ಸಚಿವ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡುವಂತೆ ಒತ್ತಾಯ
ಬೆಂಗಳೂರು, ಡಿಸೆಂಬರ್ 16: ಆರೋಗ್ಯ ಸಚಿವ ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಆಗ್ರಹ ಕೇಳಿಬರುತ್ತಿದೆ.
ಡಿಸಿಎಂ ಹುದ್ದೆ ನೀಡುವ ಮೂಲಕ ಬಿಜೆಪಿ ಎಸ್ ಸಿ, ಎಸ್ ಟಿ ಮತ್ತು ಒಬಿಸಿ ವರ್ಗಕ್ಕೆ ನ್ಯಾಯ ಒದಗಿಸುವಂತೆ ಮನವಿ ಮಾಡಲಾಗುತ್ತಿದೆ.
ಮೊನ್ನೆಯಷ್ಟೇ ಡಿಸಿಎಂ ವಿಚಾರ ಹೈಕಮಾಂಡ್ ನಿರ್ಧಾರ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದ್ದರು. ಸದ್ಯಕ್ಕೆ ಹೊಸ ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ ಎಂಬುದು ಖಚಿತವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಶ್ರೀರಾಮುಲು ಪರ ಆಗ್ರಹ ಮುಂದುವರೆದಿದೆ.

ನಾನು ಮುಖ್ಯಮಂತ್ರಿ ಜೊತೆ ಮುನಿಸಿಕೊಂಡಿಲ್ಲ
ನಾನು ಮುಖ್ಯಮಂತ್ರಿ ಅವರ ಜೊತೆ ಮುನಿಸಿಕೊಂಡಿಲ್ಲ. ಮುನಿಸಿಕೊಂಡಿದ್ದೇನೆ ಎಂಬ ಸುದ್ದಿಗಳು ಸಂಪೂರ್ಣ ಸುಳ್ಳಾಗಿದ್ದು, ನಾನು ಮೂರು ದಿನಗಳ ಕಾಲ ವೈಯಕ್ತಿಕ ಕೆಲಸದಲ್ಲಿ ತೊಡಗಿದ್ದೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಸ್ಪಷ್ಟನೆ ನೀಡಿದ್ದಾರೆ.

ಯಡಿಯೂರಪ್ಪ ಅಮುನಮತಿ ಪಡೆದೇ ಬೇರೆ ಕೆಲಸಕ್ಕೆ ತೆರಳಿದ್ದೆ
ಮುಖ್ಯಮಂತ್ರಿಗಳ ಅನುಮತಿ ಪಡೆದುಕೊಂಡೇ ನಾನು ಬೇರೆ ಕೆಲಸಕ್ಕೆ ತೆರಳಿದ್ದೇನೆ. ನನಗೆ ಡಿಸಿಎಂ ಸ್ಥಾನ ಬೇಕೇಬೇಕು ಎಂಬುದು ಸಮುದಾಯದ ಮುಖಂಡರು ಹಾಗೂ ಜನರ ಬೇಡಿಕೆಯಾಗಿದೆ. ಆದರೆ ನಾನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿಲ್ಲ. ನಾನು ಮುನಿಸಿಕೊಂಡಿಲ್ಲ, ಅಸಮಧಾನಗೊಂಡಿಲ್ಲ, ನಾನು ಸಿಎಂ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಪಾಲ್ಗೊಳ್ಳುತ್ತಿರುವ ಸಭೆಯಿಂದ ದೂರ
ಕಳೆದ ನಾಲ್ಕೈದು ದಿನಗಳಿಂದ ಸಚಿವ ಬಿ.ಶ್ರೀರಾಮುಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಾಲ್ಗೊಳ್ಳುತ್ತಿರುವ ಸಭೆ, ಕಾರ್ಯಕ್ರಮಗಳು, ಸಮಾರಂಭಗಳಿಗೆ ಗೈರಾಗುತ್ತಿದ್ದು, ಉಪ ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಯಡಿಯೂರಪ್ಪ ಅವರ ಜೊತೆ ಮುನಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಇದಕ್ಕೆ ಇಂದು ಸ್ಪಷ್ಟನೆ ನೀಡಿದ ಅವರು, ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಪ್ರಸಕ್ತ ಸನ್ನಿವೇಶವನ್ನು ನೋಡಿಕೊಂಡು ಪಕ್ಷದ ವರಿಷ್ಠರು ಯಾರಿಗೆ ಏನು ಹುದ್ದೆ ನೀಡಬೇಕೆಂದು ತೀರ್ಮಾನಿಸುತ್ತಾರೆ.

ಡಿಸಿಎಂ ಆಗಬೇಕೆನ್ನುವುದು ಸಮುದಾಯ ಅಪೇಕ್ಷೆ
ನಾನು ಉಪ ಮುಖ್ಯಮಂತ್ರಿ ಆಗಬೇಕು ಎನ್ನುವುದು ಸಮುದಾಯದ, ಜನರ ಅಪೇಕ್ಷೆ. ನಾನು ಇದರ ಬಗ್ಗೆ ಎಲ್ಲೂ ಚರ್ಚೆ ಮಾಡಿಲ್ಲ. ಡಿಸಿಎಂ ಹುದ್ದೆ ಕೊಟ್ಟರೆ ನಾನು ಬೇಡ ಎನ್ನುವುದಿಲ್ಲ. ಮನುಷ್ಯನಿಗೆ ಆಸೆ ಸಹಜ. ಡಿಸಿಎಂ ಮಾಡಿದರೆ ಅದಕ್ಕೆ ತಕ್ಕ ನ್ಯಾಯ ದೊರಕಿಸಿಕೊಡುವ ಮಟ್ಟದಲ್ಲಿ ಕೆಲಸ ಮಾಡುತ್ತೇನೆ ಎಂದರು. ನಾನು ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಪಕ್ಷಕ್ಕೆ ಮುಜುಗರ ತರುವುದಿಲ್ಲ. ಪಕ್ಷ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications