ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಪ್ರವಾಹಕ್ಕೆ ರಾಜಕಾಲುವೆ ಒತ್ತುವರಿ ತೆರವು ಮಾಡದಿರುವುದೇ ಕಾರಣ- ಹೈಕೋರ್ಟ್ ತರಾಟೆ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು,ಸೆ.12. ಬೆಂಗಳೂರು ಮಹಾನಗರದಲ್ಲಿ ಕಳೆದ ವಾರ ಉಂಟಾದ ಪ್ರವಾಹಕ್ಕೆ ರಾಜಕಾಲುವೆ ಒತ್ತುವರಿ ತೆರವು ಮಾಡದಿದ್ದೇ ಕಾರಣ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ನೀರುಗಾಲುವೆಗೆ ಸೇರಿದ ಜಾಗದ ಒತ್ತುವರಿ ತೆರವುಗೊಳಿಸುವಲ್ಲಿ ಬಿಬಿಎಂಪಿ ವಿಫಲವಾಗಿರುವ ಕಾರಣದಿಂದಲೇ ನಗರದಲ್ಲಿ ಸುರಿದ ಭಾರಿ ಮಳೆಯಿಂದ ರಸ್ತೆ ಮತ್ತು ಕೆಲ ಪ್ರದೇಶಗಳು ಜಲಾವೃತವಾದ ಪರಿಸ್ಥಿತಿ ಉದ್ಭವಿಸಿತು ಎಂದು ನ್ಯಾಯಾಲಯ ಹೇಳಿದೆ.

ಬೆಂಗಳೂರಿನ ಕೆರೆಗಳ ಸಂರಕ್ಷಣೆ ಹಾಗೂ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯಪೀಠ ಅಸಮಾಧಾನ ವ್ಯಕ್ತಪಡಿಸಿತು.

Flood in Bangalore City: Removal of encroachement not done, HC taken task to BBMP

ಅಲ್ಲದೆ, ಹೈಕೋರ್ಟ್ 2019ರ ಜೂ.18ರಂದು ನೀಡಿರುವ ನಿರ್ದೇಶನದ ಅನ್ವಯ ನಗರದಲ್ಲಿನ ರಾಜಕಾಲುವೆಯ ಒತ್ತುವರಿಯನ್ನು ತೆರವುಗೊಳಿಸಲೂ ಸರ್ಕಾರ ಮತ್ತು ಬಿಬಿಎಂಪಿ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಪ್ರಾಧಿಕಾಗಳು ತಕ್ಷಣವೇ ಕ್ರಮ ಕೈಗೊಂಡು ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದು ಆದೇಶ ನೀಡಿದೆ.

ಜೊತೆಗೆ ರಾಜಕಾಲುವೆ ಮತ್ತು ಮಳೆ ನೀರು ಕಾಲುವೆಗೆ ಯಾವುದೇ ರೀತಿ ತಾಜ್ಯ ಸುರಿಯುವುದನ್ನು ತಡೆಗಟ್ಟಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ಅ.10ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಮಧ್ಯಂತರ ಅರ್ಜಿ ಸಲ್ಲಿಸಿದ ಅರ್ಜಿದಾರರ ವಕೀಲ ಜಿ.ಆರ್.ಮೋಹನ್, ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಉಂಟಾಗಿದ್ದ ಪ್ರವಾಹದ ಕುರಿತು ನ್ಯಾಯಪೀಠಕ್ಕೆ ಫೋಟೋ ಸಹಿತ ಮಾಹಿತಿ ಒದಗಿಸಿದರು.

ಅದನ್ನು ಗಂಭೀರವಾಗಿ ಪರಿಗಣಿಸಿದ ಪೀಠ, ರಾಜಕಾಲುವೆ ಮತ್ತು ಮಳೆ ನೀರು ಕಾಲುವೆ ಜಾಗದ ಒತ್ತುವರಿ ತೆರವುಗೊಳಿಸುವ ಸಂಬಂಧ ನ್ಯಾಯಾಲಯ ಹಲವು ಬಾರಿ ನಿರ್ದೇಶನ ನೀಡಿದೆ. ಅಲ್ಲದೆ, ಮಳೆನೀರು ಕಾಲುವೆಗಳ ಸಮೀಕ್ಷೆ ನಡೆಸುವ ಹಾಗೂ ಅವುಗಳ ಒತ್ತುವರಿಗಳನ್ನು ತೆರವುಗೊಳಿಸುವಂತೆ 2019ರ ಜೂ.21ರಂದು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಿ, ಆ ಕುರಿತು ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಲು ಆರು ವಾರ ಕಾಲಾವಕಾಶ ನೀಡಿತ್ತು. ಆದರೆ, ಈವರೆಗೂ ನ್ಯಾಯಾಲಯದ ನಿರ್ದೇಶನಗಳು ಪಾಲನೆಯಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿತು.

ಹೈಕೋರ್ಟ್ ನಿರ್ದೇಶನದಂತೆ ನಗರದಲ್ಲಿನ ಮಳೆನೀರು ಕಾಲುವೆಗಳ ಒತ್ತುವರಿಗಳನ್ನು ತೆರವುವುಗೊಳಿಸದ ಹಿನ್ನೆಲೆಯಲ್ಲಿ ಈ ಪರಿಸ್ಥಿತಿ ಉದ್ಭವಿಸಿದೆ. ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ನ್ಯಾಯಪೀಠ, ರಾಜಕಾಲುವೆಯ ಒತ್ತುವರಿಯನ್ನು ತೆರವಿಗೆ ಕೂಡಲೇ ಕ್ರಮ ಜರುಗಿಸಬೇಕು ಎಂತು ತಾಕೀತು ಮಾಡಿದೆ.

English summary
The High Court has taken issue with the fact that the flood that occurred last week in Bengaluru metropolis was not cleared by Rajkaluve.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X