ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು; ಹೋಟೆಲ್‌ಗಳಲ್ಲಿ ಶೇ 10ರಷ್ಟು ದರ ಏರಿಕೆ ಘೋಷಣೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 04; ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆಯಲ್ಲಿ ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ, ತಿಂಡಿ, ಕಾಫಿ, ಟೀ ದರಗಳು ಏರಿಕೆಯಾಗಲಿವೆ. ಇನ್ನೊಂದು ವಾರದಲ್ಲಿ ದರಗಳು ಏರಿಕೆಯಾಗಲಿವೆ.

ಸೋಮವಾರ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಮಹತ್ವದ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಸಂಘದ ಅಧ್ಯಕ್ಷ ಪಿ. ಸಿ. ರಾವ್, "ಇನ್ನೊಂದು ವಾರದಲ್ಲಿ ಹೋಟೆಲ್‌ನಲ್ಲಿ ಬೆಲೆ ಏರಿಕೆ ಮಾಡಲಾಗುವುದು" ಎಂದರು.

Power Tariff Hike; ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ, ಏ. 1ರಿಂದಲೇ ಜಾರಿ Power Tariff Hike; ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ, ಏ. 1ರಿಂದಲೇ ಜಾರಿ

"ಆಯಾ ಹೋಟೆಲ್‌ನವರು ದರ ಏರಿಕೆ ಮಾಡಲಿದ್ದಾರೆ. ಕನಿಷ್ಟ ಶೇ 10ರಷ್ಟು ದರ ಏರಿಕೆ ಮಾಡಲು ನಿರ್ಧಾರ ಮಾಡಲಾಗಿದೆ. ಯಾವ-ಯಾವ ತಿನಿಸುಗಳ ದರ ಏರಿಕೆ ಮಾಡಬೇಕು ಎಂಬುದು ಆಯಾ ಹೋಟೆಲ್‌ನವರಿಗೆ ಬಿಟ್ಟದ್ದು" ಎಂದು ಸ್ಪಷ್ಟಪಡಿಸಿದರು.

ಅಡುಗೆ ಎಣ್ಣೆ ದರ ಏರಿಕೆ; ಬೆಂಗಳೂರಲ್ಲಿ ಬಜ್ಜಿಗೂ ತಟ್ಟಿತು ಬಿಸಿ!ಅಡುಗೆ ಎಣ್ಣೆ ದರ ಏರಿಕೆ; ಬೆಂಗಳೂರಲ್ಲಿ ಬಜ್ಜಿಗೂ ತಟ್ಟಿತು ಬಿಸಿ!

Food Items Price Will Hike 10 Per Cent At Bengaluru Hotels

"ಅಡುಗೆ ಅನಿಲ, ಅಡುಗೆ ಎಣ್ಣೆ ಜೊತೆಗೆ ಈಗ ವಿದ್ಯುತ್ ದರ ಸಹ ಏರಿಕೆಯಾಗಿದೆ. ನಿರಂತರವಾಗಿ ಬೆಲೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ದರ ಏರಿಕೆ ಅನಿವಾರ್ಯವಾಗಿದೆ. ಆದರೆ ದರಗಳನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡುತ್ತಿಲ್ಲ" ಎಂದರು.

ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆಯಾಗಿದೆ: ವಿದ್ಯುತ್ ದರ ಏರಿಕೆ ಬಗ್ಗೆ HDKಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆಯಾಗಿದೆ: ವಿದ್ಯುತ್ ದರ ಏರಿಕೆ ಬಗ್ಗೆ HDK

ತಿಂಡಿಗಳ ದರಗಳು 5 ರೂ. ಮತ್ತು ಕಾಫಿ, ಟೀ ದರಗಳು 2 ರೂ. ಎರಡು ರೂ. ಹೆಚ್ಚಳ ಆಗಲಿದೆ. ಯಾವ-ಯಾವ ತಿಂಡಿಗಳ ದರಗಳನ್ನು ಹೆಚ್ಚಳ ಮಾಡಬೇಕು ಎಂದು ಆಯಾ ಹೋಟೆಲ್‌ನವರು ತೀರ್ಮಾನ ಮಾಡಲಿದ್ದಾರೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ವಿವಿಧ ವಸ್ತುಗಳ ದರಗಳು ಏರಿಕೆಯಾಗಲಿವೆ. ಸದ್ಯ ಬೆಂಗಳೂರು ನಗರದಲ್ಲಿ ಮಾತ್ರ ದರ ಏರಿಕೆ ಮಾಡಲು ನಿರ್ಧಾರ ಮಾಡಲಾಗಿದೆ. ರಾಜ್ಯಾದ್ಯಂತ ದರ ಏರಿಕೆ ಮಾಡುವ ಕುರಿತು ಇನ್ನೂ ತೀರ್ಮಾನ ಕೈಗೊಂಡಿಲ್ಲ.

ಪತ್ರಿಕಾ ಪ್ರಕಟಣೆ; ದರಗಳ ಏರಿಕೆ ಕುರಿತು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಅಡುಗೆ ಎಣ್ಣೆ, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗುತ್ತಲೇ ಇದ್ದು ಹೋಟೆಲ್ ಮಾಲೀಕರಿಗೆ ನುಂಗಲಾರದ ತುತ್ತಾಗಿದೆ.

