ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೂಗುಚ್ಚ, ಹಾರ ನಿಷೇಧ: ಹೂ ಬೆಳೆಗಾರರು, ಮಾರಾಟಗಾರರಿಂದ ಆ.12ರಂದು ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಆಗಸ್ಟ್ 11: ಸರಕಾರದ ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ ಹಣ್ಣಿನ ಬುಟ್ಟಿ ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು, ಪುಷ್ಪ ಕೃಷಿ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘದಿಂದ ನಾಳೆ (ಗುರುವಾರ) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮಂಗಳವಾರದಂದು ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿದ್ದಾರೆ.

ಸರ್ಕಾರಿ ಸಭೆಗಳಲ್ಲಿ ಹೂಗುಚ್ಛ, ಹಾರ, ತುರಾಯಿ ತರುವಂತಿಲ್ಲ: ಸರ್ಕಾರದ ಆದೇಶಸರ್ಕಾರಿ ಸಭೆಗಳಲ್ಲಿ ಹೂಗುಚ್ಛ, ಹಾರ, ತುರಾಯಿ ತರುವಂತಿಲ್ಲ: ಸರ್ಕಾರದ ಆದೇಶ

ಸರ್ಕಾರದ ಈ ಆದೇಶವನ್ನು ಈ ಕೂಡಲೇ ಹಿಂದಕ್ಕೆ ತಗೆದುಕೊಳ್ಳಬೇಕು ಎಂದು ಆಗ್ರಹಿಸಲು ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ನಾಳೆ (ಗುರುವಾರ 12ನೇ ಆಗಸ್ಟ್‌ 2021) ಬೃಹತ್‌ ಪ್ರತಿಭಟನೆ ಆಯೋಜಿಸಲಾಗಿದೆ.

Flower Growers Association To Hold Massive Protest On August 12 Against Karnataka Govt Order

ರಾಜ್ಯ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶ, ರಾಜ್ಯದ ಹೂ ಬೆಳೆಗಾರರು ಹಾಗೂ ರೈತರ ಮೇಲೆ ಗದಾಪ್ರಹಾರವಾಗಿದೆ.

ಈ ಆದೇಶವನ್ನು ತಕ್ಷಣದಿಂದಲೇ ಹಿಂದಕ್ಕೆ ತೆಗೆದುಕೊಳ್ಳಬೇಕೆಂದು ಸರಕಾರವನ್ನು ಒತ್ತಾಯಿಸಲು ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ.ಎಂ ಅರವಿಂದ್‌, ನಿರ್ದೇಶಕರಾದ ಶ್ರೀಕಾಂತ್‌ ಬೆಲ್ಲಂಪಳ್ಳಿ, ರಾಜ್ಯದ ಎಲ್ಲಾ ಹೂ ಬೆಳೆಗಾರರರು, ಪುಷ್ಟ ಕೃಷಿ ರೈತ ಸಂಘಟನೆಗಳು ಮತ್ತು ರಾಜ್ಯದ ಎಲ್ಲಾ ಪುಷ್ಟ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘದ ನೇತೃತ್ವದಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆಯ ಎದುರು (ಗುರುವಾರ ಬೆಳಿಗ್ಗೆ 11.15ಕ್ಕೆ), ರಾಜ್ಯದ ಹೂಬೆಳೆಗಾರರು ಹಾಗೂ ರೈತರ ಮತ್ತು ಮಾರಾಟಗಾರರ ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.

ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್‌ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

Flower Growers Association To Hold Massive Protest On August 12 Against Karnataka Govt Order

ಸರ್ಕಾರದ ಆದೇಶವೇನು?

ರಾಜ್ಯ ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಬಸವರಾಜ ಬೊಮ್ಮಾಯಿ ಸರ್ಕಾರ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ, ರಾಜ್ಯದ ಬೊಕ್ಕಸವನ್ನು ಬಿಗಿಗೊಳಿಸುವುದಾಗಿ ಹೇಳಿದ್ದರು. ರಾಜ್ಯದಲ್ಲಿ ಕೋವಿಡ್ ವಾರಾಂತ್ಯ ಹಾಗೂ ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು, ಆದಾಯ ಕಡಿಮೆಯಾಗುತ್ತಿದೆ. ಸರ್ಕಾರದ ಖರ್ಚು ಕೂಡ ಕಡಿಮೆ ಮಾಡಲು ನಿರ್ಧಾರ ಮಾಡಿದಂತಿದೆ.

ಈಗ ಅದರ ಭಾಗವಾಗಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲು ಸೇರಿದಂತೆ ಅನಗತ್ಯ ಖರ್ಚುಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ.

ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

Recommended Video

BJPಯಲ್ಲಿ ಖಾತೆಗಾಗಿ ಶುರುವಾಯ್ತು ಮಂತ್ರಿಗಳ ರಾಜೀನಾಮೆಯ ಬ್ಲಾಕ್ ಮೇಲ್ | oneindia kannada

ಸಿಎಂ ಬೊಮ್ಮಾಯಿ ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸರ್ಕಾರಿ ಆದೇಶ ಜಾರಿ ಮಾಡಿದರು. ಇನ್ನು ಮುಂದೆ ಹೂಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

English summary
Flower Growers Association to hold massive protest on August 12 against Karnataka govt order to ban on flower, bouquet and fruit basket to honour in govt events. Demand to revoke the order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X