Bengaluru Flood: ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಅಧಿಕಾರಿಗಳೇ ಬರಲಿದ್ದಾರೆ
ಬೆಂಗಳೂರು, ಮೇ 19: ಬೆಂಗಳೂರಿನಲ್ಲಿ ನಗರದಲ್ಲಿ ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಯಾಗಿದೆ. ಈ ಹಿನ್ನೆಲೆ ಎಲ್ಲಾ ವಲಯ ಆಯುಕ್ತರು ತಗ್ಗು ಪ್ರದೇಶ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಲು ಖುದ್ದು ಬಿಬಿಎಂಪಿ ಅಧಿಕಾರಿಗಳಿಗೆ ಸ್ಥಳಕ್ಕೆ ಬರಲಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಾ ಆಯಾ ವಲಯ ಆಯುಕ್ತರುಗಳು ಮಧ್ಯಾಹ್ನ 3 ಗಂಟೆಯಿಂದ ವಿವಿಧ ತಗ್ಗು ಪ್ರದೇಶ ಹಾಗೂ ಪ್ರವಾಹ ಪೀಡಿತ ಪ್ರದೇಶಗಳ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಖುದ್ದು ಭೇಟಿ ನೀಡಿ ಸೂಕ್ತ ಕ್ರಮ ವಹಿಸುವಂತೆ ವಲಯದ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.

ವಿಶೇಷ ಆಯುಕ್ತರಿಂದ ಸ್ಥಳ ಪರಿಶೀಲನೆ
ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ವಿಪತ್ತು ನಿರ್ವಹಣಾ ವಿಭಾಗದ ವಿಶೇಷ ಆಯುಕ್ತರಾದ ಸುರಲ್ಕರ್ ವಿಕಾಸ್ ಕಿಶೋರ್ ರವರು ಇಂದು ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ, ಕವಿಕಾ, ನಾಯಂಡಹಳ್ಳಿ, ಸಿಲ್ಕ್ ಬೋರ್ಡ್ ಜಂಕ್ಷನ್ ಹಾಗೂ ಹೆಚ್.ಎಸ್.ಆರ್ ಲೇಔಟ್ ಬಳಿ ರಾಜಕಾಲುವೆಗಳನ್ನು ಪರಿಶೀಲಿಸಿದರು.
ರಾಜಕಾಲುವೆಗಳಲ್ಲಿ ಸಂಪೂರ್ಣ ಹೂಳನ್ನು ತೆರವುಗೊಳಿಸಿ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಅದರಂತೆ ಎಲ್ಲಾ ವಲಯಗಳಲ್ಲಿ ಖುದ್ದು ಹಾಜರಿದ್ದು ಮೇಲುಸ್ತುವಾರಿ ಕಾರ್ಯ ನಿರ್ವಹಿಸಿದರು.
ಪಂಪ್ ಮೂಲಕ ನೀರು ತೆರವು
ಯಲಹಂಕ ವಲಯ ವ್ಯಾಪ್ತಿಯ ರಮಣಶ್ರೀ ಗಾರ್ಡೇನಿಯಾ ಲೇಔಟ್ ಹಾಗೂ ನಾರ್ತ್ ಹುಡ್ ನಲ್ಲಿ ಶನಿವಾರ ಸುರಿದ ಮಳೆಯಿಂದ ರಾಜಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿ ಹಿಮ್ಮುಖವಾಗಿ ಚಲಿಸಿದೆ. ಕಾರಣ ಇಲ್ಲಿ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಸುಮಾರು 20 ವಿಲ್ಲಾಗಳಿಗೆ ಮಳೆ ನೀರು ನುಗ್ಗಿದ್ದು, 15 ಹೆಚ್.ಪಿ ಪಂಪ್ ಮೂಲಕ ನೀರನ್ನು ತೆರವುಗೊಳಿಸಲಾಗಿದೆ.

ವಲಯ ಆಯುಕ್ತರು, ಜಂಟಿ ಆಯುಕ್ತರು, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸುತ್ತಮುತ್ತಲಿನ ಭೇಟಿ ನೀಡಿ ಸೂಕ್ತ ನಿರ್ವಹಣೆಗೆ ಸೂಚಿಸಲಾಗಿದೆ.
ನಿಯಂತ್ರಣ ಕೊಠಡಿಗಳ ಪರಿಶೀಲನೆ
ಬಿಬಿಎಂಪಿ ಆಯಾ ವಲಯಗಳಲ್ಲಿರುವ ನಿಯಂತ್ರಣ ಕೊಠಡಿಗಳಿಗೆ ವಲಯ ಆಯುಕ್ತರು ಹಾಗೂ ಜಂಟಿ ಆಯುಕ್ತರುಗಳು ಭೇಟಿ ನೀಡಿ ನಾಗರೀಕರಿಂದ ಬಂದ ದೂರುಗಳನ್ನು ಪರಿಶೀಲಿಸಿದರು. ಪಾಲಿಕೆ ನಿಯಂತ್ರಣ ಕೊಠಡಿಗೆ ಬರುವ ದೂರುಗಳನ್ನು ತ್ವರಿತಗತಿಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಇತ್ಯರ್ಥಪಡಿಸಲು ಸೂಚನೆ ನೀಡಿರುತ್ತಾರೆ.
ಮಳೆ ಧರೆಗುರುಳಿದ ಮರಗಳ ವಿವರ
ಬಿರುಗಾಳಿ, ಗುಡುಗು ಸಹಿತ ಸುರಿದ ಮಳೆಗೆ ಶನಿವಾರ ಎಲ್ಲ ವಯಗಳಲ್ಲಿ ಸೇರಿ ಒಟ್ಟು 15 ಮರ ಹಾಗೂ 49 ರೆಂಬೆ, ಕೊಂಬೆಗಳು ಮುರಿದು ಬಿದ್ದಿವೆ. ಈ ಪೈಕಿ 13 ಮರ ಹಾಗೂ 32 ರೆಂಬೆ, ಕೊಂಬೆಗಳನ್ನು ತೆರವುಗೊಳಿಸಲಾಗಿದೆ. ಉಳಿದ ಮರ, ರೆಂಬೆ,ಕೊಂಬೆಗಳ ತೆರವು ಕಾರ್ಯ ಮಾಡಲಾಗುತ್ತಿದೆ ಎಂದು ಬಿಬಿಎಂಪಿಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.












Click it and Unblock the Notifications