ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆಶಿ ಆರೋಗ್ಯಕ್ಕಾಗಿ 1001 ತೆಂಗಿನಕಾಯಿ ಒಡೆದ ಬೆಂಬಲಿಗರು

|
Google Oneindia Kannada News

ಬೆಂಗಳೂರು, ಆಗಸ್ಟ್.27: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೊರೊನಾವೈರಸ್ ಸೋಂಕಿನಿಂದ ಆದಷ್ಟು ಬೇಗ ಗುಣಮುಖರಾಗಲಿ ಎಂದು ಬೆಂಬಲಿಗರು ದೇವರ ಮೊರೆ ಹೋಗಿದ್ದಾರೆ.

Recommended Video

ಇದು international ಕ್ರಿಕೆಟ್ ನಲ್ಲಿ ಕನ್ನಡಿಗನ ಸಾಧನೆ | Oneindia Kannada

ಬೆಂಗಳೂರಿನ ವೈಯಾಲಿಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನದ ಎದುರಿನಲ್ಲಿ ನೆರೆದ ಡಿಕೆಶಿ ಬೆಂಬಲಿಗರು 1001 ತೆಂಗಿನಕಾಯಿ ಒಡೆದು ಪ್ರಾರ್ಥಿಸಿದರು. ಕಾಂಗ್ರೆಸ್ ಅಧ್ಯಕ್ಷರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕೊರೊನಾ ವೈರಸ್‌ಗೆ ತುತ್ತಾಗಿರುವ ಡಿ.ಕೆ. ಶಿವಕುಮಾರ್ ಆರೋಗ್ಯದ ಅಪ್‌ಡೇಟ್ಕೊರೊನಾ ವೈರಸ್‌ಗೆ ತುತ್ತಾಗಿರುವ ಡಿ.ಕೆ. ಶಿವಕುಮಾರ್ ಆರೋಗ್ಯದ ಅಪ್‌ಡೇಟ್

ತಿರುಮಲ ತಿರುಪತಿ ದೇವಸ್ಥಾನದ ಎದುರಿನಲ್ಲಿ 1001 ತೆಂಗಿನಕಾಯಿಗಳನ್ನು ಒಡೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇನ್ನೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

 Followers Breaks 1001 Coconuts In Bengaluru Temple For DK Shivakumar Speedy Recover From Covid-19

ಆಗಸ್ಟ್.25ರಂದು ಕೊವಿಡ್-19 ಪಾಸಿಟಿವ್ ವರದಿ:

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜ್ವರ ಮತ್ತು ಬೆನ್ನುನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಆಗಸ್ಟ್.23ರಂದು ಸ್ವತಃ ಡಿಕೆಶಿಯವರು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಗಾಗಿದ್ದರು. ಅದಾಗಿ ಎರಡು ದಿನಗಳಲ್ಲೇ ಅಂದರೆ ಆಗಸ್ಟ್.25ರಂದು ಬಂದ ವೈದ್ಯಕೀಯ ವರದಿಯಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ವೈದ್ಯಕೀಯ ವರದಿ ಹೊರ ಬರುತ್ತಿದ್ದಂತೆ ಡಿಕೆಶಿ ಬೆಂಗಳೂರಿನ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು.

ಸುಗುಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಆರ್.ರವೀಂದ್ರ ನೇತೃತ್ವದಲ್ಲಿ ವಿವಿಧ ವಿಭಾಗಗಳ ತಜ್ಞರ ವಿಶೇಷ ತಂಡವು ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ವಹಿಸಿದೆ ಎಂದು ತಿಳಿದು ಬಂದಿದೆ.

English summary
Followers Breaks 1001 Coconuts In Bengaluru Temple For DK Shivakumar Speedy Recover From Covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X