ಇಂತಹ ಸಂದರ್ಭದಲ್ಲಿ ಹೋಟೆಲ್‌ಗಳಲ್ಲಿ ಬೆಲೆ ಏರಿಕೆ ಅನಿವಾರ್ಯವಾಗಿದೆ. ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆಗಳನ್ನು ಶೇಕಡ 10ರಷ್ಟು ಹೆಚ್ಚಳ ಮಾಡಲು ತೀರ್ಮಾನ ಕೈಗೊಂಡಿದ್ದೇವೆ. ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಆರಂಭವಾದ ಬಳಿಕ ಅಡುಗೆ ಎಣ್ಣೆಗಳ ದರಗಳು ಹೆಚ್ಚಾಗಿವೆ. ಆಗಲೇ ಕೆಲವು ಹೋಟೆಲ್‌ಗಳಲ್ಲಿ ವಡೆ, ಬಜ್ಜಿ, ಪೂರಿ ಮುಂತಾದ ಪದಾರ್ಥಗಳ ಬೆಲೆಗಳನ್ನು ಏರಿಕೆ ಮಾಡಲಾಗಿದೆ.

ಈಗ ಹೋಟೆಲ್ ಮಾಲೀಕರ ಸಂಘದ ತೀರ್ಮಾನದಂತೆ ಆಹಾರ ಪದಾರ್ಥಗಳ ಬೆಲೆಗಳನ್ನು ಶೇ 10ರಷ್ಟು ಏರಿಕೆ ಮಾಡಲು ಒಪ್ಪಿಗೆ ನೀಡಲಾಗಿದೆ. ಯಾವ-ಯಾವ ಪದಾರ್ಥಗಳ ಬೆಲೆಗಳು ಏರಿಕೆಯಾಗಲಿವೆ? ಎಂದು ಕಾದು ನೋಡಬೇಕಿದೆ.

ರಾಜ್ಯಾದ್ಯಂತ ದರ ಏರಿಕೆ?; ಸದ್ಯ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಶೇ 10ರಷ್ಟು ದರ ಏರಿಕೆಗೆ ಒಪ್ಪಿಗೆ ನೀಡಿದೆ. ಎರಡು ದಿನಗಳ ಹಿಂದೆ ಮಾತನಾಡಿದ್ದ ರಾಜ್ಯ ಹೋಟೆಲ್‌ಗಳ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್, "ಸಿಲಿಂಡರ ದರ ಏರಿಕೆಯಾಗಿರುವುದರಿಂದ ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆಗಳನ್ನು ಹೆಚ್ಚಿಸಲೇಬೇಕು. ರಾಜ್ಯದ ಎಲ್ಲಾ ಹೋಟೆಲ್‌ಗಳಲ್ಲಿ ಸ್ಪಲ್ಪ ಪ್ರಮಾಣದಲ್ಲಿ ದರ ಏರುವ ಸಾಧ್ಯತೆ ಇದೆ" ಎಂದು ಹೇಳಿದ್ದರು.

2021ರ ಡಿಸೆಂಬರ್‌ನಿಂದ ವಾಣಿಜ್ಯ ಬಳಕೆಯ ಸಿಲಿಂಡರ್‌ ದರಗಳು ಏರಿಕೆಯಾಗುತ್ತಲೇ ಇದೆ. ಆದರೆ ಹೋಟೆಲ್ ಮಾಲೀಕರು ಆಹಾರ ಪದಾರ್ಥಗಳ ಬೆಲೆ ಏರಿಕೆ ಮಾಡಿರಲಿಲ್ಲ. ಈಗ ಸಿಲಿಂಡರ್, ಅಡುಗೆ ಅನಿಲ, ವಿದ್ಯುತ್ ಸೇರಿದಂತೆ ಎಲ್ಲಾ ವಸ್ತುಗಳ ದರ ಏರಿಕೆಯಾಗಿರುವ ಹಿನ್ನಲೆಯಲ್ಲಿ ದರ ಹೆಚ್ಚಳ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಏಪ್ರಿಲ್ ಮೊದಲ ವಾರದಲ್ಲಿಯೇ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 250 ರೂ. ಹೆಚ್ಚಳವಾಗಿದೆ. ಹೋಟೆಲ್‌ಗಳ ನಿರ್ವಹಣಾ ವೆಚ್ಚ, ಕಾರ್ಮಿಕರ ವೇತನ, ವಿದ್ಯುತ್ ದರ, ತರಕಾರಿ, ದಿನಸಿ ಹೀಗೆ ವಿವಿಧ ದರಗಳ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಹೋಟೆಲ್‌ಗಳಲ್ಲಿ ದರ ಹೆಚ್ಚಳ ಮಾಡಲಾಗುತ್ತಿದೆ.

English summary
The Bruhat Bangalore hotel association decided to hike food items price by 10 per cent. After meeting on Monday president of the association P.C. Rao said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X