ್ನು ಭಾರತದ ಎಐ ತಂತ್ರಜ್ಞಾನದ ಪ್ರಮುಖ ತಾಣವನ್ನಾಗಿ ಮಾಡಲು ಮೈಕ್ರೋಸಾಫ್ಟ್ ಬಯಸಿದೆ. ಹೂಡಿಕೆದಾರರಿಗೆ ನೆರವು ನೀಡುವಂತಹ ಪ್ರಕ್ರಿಯೆಗಳಿಗೆ ಎಐ ತಂತ್ರಜ್ಞಾನವನ್ನು ಹೇಗೆ ಅನ್ವಯಿಸಬಹುದು ಮತ್ತು ಇದಕ್ಕೆ ಪರಿಣತರನ್ನು ಹೇಗೆ ತೊಡಗಿಸಬಹುದು ಎಂದು ಕಂಪನಿಯು ಚಿಂತಿಸುತ್ತಿದೆ ಎಂದರು.

ರಾಜ್ಯ ಸರ್ಕಾರ ತಂತ್ರಜ್ಞಾನದ ಬಳಕೆಯ ಪರವಾಗಿದ್ದು, ಮೈಕ್ರೋಸಾಫ್ಟ್ ತರಹದ ದೈತ್ಯ ಕಂಪನಿಗಳು ಇದಕ್ಕೆ ಮುಂದಡಿ ಇಡಬೇಕು. ಮೊದಲಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಡಳಿತದಲ್ಲಿ ಎಐ ತಂತ್ರಜ್ಞಾನ ಅಳವಡಿಕೆ ಬಗ್ಗೆ ನೆರವಾಗಬಹುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ..

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+